Thursday, January 6, 2022

ಪ್ರಧಾನಿ ಭದ್ರತೆಯಲ್ಲಿ ಲೋಪ : ಪಂಜಾಬ್ ಸರ್ಕಾರದ ವಿರುದ್ಧ ಪ್ರತಿಭಟನೆ

ಪಂಜಾಬ್ ರಾಜ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಭದ್ರತೆಯಲ್ಲಿ ಉಂಟಾದ ಲೋಪವನ್ನು ಖಂಡಿಸಿ ಪಂಜಾಬ್ ಕಾಂಗ್ರೆಸ್ ಸರ್ಕಾರದ ವಿರುದ್ಧ ಗುರುವಾರ ಸಂಜೆ ಭದ್ರಾವತಿಯಲ್ಲಿ ಯುವ ಮೋರ್ಚಾ ವತಿಯಿಂದ ನಗರದ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
    ಭದ್ರಾವತಿ, ಜ. ೬: ಪಂಜಾಬ್ ರಾಜ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಭದ್ರತೆಯಲ್ಲಿ ಉಂಟಾದ ಲೋಪವನ್ನು ಖಂಡಿಸಿ ಪಂಜಾಬ್ ಕಾಂಗ್ರೆಸ್ ಸರ್ಕಾರದ ವಿರುದ್ಧ ಗುರುವಾರ ಸಂಜೆ ಯುವ ಮೋರ್ಚಾ ವತಿಯಿಂದ ನಗರದ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
    ಪಂಜಾಬ್ ಸರ್ಕಾರ ದೇಶ ದ್ರೋಹಿ ಸರ್ಕಾರವಾಗಿದೆ ಟೈರ್ ಸುಡುವ ಮೂಲಕ ಪ್ರತಿಭಟಿಸಿ ಆಕ್ರೋಶ ವ್ಯಕ್ತಪಡಿಸಲಾಯಿತು. ಯುವಮೋರ್ಚಾ ಅಧ್ಯಕ್ಷ ವಿಜಯ್ ಪ್ರತಿಭಟನೆ ನೇತೃತ್ವ ವಹಿಸಿದ್ದರು.
    ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಬಿ.ಕೆ ಶ್ರೀನಾಥ್, ಜಿ. ಧರ್ಮಪ್ರಸಾದ್, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಜಿ. ಹರಿಕೃಷ್ಣ, ಹಾಗೂ ಬಿಜೆಪಿ ತಾಲೂಕು ಮಂಡಲ ಅಧ್ಯಕ್ಷ ಎಂ. ಪ್ರಭಾಕರ್,  ರಾಜ್ಯ ಕಾರ್ಯಕಾರಿಣಿ ಸದಸ್ಯ ಅನುಪ್, ಜಿಲ್ಲಾ ಕಾರ್ಯದರ್ಶಿ ಧನುಷ್ ಹಾಗೂ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಗೋಕುಲ ಕೃಷ್ಣ, ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ನಕುಲ್, ಎಸ್ ಸಿ ಮೋರ್ಚಾ ಅಧ್ಯಕ್ಷ ಪಿ. ಗಣೇಶ್ ರಾವ್ ಹಾಗೂ ರೈತ ಮೋರ್ಚಾ ಅಧ್ಯಕ್ಷ ನಾಗರಾಜ್ ಅಂಬೋರೆ ಹಾಗೂ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾದ ಕೃಷ್ಣಮೂರ್ತಿ, ರಾಮನಾಥ್ ಬರ್ಗೆ, ಉಪಾಧ್ಯಕ್ಷ ಕಿರಣ್, ವಿಜಯ್, ರಾಘವೇಂದ್ರ, ಹೇಮಂತ, ಲಕ್ಷ್ಮಣ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

ಚಿತ್ರ: ಡಿ೬-ಬಿಡಿವಿಟಿ೭

No comments:

Post a Comment