ಶ್ರೀ ನಾರಾಯಣ ಗುರು ವಿಚಾರ ವೇದಿಕೆ ವತಿಯಿಂದ ಪ್ರಧಾನಮಂತ್ರಿಗೆ ಮನವಿ
ದೆಹಲಿಯಲ್ಲಿ ಜ.೨೬ರಂದು ನಡೆಯಲಿರುವ ಗಣರಾಜ್ಯೋತ್ಸವ ಮೆರವಣಿಗೆಯಲ್ಲಿ ಬ್ರಹ್ಮರ್ಷಿ ಶ್ರೀ ನಾರಾಯಣ ಗುರುಗಳನ್ನು ಹೊಂದಿರುವ ಸ್ಥಬ್ಧ ಚಿತ್ರವನ್ನು ಆಯ್ಕೆ ಸಮಿತಿ ತಿರಸ್ಕರಿಸುವುದಕ್ಕೆ ಶ್ರೀ ನಾರಾಯಣ ಗುರು ವಿಚಾರ ವೇದಿಕೆ ಭದ್ರಾವತಿ ತಾಲೂಕು ಘಟಕ ಆಕ್ರೋಶ ವ್ಯಕ್ತಪಡಿಸಿದ್ದು, ಆಯ್ಕೆ ಸಮಿತಿ ಪುನಃ ಈ ಸ್ಥಬ್ಧವನ್ನು ಪರಿಗಣಿಸುವಂತೆ ಆಗ್ರಹಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಸೋಮವಾರ ತಹಸೀಲ್ದಾರ್ ಮೂಲಕ ಮನವಿ ಸಲ್ಲಿಸಿದೆ.
ಭದ್ರಾವತಿ, ಜ. ೧೭: ದೆಹಲಿಯಲ್ಲಿ ಜ.೨೬ರಂದು ನಡೆಯಲಿರುವ ಗಣರಾಜ್ಯೋತ್ಸವ ಮೆರವಣಿಗೆಯಲ್ಲಿ ಬ್ರಹ್ಮರ್ಷಿ ಶ್ರೀ ನಾರಾಯಣ ಗುರುಗಳನ್ನು ಹೊಂದಿರುವ ಸ್ಥಬ್ಧ ಚಿತ್ರವನ್ನು ಆಯ್ಕೆ ಸಮಿತಿ ತಿರಸ್ಕರಿಸುವುದಕ್ಕೆ ಶ್ರೀ ನಾರಾಯಣ ಗುರು ವಿಚಾರ ವೇದಿಕೆ ತಾಲೂಕು ಘಟಕ ಆಕ್ರೋಶ ವ್ಯಕ್ತಪಡಿಸಿದ್ದು, ಆಯ್ಕೆ ಸಮಿತಿ ಪುನಃ ಈ ಸ್ಥಬ್ಧವನ್ನು ಪರಿಗಣಿಸುವಂತೆ ಆಗ್ರಹಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಸೋಮವಾರ ತಹಸೀಲ್ದಾರ್ ಮೂಲಕ ಮನವಿ ಸಲ್ಲಿಸಿದೆ.
ವಿದ್ಯೆಯಿಂದ ಸ್ವತಂತ್ರರಾಗಿ, ಸಂಘಟನೆಯಿಂದ ಬಲಯುತರಾಗಿ ಎಂಬ ಸಂದೇಶವನ್ನು ಸಾರಿದ ಸಂತ, ಮಾನವತಾವಾದಿ, ಸಮಾಜ ಸುಧಾರಕ, ಹಿಂದುಳಿದ ವರ್ಗಗಳ, ಶೋಷಿತ ವರ್ಗಗಳ, ತುಳಿತಕ್ಕೆ ಒಳಗಾದ ಸಮುದಾಯದವರನ್ನು ಮೇಲೆತ್ತಿದವರು ಮತ್ತು ಅವರ ಬದುಕಿನಲ್ಲಿ ಆಶಾಕಿರಣ ಮೂಡಿಸಿದವರು ಹಾಗು ಅಕ್ಷರ ಬ್ರಹ್ಮ ಎಂಬ ಹೆಸರಿನಲ್ಲಿ ಮನೆಮತಾಗಿರುವ ಬ್ರಹ್ಮರ್ಷಿ ನಾರಾಯಣ ಗುರುಗಳ ಸ್ಥಬ್ಧ ಚಿತ್ರವನ್ನು ಕೇರಳ ಸರ್ಕಾರ ರಾಜ್ಯದ ಹೆಮ್ಮೆಯ ಪ್ರತೀಕವಾಗಿ ಗಣರಾಜ್ಯೋತ್ಸವ ಮೆರವಣಿಗೆಯಲ್ಲಿ ಪಾಲ್ಗೊಳ್ಳುವುದಕ್ಕೆ ಕಳುಹಿಸಿಕೊಟ್ಟಿದೆ. ಆದರೆ ಆಯ್ಕೆ ಸಮಿತಿ ಈ ಸ್ಥಬ್ಧ ಚಿತ್ರವನ್ನು ನಿರಾಕರಿಸಿರುವುದು ವಿಪರ್ಯಾಸದ ಸಂಗತಿಯಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಲಾಯಿತು.
ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಸೇರಿದಂತೆ ಸರ್ವ ಧರ್ಮಗಳ ಜನರು ಸಹ ಬಾಳ್ವೆಗಳ ಮೂಲಕ ಒಂದೇ ಜಾತಿ, ಒಂದೇ ಧರ್ಮ, ಒಬ್ಬನೇ ದೇವರು, 'ಮನುಷ್ಯ ಕುಲಂ ತಾನೋಂದೇ ವಲಂ' ಎಂಬ ಆದಿಕವಿ ಪಂಪನ ಮಾತುಗಳನ್ನು ತಮ್ಮ ಧಾರ್ಮಿಕ ತತ್ವಾದರ್ಶಗಳ ಮೂಲಕ ನನಸು ಮಾಡುವ ಮೂಲಕ ಜಗತ್ತಿಗೆ ಬೆಳಕು ತೋರಿಸಿದ ಬ್ರಹ್ಮರ್ಷಿ ನಾರಾಯಣ ಗುರುಗಳ ಕೊಡುಗೆ ಅಪಾರವಾಗಿದೆ. ಡಾ. ಬಿ.ಆರ್. ಅಂಬೇಡ್ಕರ್, ಸ್ವಾಮಿ ವಿವೇಕಾನಂದ, ಮಹಾತ್ಮಗಾಂಧಿ, ರವೀಂದ್ರನಾಥ ಠಾಗೂರ್ ಸೇರಿದಂತೆ ದೇಶದ ಮಹಾನ್ ದಾರ್ಶನಿಕರು ಬ್ರಹ್ಮರ್ಷಿ ನಾರಾಯಣ ಗುರುಗಳ ಪ್ರಭಾವಕ್ಕೆ ಒಳಗಾಗಿ ತಮ್ಮ ಬದುಕಿನಲ್ಲಿ ಆದರ್ಶತನಗಳನ್ನು ಅಳವಡಿಸಿಕೊಂಡಿದ್ದಾರೆ. ಇಂತಹ ಮನುಕುಲದ ದಿವ್ಯ ಜ್ಯೋತಿಯನ್ನು ತಿರಸ್ಕರಿಸಿ ಅವಮಾನಿಸಿರುವುದು ಸರಿಯಲ್ಲ ತಕ್ಷಣ ಆಯ್ಕೆ ಸಮಿತಿ ಗಣರಾಜ್ಯೋತ್ಸವ ಮೆರವಣಿಗೆಯಲ್ಲಿ ಭಾಗವಹಿಸಲು ಅವಕಾಶ ಮಾಡಿಕೊಡಬೇಕೆಂದು ಆಗ್ರಹಿಸಲಾಯಿತು.
ವೇದಿಕೆ ಅಧ್ಯಕ್ಷ ನಟರಾಜ್, ಗೌರವಾಧ್ಯಕ್ಷರಾದ ಕೋಗಲೂರು ತಿಪ್ಪೇಸ್ವಾಮಿ, ವಸಂತ ಪೂಜಾರಿ, ಖಜಾಂಚಿ ಮಹೇಶ್, ವಿಕ್ರಂ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment