ಭದ್ರಾವತಿ ಹಳೇನಗರದ ಶ್ರೀ ಕಾಳಿಕಾಂಬ ದೇವಿ ಸಮುದಾಯ ಭವನದಲ್ಲಿ ಗುರುವಾರ ಕಾರ್ಮಿಕ ಇಲಾಖೆ ಸಹಯೋಗದೊಂದಿಗೆ ಕರ್ನಾಟಕ ಸ್ಟೇಟ್ ಕನ್ಸ್‌ಸ್ಟ್ರಕ್ಷನ್ ವರ್ಕರ್ಸ್ ಸೆಂಟ್ರಲ್ ಯೂನಿಯನ್ ವತಿಯಿಂದ ಮಡಿವಾಳ ಹಾಗು ಸವಿತಾ ಸಮಾಜದ ವೃತ್ತಿ ಬಾಂಧವರಿಗೆ, ಚಿನ್ನಬೆಳ್ಳಿ (ಅಕ್ಕಸಾಲಿಗರು) ಕೆಲಸಗಾರರಿಗೆ ಮತ್ತು ಟೈಲರ್‌ಗಳಿಗೆ ಇ-ಶ್ರಮ್ ಕಾರ್ಡ್ ನೋಂದಾಣಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಭದ್ರಾವತಿ, ಜ. ೨೭: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ದೇಶದಲ್ಲಿರುವ ಎಲ್ಲಾ ರೀತಿಯ ಅಸಂಘಟಿತ ಕಾರ್ಮಿಕರ ಸಂಕಷ್ಟಗಳಿಗೆ ನೆರವಾಗಬೇಕೆಂಬ ಉದ್ದೇಶದಿಂದ ಇ-ಶ್ರಮ್ ಕಾರ್ಡ್ ಯೋಜನೆ ಜಾರಿಗೆ ತಂದಿದ್ದು, ಇದರ ಸದುಪಯೋಗ ಪಡೆದುಕೊಳ್ಳುವಂತೆ ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಕೆ. ಮಂಜುನಾಥ್ ಹೇಳಿದರು.
ಅವರು ಗುರುವಾರ ಹಳೇನಗರದ ಶ್ರೀ ಕಾಳಿಕಾಂಬ ದೇವಿ ಸಮುದಾಯ ಭವನದಲ್ಲಿ ಕಾರ್ಮಿಕ ಇಲಾಖೆ ಸಹಯೋಗದೊಂದಿಗೆ ಕರ್ನಾಟಕ ಸ್ಟೇಟ್ ಕನ್ಸ್‌ಸ್ಟ್ರಕ್ಷನ್ ವರ್ಕರ್ಸ್ ಸೆಂಟ್ರಲ್ ಯೂನಿಯನ್ ವತಿಯಿಂದ ಮಡಿವಾಳ ಹಾಗು ಸವಿತಾ ಸಮಾಜದ ವೃತ್ತಿ ಬಾಂಧವರಿಗೆ, ಚಿನ್ನಬೆಳ್ಳಿ (ಅಕ್ಕಸಾಲಿಗರು) ಕೆಲಸಗಾರರಿಗೆ ಮತ್ತು ಟೈಲರ್‌ಗಳಿಗೆ ಇ-ಶ್ರಮ್ ಕಾರ್ಡ್ ನೋಂದಾಣಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ದೇಶದಲ್ಲಿ ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಮುಂದಾಗಿರುವ ಕೇಂದ್ರ ಸರ್ಕಾರ ಇ-ಶ್ರಮ್ ಕಾರ್ಡ್ ಮೂಲಕ ಹಲವಾರು ಸೌಲಭ್ಯಗಳನ್ನು ಕಲ್ಪಿಸಿಕೊಡಲು ಮುಂದಾಗಿದೆ. ಎಲ್ಲರೂ ಇದರ ಸದುಪಯೋಗ ಪಡೆದುಕೊಳ್ಳುವ ಜೊತೆಗೆ ಇತರರಿಗೂ ಈ ಯೋಜನೆ ಬಗ್ಗೆ ಮಾಹಿತಿ ನೀಡುವಂತೆ ಮನವಿ ಮಾಡಿದರು.
ಯೋಜನೆ ಕುರಿತು ಕಾರ್ಮಿಕ ನಿರೀಕ್ಷಕಿ ಮುಮ್ತಾಜ್ ಬೇಗಂ ಮತ್ತು ಕರ್ನಾಟಕ ಸ್ಟೇಟ್ ಕನ್ಸ್‌ಸ್ಟ್ರಕ್ಷನ್ ವರ್ಕರ್ಸ್ ಸೆಂಟ್ರಲ್ ಯೂನಿಯನ್ ಜಿಲ್ಲಾ ಕಾರ್ಯಾಧ್ಯಕ್ಷ ಸುಂದರ್ ಬಾಬು ಮಾಹಿತಿ ನೀಡಿದರು.
ಯೂನಿಯನ್ ತಾಲೂಕು ಅಧ್ಯಕ್ಷ ಚಂದ್ರಶೇಖರ್ ಅಧ್ಯಕ್ಷತೆ ವಹಿಸಿದ್ದರು. ತಾಂತ್ರಿಕ ಸಲಹೆಗಾರ ಮನೋಹರ್, ಪ್ರಮುಖರಾದ ಶಿವಕುಮಾರ್, ಕೃಷ್ಣಾನಂದ ರಾಯ್ಕರ್, ರವಿ, ಸಚಿನ್ ವರ್ಣಿಕರ್, ವಿಜಯ್, ದಿವ್ಯರಾಜ್, ನಿರ್ಮಲ ಸೇವಾ ಕೇಂದ್ರ ಹಾಗು ಸವಿತಾ ಸಮಾಜ ಮತ್ತು ಮಡಿವಾಳ ಸಮಾಜದ ಪ್ರಮುಖರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಯೂನಿಯನ್ ಕಾರ್ಯಾಧ್ಯಕ್ಷ ಅಭಿಲಾಷ್ ಕಾರ್ಯಕ್ರಮ ನಿರೂಪಿಸಿದರು. ಇ-ಶ್ರಮ್ ಕಾರ್ಡ್ ನೋಂಧಾಣಿ ಮಾಡಿಸಿಕೊಂಡವರಿಗೆ ಜ.೩೦ರ ಭಾನುವಾರ ನಗರದ ಪಾಂಡುರಂಗ ಕಲ್ಯಾಣ ಮಂಟಪದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಕಾರ್ಡ್ ವಿತರಣೆ ನಡೆಯಲಿದೆ.
No comments:
Post a Comment