ಭದ್ರಾವತಿ ತಾಲೂಕಿನ ಶಂಕರಘಟ್ಟ ದೀನಬಂಧು ಸೇವಾ ಟ್ರಸ್ಟ್ ಅಧ್ಯಕ್ಷ ಎಂ.ರಮೇಶ್ ಬ್ಲಾಕ್ ಕಾಂಗ್ರೆಸ್ ಗ್ರಾಮಾಂತರ ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷರಾಗಿ ನೇಮಕಗೊಂಡಿದ್ದು, ಶಿವಮೊಗ್ಗ ಜಿಲ್ಲಾ ಹಿಂದುಳಿದ ಘಟಕದ ಜಿಲ್ಲಾಧ್ಯಕ್ಷ ರಮೇಶ್ ಇಕ್ಕೇರಿ ನೇಮಕಾತಿ ಪತ್ರ ವಿತರಿಸಿ ಎಂ. ರಮೇಶ್ ಅವರನ್ನು ಅಭಿನಂದಿಸಿದರು.
ಭದ್ರಾವತಿ ಜ. 3: ತಾಲೂಕಿನ ಶಂಕರಘಟ್ಟ ದೀನಬಂಧು ಸೇವಾ ಟ್ರಸ್ಟ್ ಅಧ್ಯಕ್ಷ ಎಂ.ರಮೇಶ್ ಬ್ಲಾಕ್ ಕಾಂಗ್ರೆಸ್ ಗ್ರಾಮಾಂತರ ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.
ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಸೋಮವಾರ ಜಿಲ್ಲಾ ಹಿಂದುಳಿದ ವರ್ಗಗಳ ಘಟಕದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಶಿವಮೊಗ್ಗ ಜಿಲ್ಲಾ ಹಿಂದುಳಿದ ಘಟಕದ ಜಿಲ್ಲಾಧ್ಯಕ್ಷ ರಮೇಶ್ ಇಕ್ಕೇರಿ ನೇಮಕಾತಿ ಪತ್ರ ವಿತರಿಸಿ ಎಂ. ರಮೇಶ್ ಅವರನ್ನು ಅಭಿನಂದಿಸಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್.ಎಸ್ ಸುಂದರೇಶ್, ಯುವ ಮುಖಂಡ ಡಾ. ಶ್ರೀನಿವಾಸ್ ಕರಿಯಣ್ಣ, ಮುಖಂಡರಾದ ಸೇವಾದಳದ ವೈ.ಎಚ್ ನಾಗರಾಜ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ರಾಜ್ಯಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಹಾಗು ಜರ್ನಲಿಸಂ ಪಿಜಿ ಡಿಪ್ಲೋಮಾ ಪದವಿ ಪಡೆದಿರುವ ಎಂ. ರಮೇಶ್‌ರವರು ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಸಾರ್ವಜನಿಕ ಸಂಪರ್ಕಾಧಿಕಾರಿಯಾಗಿ ಸೇವೆ ಸಲ್ಲಿಸಿ ಸ್ವಯಂ ನಿವೃತ್ತಿ ಹೊಂದಿದ್ದರು. ಈ ಹಿಂದೆ ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ವಿಧಾನಪರಿಷತ್ ಚುನಾವಣೆಗೆ ಸ್ಪರ್ಧಿಸಿದ್ದರು. ಅಲ್ಲದೇ ಈ ಹಿಂದಿನ ಕಾಂಗ್ರೆಸ್ ಮತ್ತು ಜೆಡಿಎಸ್ ಸ್ರಮ್ಮಿಶ್ರ ಸರ್ಕಾರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ವಿಶೇಷಾಧಿಕಾರಿ ಕರ್ತವ್ಯ ನಿರ್ವಹಿಸಿದ್ದರು. ಈ ನಡುವೆ ದೀನಬಂಧು ಸೇವಾ ಟ್ರಸ್ಟ್ ಅಧ್ಯಕ್ಷರಾಗಿ ಸಮಾಜಸೇವೆಯಲ್ಲೂ ತೊಡಗಿಸಿಕೊಂಡಿದ್ದಾರೆ.
ಬ್ಲಾಕ್ ಕಾಂಗ್ರೆಸ್ ಗ್ರಾಮಾಂತರ ಹಿಂದುಳಿದ ವರ್ಗಗಳ ಘಟಕದ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಎಂ. ರಮೇಶ್ ಅವರಿಗೆ ಶಾಸಕ ಬಿ.ಕೆ ಸಂಗಮೇಶ್ವರ್ ಹಾಗು ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮಾಂತರ ಘಟಕಗಳ ಅಧ್ಯಕ್ಷರು, ವಿವಿಧ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು, ಜಯಕರ್ನಾಟಕ ಸಂಘಟನೆ ಜಿಲ್ಲಾ ಉಪಾಧ್ಯಕ್ಷ, ಗೋಣಿಬೀಡಿನ ತ್ಯಾಗರಾಜ್ ಸೇರಿದಂತೆ ಇನ್ನಿತರರು ಅಭಿನಂದಿಸಿದ್ದಾರೆ.
ಶಾಸಕ ಬಿ.ಕೆ.ಸಂಗಮೇಶ್ವರ್ ಸಲಹೆ ಸೂಚನೆ ಮೇರೆಗೆ ನೂತನ ಜವಾಬ್ದಾರಿ ಒಪ್ಪಿಕೊಂಡಿದ್ದು, ಈಗಾಗಲೇ ಶಾಸಕರ ನೇತೃತ್ವದಲ್ಲಿ ತಾಲೂಕಿನಲ್ಲಿ ಕಾಂಗ್ರೆಸ್ ಪಕ್ಷ ಸದೃಢವಾಗಿದೆ. ಹಿಂದುಳಿದ ವರ್ಗಗಳ ಜನರನ್ನು ಕಾಂಗ್ರೆಸ್ ಪಕ್ಷದ ಮಖ್ಯವಾಹಿನಿಗೆ ತರಲು ಪ್ರಾಮಾಣಿಕವಾಗಿ ಪ್ರಯತ್ನಿಸುವ ಜೊತೆಗೆ ಪಕ್ಷವನ್ನು ಮತ್ತಷ್ಟು ಸದೃಢಗೊಳಿಸಲು ಪ್ರಯತ್ನಿಸುತ್ತೇನೆ.
- ಎಂ.ರಮೇಶ್, ಅಧ್ಯಕ್ಷರು, ಬ್ಲಾಕ್ ಕಾಂಗ್ರೆಸ್ ಗ್ರಾಮಾಂತರ ಹಿಂದುಳಿದ ವರ್ಗಗಳ
No comments:
Post a Comment