ಭದ್ರಾವತಿ, ಜ. ೨: ಕರ್ನಾಟಕ ದಲಿತ ನೌಕರರ ಒಕ್ಕೂಟದ ವತಿಯಿಂದ ಜ.೩ರಂದು ಸಂಜೆ ೫.೩೦ಕ್ಕೆ ಬಿ.ಎಚ್ ರಸ್ತೆ, ದುರ್ಗಾ ಕಾಂಚನ ಹೋಟೆಲ್ ಸಭಾಂಗಣದಲ್ಲಿ ಅಕ್ಷರದವ್ವ ಶ್ರೀಮಾತೆ ಸಾವಿತ್ರಿ ಬಾಯಿಪುಲೆಯವರ ೧೯೧ನೇ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಡಿಎಸ್‌ಎಸ್ ರಾಜ್ಯ ಖಜಾಂಚಿ ಸತ್ಯ ಭದ್ರಾವತಿ ಕಾರ್ಯಕ್ರಮ ಉದ್ಘಾಟಿಸಲಿದ್ದು, ಕು.ವಿ.ವಿ ಪ್ರಾಧ್ಯಾಪಕ ಜಗನ್ನಾಥ ಕೆ.ಡಾಂಗೆ ಉಪನ್ಯಾಸ ನೀಡಲಿದ್ದಾರೆ.
ತಹಸೀಲ್ದಾರ್ ಆರ್. ಪ್ರದೀಪ್, ಡಿಎಸ್‌ಎಸ್ ಜಿಲ್ಲಾ ಸಂಚಾಲಕ ಚಿನ್ನಯ್ಯ, ನೌಕರರ ಒಕ್ಕೂಟದ ಜಿಲ್ಲಾಧ್ಯಕ್ಷ ಸಿ. ಜಯಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್ ಸೋಮಶೇಖರಯ್ಯ, ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ಎನ್ ಶ್ರೀಹರ್ಷ, ಡಿಎಸ್‌ಎಸ್ ತಾಲೂಕು ಸಂಚಾಲಕ ಕೆ. ರಂಗನಾಥ್ ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು. ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಎ. ತಿಪ್ಪೇಸ್ವಾಮಿ ಕೋರಿದ್ದಾರೆ.
No comments:
Post a Comment