Tuesday, January 18, 2022

ಸರಳವಾಗಿ ಜರುಗಿದ ವಿಐಎಸ್‌ಎಲ್ ೯೯ನೇ ಸಂಸ್ಥಾಪನೆ ದಿನ

ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯ ೯೯ನೇ ಸಂಸ್ಥಾಪನೆ ದಿನ ಮಂಗಳವಾರ ಸರಳವಾಗಿ ನಡೆಯಿತು. ಕಾರ್ಖಾನೆಯ ಮುಖ್ಯದ್ವಾರ ಹಾಗು ಶ್ರೀ ವಿನಾಯಕ ಸ್ವಾಮಿ ಮಂಟಪ ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿರುವುದು.
    ಭದ್ರಾವತಿ, ಜ. ೧೮: ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯ ೯೯ನೇ ಸಂಸ್ಥಾಪನೆ ದಿನ ಮಂಗಳವಾರ ಸರಳವಾಗಿ ನಡೆಯಿತು.
    ಕಾರ್ಖಾನೆ ಆಡಳಿತ ಮಂಡಳಿ ವತಿಯಿಂದ ಪ್ರತಿ ವರ್ಷ ವಿಐಎಸ್‌ಎಲ್ ಉತ್ಸವದೊಂದಿಗೆ ಕಾರ್ಖಾನೆಯ ಸಂಸ್ಥಾಪನೆ ದಿನ ಹಾಗು ಸೈಲ್ ಡೇ ಎರಡನ್ನು ಅದ್ದೂರಿಯಾಗಿ ಆಚರಿಸಿಕೊಂಡು ಬರಲಾಗುತ್ತಿದೆ. ಕೋವಿಡ್-೧೯ರ ಹಿನ್ನಲೆಯಲ್ಲಿ ಕಳೆದ ೩ ವರ್ಷಗಳಿಂದ ವಿಐಎಸ್‌ಎಲ್ ಉತ್ಸವ ನಡೆಯದ ಕಾರಣ ಸಂಸ್ಥಾಪನೆ ದಿನ ಹಾಗೂ ಸೈಲ್ ಡೇ ಸರಳವಾಗಿ ಆಚರಿಸಿಕೊಂಡು ಬರಲಾಗುತ್ತಿದೆ.
    ಕಾರ್ಖಾನೆಯ ಆಡಳಿತ ಕಛೇರಿ ಆವರಣದಲ್ಲಿರುವ ಕಾರ್ಖಾನೆಯ ಸಂಸ್ಥಾಪಕರು, ಶ್ರೇಷ್ಠ ತಂತ್ರಜ್ಞಾನಿ, ಭಾರತರತ್ನ ಸರ್.ಎಂ. ವಿಶ್ವೇಶ್ವರಾಯ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು.
ವಿಐಎಸ್‌ಎಲ್ ಅತಿಥಿ ಗೃಹದಲ್ಲಿ ಅಲ್ಲಿನ ಅಽಕಾರಿಗಳು ಹಾಗು ಸಿಬ್ಬಂದಿಗಳಿಂದ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸಂಸ್ಥಾಪನೆ ದಿನ ಆಚರಿಸಲಾಯಿತು.
    ಕಾರ್ಖಾನೆಯ ಕಾರ್ಯಪಾಲಕ ನಿರ್ದೇಶಕ ಸುರಜಿತ್ ಮಿಶ್ರಾ, ಅಪರೇಷನ್ ವಿಭಾಗದ ಮುಖ್ಯ ವ್ಯವಸ್ಥಾಪಕ ಕೆ.ಎಸ್ ಸುರೇಶ್, ಸಾರ್ವಜನಿಕ ಸಂಪರ್ಕಾಧಿಕಾರಿ ಎಲ್. ಪ್ರವೀಣ್‌ಕುಮಾರ್, ಕಾರ್ಮಿಕರ ಸಂಘದ ಅಧ್ಯಕ್ಷ ಜೆ. ಜಗದೀಶ್ ಮತ್ತು ಅಧಿಕಾರಿಗಳ ಸಂಘದ ಪ್ರಧಾನ ಕಾರ್ಯದರ್ಶಿ ಅಜಯ್ ಸೇರಿದಂತೆ ಕಾರ್ಖಾನೆಯ ವಿವಿಧ ವಿಭಾಗಗಳ ಅಧಿಕಾರಿಗಳು, ಕಾರ್ಮಿಕರು, ಗುತ್ತಿಗೆ ಕಾರ್ಮಿಕರು, ಭದ್ರತಾ ಸಿಬ್ಬಂದಿಗಳು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
    ಅತಿಥಿ ಗೃಹದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅತಿಥಿ ಗೃಹದ ಅಧಿಕಾರಿಗಳಾದ ವೀರಣ್ಣ, ಚಂದ್ರಕಾಂತ್, ಸಿಬ್ಬಂದಿಗಳಾದ ಮೋಹನ್, ಪ್ರತಾಪ್, ಪ್ರಭಾಕರ್, ವಿಲ್ಸನ್, ಆದಿನಾರಾಯಣ, ಆಸ್ಲಾಂ, ಸುರೇಶ್, ಸುಜಾತ, ಸಾವಿತ್ರಮ್ಮ, ತುಳಸಿ, ಲಕ್ಷ್ಮಿಬಾಯಿ, ರೂಪ, ಪದ್ಮಮ್ಮ ಮತ್ತು ಪಾರ್ವತಮ್ಮ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
ವಿದ್ಯುತ್ ದೀಪಗಳಿಂದ ಅಲಂಕಾರ:
ಕಳೆದ ಕೆಲವು ದಿನಗಳಿಂದ ಕಾರ್ಖಾನೆಯ ಮುಖ್ಯ ದ್ವಾರಕ್ಕೆ  ಹಾಗು ಮುಂಭಾಗದಲ್ಲಿರುವ ವಿಘ್ನ ನಿವಾರಕ ಶ್ರೀ ವಿನಾಯಕ ಸ್ವಾಮಿ ಮಂಟಪಕ್ಕೆ ಸಂಸ್ಥಾಪನೆ ದಿನದ ಅಂಗವಾಗಿ ಬಣ್ಣ ಬಳಿಯುವ ಕಾರ್ಯ ಕೈಗೊಳ್ಳಲಾಗಿತ್ತು. ಪೂರ್ಣಗೊಂಡಿರುವ ಹಿನ್ನಲೆಯಲ್ಲಿ ಮುಖ್ಯದ್ವಾರ ಹಾಗು ಮಂಟಪವನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿದ್ದು, ರಾತ್ರಿ ಆಕರ್ಷಕವಾಗಿ ಕಂಗೊಳಿಸುತ್ತಿದೆ.


ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯ ೯೯ನೇ ಸಂಸ್ಥಾಪನೆ ದಿನ ಮಂಗಳವಾರ ಸರಳವಾಗಿ ನಡೆಯಿತು. ಕಾರ್ಖಾನೆಯ ಸಂಸ್ಥಾಪಕರಾದ, ಶ್ರೇಷ್ಠ ತಂತ್ರಜ್ಞಾನಿ, ಭಾರತರತ್ನ ಸರ್.ಎಂ ವಿಶ್ವೇಶ್ವರಾಯ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು.

No comments:

Post a Comment