ನಗರಸಭೆ ವತಿಯಿಂದ ಸೋಂಕು ನಿವಾರಕ ಸಿಂಪಡಣೆ
ಭದ್ರಾವತಿ, ಜ. ೧೧: ನಗರದ ತರೀಕೆರೆ ರಸ್ತೆಯಲ್ಲಿರುವ ಲೋಕೋಪಯೋಗಿ ಇಲಾಖೆಯ ಕಛೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಬಹುತೇಕ ಸಿಬ್ಬಂದಿಗೆ ಕೋವಿಡ್ ಸೋಂಕು ತಗುಲಿರುವುದು ತಿಳಿದು ಬಂದಿದೆ.
ಕಛೇರಿಯಲ್ಲಿ ಕಾರ್ಯಪಾಲಕ ಇಂಜಿನಿಯರ್(ಎಇಇ) ಸೇರಿದಂತೆ ಸುಮಾರು ೧೧ ಮಂದಿ ಕರ್ತವ್ಯ ನಿರ್ವಹಿಸುತ್ತಿದ್ದು, ಪೈಕಿ ಕಾರ್ಯಪಾಲಕ ಇಂಜಿನಿಯರ್ ಸೇರಿದಂತೆ ೭ ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ.
ಕಛೇರಿ ಸಿಬ್ಬಂದಿಗಳಲ್ಲಿ ಸೋಂಕು ದೃಢಪಟ್ಟಿರುವ ಹಿನ್ನಲೆಯಲ್ಲಿ ನಗರಸಭೆ ವತಿಯಿಂದ ಮಂಗಳವಾರ ಮಧ್ಯಾಹ್ನ ಸೋಂಕು ನಿವಾರಕ ಸಿಂಪಡಿಸಲಾಗಿದೆ. ಒಂದು ದಿನದ ಮಟ್ಟಿಗೆ ಕಛೇರಿಯನ್ನು ಸಂಪೂರ್ಣವಾಗಿ ಸೀಲ್‌ಡೌನ್ ಮಾಡಲಾಗಿದೆ ಎಂದು ತಿಳಿದು ಬಂದಿದೆ.
No comments:
Post a Comment