ಕೋವಿಡ್-೧೯, ಕರ್ಪ್ಯೂ ನಿಯಮ ಉಲ್ಲಂಘಿಸುವವರಿಗೆ ದಂಡ : ಪ್ರಭಾಕರ್
ಪ್ರಭಾಕರ್
ಭದ್ರಾವತಿ, ಜ. ೭: ಕೋವಿಡ್-೧೯ ನಿಯಂತ್ರಿಸುವ ಸಂಬಂಧ ಸರ್ಕಾರ ಜಾರಿಗೊಳಿಸಿರುವ ವಾರಾಂತ್ಯ ಕರ್ಪ್ಯೂ ಯಶಸ್ವಿಗೊಳಿಸಲು ಸಾರ್ವಜನಿಕರು ಸಹಕರಿಸುವಂತೆ ನಗರಸಭೆ ಪರಿಸರ ಅಭಿಯಂತರ ಪ್ರಭಾಕರ್ ಮನವಿ ಮಾಡಿದ್ದಾರೆ.
ಪತ್ರಿಕೆಗೆ ಮಾಹಿತಿ ನೀಡಿದ ಪ್ರಭಾಕರ್‌ರವರು, ನಗರಸಭೆ ವ್ಯಾಪ್ತಿಯಲ್ಲಿ ಸಾರ್ವಜನಿಕರ ಅನಗತ್ಯ ಸಂಚಾರ ನಿರ್ಬಂಧಿಸಲಾಗಿದ್ದು, ಅಗತ್ಯ ಸೇವೆಗಳಿಗೆ ಮಾತ್ರ ಅವಕಾಶ ಕಲ್ಪಿಸಿಕೊಡಲಾಗಿದೆ. ದಿನ ಬಳಕೆಯ ಅಗತ್ಯ ವಸ್ತುಗಳಾದ ಹಾಲು, ಹಣ್ಣು, ತರಕಾರಿ, ದಿನಸಿ ಸಾಮಗ್ರಿಗಳು ಹಾಗು ಕೋಳಿ, ಕುರಿ ಹಾಗು ಮೀನು ಮಾಂಸ ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡಲಾಗಿದ್ದು, ಮಾರಾಟಕ್ಕೆ ಯಾವುದೇ ಸಮಯ ನಿಗದಿ ಮಾಡಿಲ್ಲ. ಆಸ್ಪತ್ರೆ ಮತ್ತು ಔಷಧಿ ಅಂಗಡಿಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ. ಜೊತೆಗೆ ಗೊಬ್ಬರ ಮಾರಾಟ ಅಂಗಡಿಗಳಿಗೂ ಅವಕಾಶ ಕಲ್ಪಿಸಲಾಗಿದೆ ಎಂದರು.
ಉಳಿದಂತೆ ಬಟ್ಟೆ, ಕಬ್ಬಿಣ, ಪ್ಲೈವುಡ್, ಚಿನ್ನಾಬೆಳ್ಳಿ, ಫ್ಯಾನ್ಸಿ ಅಂಗಡಿಗಳು, ಮಾಲ್‌ಗಳು ಸೇರಿದಂತೆ ವಾಣಿಜ್ಯ ಮಳಿಗೆಗಳು, ಗೋಡನ್, ವರ್ಕ್ ಶಾಪ್, ಚಿತ್ರಮಂದಿರಗಳು ಸೇರಿದಂತೆ ಸರ್ಕಾರ ಸೂಚಿಸಿರುವ ಅಂಗಡಿಮುಂಗಟ್ಟುಗಳು ತೆರೆಯುವಂತಿಲ್ಲ. ಹೋಟೆಲ್ ಹಾಗು ರೆಸ್ಟೋರೆಂಟ್‌ಗಳಲ್ಲಿ ಪಾರ್ಸಲ್‌ಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಬಳಸದ ಹಾಗು ಕರ್ಪ್ಯೂ ನಿಯಮಗಳನ್ನು ಉಲ್ಲಂಘಿಸುವವರಿಗೆ ದಂಡ ವಿಧಿಸಲಾಗುವುದು ಎಂದರು.
ಸಾರ್ವಜನಿಕರು ಅನಗತ್ಯವಾಗಿ ಮನೆಯಿಂದ ಹೊರಬರದೆ ಸಹರಿಸುವ ಮೂಲಕ ಕೋವಿಡ್-೧೯ ನಿರ್ಮೂಲನೆಗೆ ಕೈಜೋಡಿಸುವಂತೆ ಮನವಿ ಮಾಡಿದ್ದಾರೆ.
No comments:
Post a Comment