ಭದ್ರಾವತಿ ಹಳೇನಗರದ ಭೂತನಗುಡಿ ಭದ್ರಾ ಕುರಿ ಮತ್ತು ಮೇಕೆ ಸಾಕಾಣಿಕೆದಾರರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಬಿ.ಎಚ್ ವಸಂತ್ ಮಜ್ಜಿಗೇನಹಳ್ಳಿ ಹಾಗು ಉಪಾಧ್ಯಕ್ಷರಾಗಿ ಬಸವರಾಜ ಬಿ. ಆನೇಕೊಪ್ಪ ಬುಧವಾರ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಭದ್ರಾವತಿ, ಜ. ೧೯: ಹಳೇನಗರದ ಭೂತನಗುಡಿ ಭದ್ರಾ ಕುರಿ ಮತ್ತು ಮೇಕೆ ಸಾಕಾಣಿಕೆದಾರರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಬಿ.ಎಚ್ ವಸಂತ್ ಮಜ್ಜಿಗೇನಹಳ್ಳಿ ಹಾಗು ಉಪಾಧ್ಯಕ್ಷರಾಗಿ ಬಸವರಾಜ ಬಿ. ಆನೇಕೊಪ್ಪ ಬುಧವಾರ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಒಟ್ಟು ೧೫ ನಿರ್ದೇಶಕರ ಸ್ಥಾನಗಳಿಗೆ ಜ.೧೬ರಂದು ಚುನಾವಣೆ ನಡೆದು ದೂದನಾಯ್ಕ, ಬಿ.ಎಂ ಸಂತೋಷ್, ಎನ್. ಸತೀಶ್, ಎಂ.ಎಸ್ ಸುನಿತ ನಂಬಿಯಾರ್, ಜಿ. ಮೀನಾಕ್ಷಿ, ಎನ್. ನಾಗೇಶ್, ಕೆ.ಎಚ್ ಶಿವಲಿಂಗಪ್ಪ, ಹನುಮಂತನಾಯ್ಕ, ಜೆ. ಪ್ರಕಾಶ್, ಮೌನೇಶ್, ಅನಂತರಾವ್ ನಿಕ್ಕಂ, ಎಚ್. ತಿಪ್ಪೇಶ್, ಬಸವರಾಜ ಬಿ. ಆನೇಕೊಪ್ಪ ಮತ್ತು ಬಿ.ಎಚ್ ವಸಂತ ಮಜ್ಜಿಗೇನಹಳ್ಳಿ ಆಯ್ಕೆಯಾಗಿದ್ದರು.
ಸಹಕಾರ ಸಂಘಗಳ ಹಿರಿಯ ನಿರೀಕ್ಷಕಿ ಎಸ್. ಸುಮಾ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ನೂತನ ಅಧ್ಯಕ್ಷ ಬಿ.ಎಚ್. ವಸಂತ್ ಮತ್ತು ಉಪಾಧ್ಯಕ್ಷ ಬಸವರಾಜ, ಸಂಘದ ಮೂಲಕ ಸರ್ಕಾರದಿಂದ ಲಭ್ಯವಿರುವ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಳ್ಳುವ ನಿಟ್ಟಿನಲ್ಲಿ ಹೆಚ್ಚಿನ ಗಮನ ಹರಿಸಲಾಗುವುದು. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕ್ರಿಯಾಶೀಲವಾಗಿ ಸಂಘವನ್ನು ಮುನ್ನಡೆಸಿಕೊಂಡು ಹೋಗುವ ಜೊತೆಗೆ ಕುರಿ ಮತ್ತು ಮೇಕೆ ಸಾಕಾಣಿಕೆದಾರರಿಗೆ ಸಾಧ್ಯವಾದಷ್ಟು ನೆರವಾಗುವುದಾಗಿ ಭರವಸೆ ನೀಡಿದರು.
ಸಂಘದ ಮಾಜಿ ಅಧ್ಯಕ್ಷ ಲಕ್ಷ್ಮಿ ನಾರಾಯಣ ನೂತನ ಅಧ್ಯಕ್ಷರು, ಉಪಾಧ್ಯಕ್ಷರನ್ನು ಅಭಿನಂದಿಸಿದರು. ಈ ಹಿಂದೆ ವಸಂತ್ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
No comments:
Post a Comment