ಶ್ರೀ ನಿಜಶರಣ ಅಂಬಿಗರ ಚೌಡಯ್ಯನವರ ೯೦೨ನೇ ಜಯಂತಿ ಕಾರ್ಯಕ್ರಮ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗು ಗಂಗಾಮತಸ್ಥ ಸಮಾಜದ ವತಿಯಿಂದ ಶುಕ್ರವಾರ ಭದ್ರಾವತಿ ತಾಲೂಕು ಕಛೇರಿ ಸಭಾಂಗಣದಲ್ಲಿ ಸರಳವಾಗಿ ಆಚರಿಸಲಾಯಿತು.
ಭದ್ರಾವತಿ, ಜ. ೨೧: ಶ್ರೀ ನಿಜಶರಣ ಅಂಬಿಗರ ಚೌಡಯ್ಯನವರ ೯೦೨ನೇ ಜಯಂತಿ ಕಾರ್ಯಕ್ರಮ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗು ಗಂಗಾಮತಸ್ಥ ಸಮಾಜದ ವತಿಯಿಂದ ಶುಕ್ರವಾರ ತಾಲೂಕು ಕಛೇರಿ ಸಭಾಂಗಣದಲ್ಲಿ ಸರಳವಾಗಿ ಆಚರಿಸಲಾಯಿತು.
ಕೊರೋನಾ ೩ನೇ ಅಲೆ ನಡುವೆ ಶ್ರೀ ನಿಜಶರಣ ಅಂಬಿಗರ ಚೌಡಯ್ಯನವರ ಜಯಂತಿಯನ್ನು ಸರ್ಕಾರದ ಮಾರ್ಗಸೂಚಿಗಳನ್ವಯ ಸರಳವಾಗಿ ಆಚರಿಸಲಾಯಿತು. ಚೌಡಯ್ಯ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಸೂಚಿಸಲಾಯಿತು. ತಹಸೀಲ್ದಾರ್ ಆರ್. ಪ್ರದೀಪ್ ನಿಕ್ಕಮ್ ಅಧ್ಯಕ್ಷತೆ ವಹಿಸಿದ್ದರು. ಗಂಗಾಮತಸ್ಥ ಸಮಾಜದ ಅಧ್ಯಕ್ಷ ಯಲ್ಲಪ್ಪ ಸೇರಿದಂತೆ ಸಮಾಜದ ಪ್ರಮುಖರು, ತಹಸೀಲ್ದಾರ್ ಗ್ರೇಡ್-೨ ರಂಗಮ್ಮ ಸೇರಿದಂತೆ ತಾಲೂಕು ಕಛೇರಿ ಅಧಿಕಾರಿಗಳು, ಸಿಬ್ಬಂದಿಗಳು ಭಾಗವಹಿಸಿದ್ದರು.
No comments:
Post a Comment