ಭದ್ರಾವತಿ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ವತಿಯಿಂದ 'ಆಜಾದಿ ಕ ಅಮೃತ್ ಮಹೋತ್ಸವ್' ಅಂಗವಾಗಿ ೩ನೇ ಬಾರಿಗೆ ಶಿವಮೊಗ್ಗ ಶಂಕರ ಕಣ್ಣಿನ ಆಸ್ಪತ್ರೆ, ಸಹಯೋಗದೊಂದಿಗೆ ಕಾರ್ಖಾನೆಯಲ್ಲಿ ನೇತ್ರ ತಪಾಸಣಾ ಶಿಬಿರ ಗುರುವಾರ ಆಯೋಜಿಸಲಾಗಿತ್ತು.
ಭದ್ರಾವತಿ, ಜ. ೬ : ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ವತಿಯಿಂದ 'ಆಜಾದಿ ಕ ಅಮೃತ್ ಮಹೋತ್ಸವ್' ಅಂಗವಾಗಿ ೩ನೇ ಬಾರಿಗೆ ಶಿವಮೊಗ್ಗ ಶಂಕರ ಕಣ್ಣಿನ ಆಸ್ಪತ್ರೆ, ಸಹಯೋಗದೊಂದಿಗೆ ಕಾರ್ಖಾನೆಯಲ್ಲಿ ನೇತ್ರ ತಪಾಸಣಾ ಶಿಬಿರ ಗುರುವಾರ ಆಯೋಜಿಸಲಾಗಿತ್ತು.
ಶಿಬಿರದಲ್ಲಿ ೨೫೦ಕ್ಕೂ ಹೆಚ್ಚು ಕಾಯಂ ಹಾಗು ಗುತ್ತಿಗೆ ಕಾರ್ಮಿಕರು ಪಾಲ್ಗೊಂಡು ಸದುಪಯೋಗ ಪಡೆದುಕೊಂಡರು. ಶಂಕರ ಕಣ್ಣಿನ ಆಸ್ಪತ್ರೆಯ ನೇತ್ರ ತಜ್ಞರಾದ ಡಾ. ಸೃಜನ್, ಡಾ. ಶ್ರೀಲಕ್ಷ್ಮಿ ಮತ್ತು ಡಾ. ಶೃತಿಕ ಬಿನೇವಾರ್‌ರವರ ಮಾರ್ಗದರ್ಶನದಲ್ಲಿ ಕಾರ್ಖಾನೆಯ ಮಾನವ ಸಂಪನ್ಮೂಲ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗಳು ಶಿಬಿರದ ಯಶಸ್ವಿಗೆ ಶ್ರಮಿಸಿದವು.
No comments:
Post a Comment