ಭದ್ರಾವತಿ ಹೊಸಮನೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಉದ್ಯೋಗ ಮಾಹಿತಿ ಮತ್ತು ಮಾರ್ಗದರ್ಶನ ಕಾರ್ಯಕ್ರಮವನ್ನು ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಜಿ ಧನಂಜಯ ಉದ್ಘಾಟಿಸಿದರು.
ಭದ್ರಾವತಿ, ಜ. ೯: ಇಂದಿನ ಯುವ ಜನತೆ ಪದವಿ ಜೊತೆಗೆ ನೈಪುಣ್ಯತೆ ಹಾಗು ಕೌಶಲ್ಯತೆ ಹೊಂದಿರಬೇಕು ಎಂದು ಹೊಸಮನೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಜಿ ಧನಂಜಯ ಹೇಳಿದರು.
ಅವರು ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಉದ್ಯೋಗ ಮಾಹಿತಿ ಮತ್ತು ಮಾರ್ಗದರ್ಶನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳಿಗೆ ಅಧ್ಯಯನದ ಜೊತೆಗೆ ಉದ್ಯೋಗದ ಬಗ್ಗೆ ಮಾಹಿತಿ ಅಗತ್ಯವಾಗಿದೆ. ಅಲ್ಲದೆ ವಿದ್ಯಾವಂತ ಯುವ ಸಮೂಹಕ್ಕೆ ಆರ್ಥಿಕ ನೆರವಿನ ಅಗತ್ಯವಿದೆ. ಸ್ವಯಂ ಉದ್ಯೋಗಕ್ಕೆ ಹೆಚ್ಚಿನ ಆದ್ಯತೆ ನೀಡಿ, ಈ ಮೂಲಕ ಪ್ರಗತಿ ಸಾಧಿಸುವ ನಿಟ್ಟಿನಲ್ಲಿ ಬದ್ಧತೆ ಹಾಗು ಕ್ರಿಯಾಶೀಲತೆ ಬೆಳೆಸಿಕೊಳ್ಳಬೇಕೆಂದರು.
ಉದ್ಯೋಗ ಅಧಿಕಾರಿ ಮಂಜುನಾಥ್ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು ಮಾಹಿತಿ ನೀಡಿದರು. ಉಪನ್ಯಾಸಕ ಡಾ. ಬಸವರಾಜ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕಾಲೇಜಿನ ಬೋಧಕ ಹಾಗು ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಅವರ ಅಭಿಪ್ರಾಯಗಳನ್ನು ಪಡೆಯಲಾಯಿತು.
No comments:
Post a Comment