Tuesday, January 18, 2022

೩-೪ ವರ್ಷಗಳಿಂದ ಒಂದೇ ಕಡೆ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು, ಸಿಬ್ಬಂದಿಗಳನ್ನು ವರ್ಗಾವಣೆಗೊಳಿಸಿ


ರಾಜ್ಯದಲ್ಲಿರುವ ಸರ್ಕಾರಿ ಕಛೇರಿಗಳಲ್ಲಿ ೩-೪ ವರ್ಷಗಳಿಂದ ಒಂದೇ ಕಡೆ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು, ಸಿಬ್ಬಂದಿಗಳನ್ನು ಬೇರೆಡೆಗೆ ವರ್ಗಾವಣೆಗೊಳಿಸುವಂತೆ ಹಾಗು ನ್ಯಾಯ ಕೇಳಲು ಸರ್ಕಾರಿ ಕಛೇರಿಗಳಿಗೆ ಬರುವ  ಸಾರ್ವಜನಿಕರ ಮೇಲೆ ಸುಳ್ಳು ದೂರು ದಾಖಲಿಸುವ ಸಿಬ್ಬಂದಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಜನಾತದಳ (ಸಂಯುಕ್ತ) ಕರ್ನಾಟಕ ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಎಸ್. ಗೌಡ ನೇತೃತ್ವದಲ್ಲಿ ಮಂಗಳವಾರ ಭದ್ರಾವತಿಯಲ್ಲಿ ತಹಸೀಲ್ದಾರ್ ಮೂಲಕ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಮನವಿ ಸಲ್ಲಿಸಲಾಯಿತು.
    ಭದ್ರಾವತಿ, ಜ. ೧೮: ರಾಜ್ಯದಲ್ಲಿರುವ ಸರ್ಕಾರಿ ಕಛೇರಿಗಳಲ್ಲಿ ೩-೪ ವರ್ಷಗಳಿಂದ ಒಂದೇ ಕಡೆ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು, ಸಿಬ್ಬಂದಿಗಳನ್ನು ಬೇರೆಡೆಗೆ ವರ್ಗಾವಣೆಗೊಳಿಸುವಂತೆ ಹಾಗು ನ್ಯಾಯ ಕೇಳಲು ಸರ್ಕಾರಿ ಕಛೇರಿಗಳಿಗೆ ಬರುವ  ಸಾರ್ವಜನಿಕರ ಮೇಲೆ ಸುಳ್ಳು ದೂರು ದಾಖಲಿಸುವ ಸಿಬ್ಬಂದಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಜನಾತದಳ (ಸಂಯುಕ್ತ) ಕರ್ನಾಟಕ ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಎಸ್. ಗೌಡ ನೇತೃತ್ವದಲ್ಲಿ ಮಂಗಳವಾರ ತಹಸೀಲ್ದಾರ್ ಮೂಲಕ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಮನವಿ ಸಲ್ಲಿಸಲಾಯಿತು.
    ರಾಜ್ಯದ ಬಹುತೇಕ ಸರ್ಕಾರಿ ಕಛೇರಿಗಳಲ್ಲಿ ೩-೪ ವರ್ಷಗಳಿಂದ ಒಂದೇ ಕಡೆ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು, ಸಿಬ್ಬಂದಿಗಳು ಕಂಡು ಬರುತ್ತಿದ್ದು, ತಕ್ಷಣ ಇವರನ್ನು ಬೇರೆಡೆಗೆ ವರ್ಗಾಹಿಸಬೇಕು. ಇಲ್ಲವಾದಲ್ಲಿ ಸರ್ಕಾರಿ ಸೇವೆಗಳಲ್ಲಿ ವ್ಯತಿರಿಕ್ತ ಪರಿಣಾಮ ಉಂಟಾಗಲಿದೆ. ಅಲ್ಲದೆ ಸಾರ್ವಜನಿಕರು ಸರ್ಕಾರಿ ಸೇವೆ ಮೇಲೆ ಹೊಂದಿರುವ ವಿಶ್ವಾಸ ಕಳೆದುಕೊಳ್ಳುವಂತಾಗಲಿದೆ. ಈ ಹಿನ್ನಲೆಯಲ್ಲಿ ತಕ್ಷಣ ಒಂದೇ ಕಡೆ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು, ಸಿಬ್ಬಂದಿಗಳನ್ನು ಬೇರೆಡೆಗೆ ವರ್ಗಾಹಿಸಬೇಕೆಂದು ಆಗ್ರಹಿಸಲಾಗಿದೆ.
    ನ್ಯಾಯ ಕೇಳುವುದು ಪ್ರತಿಯೊಬ್ಬರ ಸಂವಿಧಾನ ಬದ್ಧ ಹಕ್ಕು ಎಂಬುದನ್ನು ಯಾರು ಸಹ ಮರೆಯಬಾರದು. ಕೆಲವು ಸರ್ಕಾರಿ ಅಧಿಕಾರಿಗಳು ಸಂವಿಧಾನದ ಆಶಯವನ್ನು ಮರೆತು ಹೋರಾಟಗಾರರು ನ್ಯಾಯ ಕೇಳಲು ಸರ್ಕಾರಿ ಕಚೇರಿಗಳಿಗೆ ಬಂದರೆ ಅವರ ವಿರುದ್ಧ ಸುಳ್ಳು ದೂರುಗಳನ್ನು ದಾಖಲಿಸುತ್ತಿದ್ದಾರೆ. ಅಧಿಕಾರಿ ಈ ನಡೆ ಪ್ರಜಾಪ್ರಭುತ್ವಕ್ಕೆ ಮಾರಕವಾಗಿದೆ. ತಕ್ಷಣ ಇಂತಹ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಲಾಗಿದೆ.
    ಮುಖಂಡ ಬಿ. ಗಂಗಾಧರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ತಹಸೀಲ್ದಾರ್ ಆರ್. ಪ್ರದೀಪ್ ನಿಕ್ಕಮ್ ಮನವಿ ಸ್ವೀಕರಿಸಿದರು.

No comments:

Post a Comment