ಶಿವಮೊಗ್ಗ ಸಿ.ಇ.ಎನ್ ಮತ್ತು ಅಪರಾಧ ಪೊಲೀಸ್ ಠಾಣೆ ವತಿಯಿಂದ ಭದ್ರಾವತಿ ನ್ಯೂಟೌನ್ ಸೇಂಟ್ ಚಾರ್ಲ್ಸ್ ಶಾಲೆಯಲ್ಲಿ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಭದ್ರಾವತಿ, ಜ. ೮: ಇತ್ತೀಚಿನ ದಿನಗಳಲ್ಲಿ ಸೈಬರ್ ಅಪರಾಧಗಳು ಹೆಚ್ಚಾಗುತ್ತಿದ್ದು, ಶಾಲಾ ಹಂತದಲ್ಲಿಯೇ ಮಕ್ಕಳು ಇದರ ಬಗ್ಗೆ ಜಾಗೃತಿ ಹೊಂದಬೇಕೆಂಬ ಆಶಯದೊಂದಿಗೆ ಶಿವಮೊಗ್ಗ ಸಿ.ಇ.ಎನ್ ಮತ್ತು ಅಪರಾಧ ಪೊಲೀಸ್ ಠಾಣೆ ವತಿಯಿಂದ ನ್ಯೂಟೌನ್ ಸೇಂಟ್ ಚಾರ್ಲ್ಸ್ ಶಾಲೆಯಲ್ಲಿ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಠಾಣೆಯ ಸಿಬ್ಬಂದಿಗಳಾದ ಮೋಹನ್, ನಿರ್ಮಲ ಮತ್ತು ಸೂರ್ಯನಾರಾಯಣ ಮಾತನಾಡಿ, ಮಕ್ಕಳಿಗೆ ಸಾಮಾಜಿಕ ಜಾಲತಾಣಗಳ ಮೂಲಕ ವಂಚಿಸುವ ಅಪರಾಧ ಕೃತ್ಯಗಳ ಬಗ್ಗೆ ವಿವರಿಸುವ ಜೊತೆಗೆ ವಹಿಸಬೇಕಾದ ಮುನ್ನಚ್ಚರಿಕೆ ಕ್ರಮಗಳನ್ನು ವಿವರಿಸಿದರು.
ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಕೆ.ಟಿ ಗುರುರಾಜ್ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಲೆಯ ಪ್ರಾಂಶುಪಾಲರು, ಶಿಕ್ಷಕರು, ಸಿಬ್ಬಂದಿಗಳು ಉಪಸ್ಥಿತರಿದ್ದರು.
No comments:
Post a Comment