ಭದ್ರಾವತಿ ಬಿ.ಎಚ್ ರಸ್ತೆ ರೈಲ್ವೆ ನಿಲ್ದಾಣ ಸಮೀಪದಲ್ಲಿರುವ ನಗರಸಭೆ ಮಾರುಕಟ್ಟೆಯಲ್ಲಿ ಹಣ್ಣು, ತರಕಾರಿ ಮತ್ತು ಬೀದಿಬದಿ ವ್ಯಾಪಾರಿಗಳಿಗೆ ಇ-ಶ್ರಮ್ ಕಾರ್ಡ್ ನೋಂದಾಣಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಭದ್ರಾವತಿ, ಜ. ೨೯: ಕಾರ್ಮಿಕ ಇಲಾಖೆ ಸಹಯೋಗದೊಂದಿಗೆ ಕರ್ನಾಟಕ ಸ್ಟೇಟ್ ಕನ್ಸ್‌ಸ್ಟ್ರಕ್ಷನ್ ವರ್ಕರ್ಸ್ ಸೆಂಟ್ರಲ್ ಯೂನಿಯನ್ ವತಿಯಿಂದ ಹಣ್ಣು, ತರಕಾರಿ ಮತ್ತು ಬೀದಿಬದಿ ವ್ಯಾಪಾರಿಗಳಿಗೆ ಇ-ಶ್ರಮ್ ಕಾರ್ಡ್ ನೋಂದಾಣಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ನಗರದ ಬಿ.ಎಚ್ ರಸ್ತೆ ರೈಲ್ವೆ ನಿಲ್ದಾಣ ಸಮೀಪದಲ್ಲಿರುವ ನಗರಸಭೆ ಮಾರುಕಟ್ಟೆಯಲ್ಲಿ ನಗರಸಭಾ ಸದಸ್ಯ ಜಾರ್ಜ್ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಕರ್ನಾಟಕ ಸ್ಟೇಟ್ ಕನ್ಸ್‌ಸ್ಟ್ರಕ್ಷನ್ ವರ್ಕರ್ಸ್ ಯೂನಿಯನ್ ತಾಲೂಕು ಶಾಖೆ ಕಾರ್ಯಾಧ್ಯಕ್ಷ ಅಭಿಲಾಷ್ ಅಧ್ಯಕ್ಷತೆ ವಹಿಸಿದ್ದರು.
ವ್ಯಾಪಾರಸ್ಥರಿಗೆ ಇ-ಶ್ರಮ್ ಕಾರ್ಡ್ ಯೋಜನೆ ಕುರಿತು ಮಾಹಿತಿ ನೀಡಲಾಯಿತು. ಕಾರ್ಮಿಕ ಇಲಾಖೆ ಸಿಬ್ಬಂದಿಗಳು ಉಪಸ್ಥಿತರಿದ್ದರು.
No comments:
Post a Comment