ಪರಿಣಾಮ ಕಡಿಮೆ, ಸಾವು ಶೂನ್ಯ
ಭದ್ರಾವತಿ, ಜ. ೨೨: ಕೊರೋನಾ ೩ನೇ ಅಲೆ ತಾಲೂಕಿನಲ್ಲಿ ವ್ಯಾಪಕವಾಗಿ ಹರಡುತ್ತಿದ್ದು, ಶುಕ್ರವಾರ ಒಂದೇ ದಿನ ೧೬೧ ಸೋಂಕು ದೃಢಪಟ್ಟಿವೆ. ಈ ಮೂಲಕ ಜನತೆಯಲ್ಲಿ ಮತ್ತಷ್ಟು ಆತಂಕ ಹೆಚ್ಚಾಗಿದೆ.
ಸೋಂಕಿನ ಪ್ರಮಾಣ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಇದುವರೆಗೂ ಸೋಂಕಿಗೆ ಒಳಗಾದವರ ಸಂಖ್ಯೆ ೧೧೧೧ಕ್ಕೆ ತಲುಪಿದೆ. ಆದರೆ ಇದುವರೆಗೂ ಯಾವುದೇ ಸಾವು ಸಂಭವಿಸಿಲ್ಲ. ತಾಲೂಕಿನಲ್ಲಿ ಒಟ್ಟು ೪ ಕಂಟೈನ್‌ಮೆಂಟ್ ಝೋನ್‌ಗಳಿದ್ದು, ಈ ಹಿಂದೆ ಗರಿಷ್ಠ ೫ ಸೋಂಕುಗಳು ಕಂಡು ಬಂದಲ್ಲಿ ಆ ವ್ಯಾಪ್ತಿಯನ್ನು ಕಂಟೈನ್‌ಮೆಂಟ್ ಝೋನ್ ಪ್ರದೇಶವಾಗಿ ಘೋಷಿಸಲಾಗುತ್ತಿತ್ತು. ಸೋಂಕಿನ ಪರಿಣಾಮ ಕಡಿಮೆ ಇರುವ ಹಿನ್ನಲೆಯಲ್ಲಿ ಇದೀಗ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಸೋಂಕು ಕಾಣಿಸಿಕೊಂಡ ವ್ಯಾಪ್ತಿಯಲ್ಲಿ ಮಾತ್ರ ಕಂಟೈನ್‌ಮೆಂಟ್ ಝೋನ್ ಮಾಡಲಾಗುತ್ತಿದೆ.
ಸರ್ಕಾರಿ ಹಾಗೂ ಖಾಸಗಿ ಕಛೇರಿಗಳಲ್ಲಿ ಹಾಗು ಬ್ಯಾಂಕ್‌ಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು, ಸಿಬ್ಬಂದಿಗಳಲ್ಲಿ, ಶಾಲಾ-ಕಾಲೇಜುಗಳ ಶಿಕ್ಷಕರು, ಸಿಬ್ಬಂದಿಗಳು ಹಾಗು ವಿದ್ಯಾರ್ಥಿಗಳಲ್ಲಿ ಸೋಂಕು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದು, ಇದರಿಂದಾಗಿ ಹೆಚ್ಚಿನ ಆತಂಕ ಉಂಟಾಗಿದೆ. ಕೊರೋನ ಸೋಂಕು ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಸಹಕಾರದೊಂದಿಗೆ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ ಮತ್ತು ನಗರಸಭೆ ಆಡಳಿತಗಳು ಅಗತ್ಯ ಕ್ರಮ ಕೈಗೊಳ್ಳುತ್ತಿವೆ.
No comments:
Post a Comment