ಭದ್ರಾವತಿಯಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಳೇನಗರದ ಕನಕ ಮಂಟಪ ಮೈದಾನದಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ೭೩ನೇ ಗಣ ರಾಜ್ಯೋತ್ಸವದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಗಣ್ಯರನ್ನು ಸನ್ಮಾನಿಸಿ ಗೌರವಿಸಲಾಯಿತು.
ಭದ್ರಾವತಿ, ಜ. ೨೬: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಳೇನಗರದ ಕನಕ ಮಂಟಪ ಮೈದಾನದಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ೭೩ನೇ ಗಣ ರಾಜ್ಯೋತ್ಸವದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಗಣ್ಯರನ್ನು ಸನ್ಮಾನಿಸಿ ಗೌರವಿಸಲಾಯಿತು.
ಕಂದಾಯ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಉಪತಹಸೀಲ್ದಾರ್‌ಗಳಾದ ಅರಸು, ನಾರಾಯಣಗೌಡ, ನಗರಸಭೆ ಕಂದಾಯಾಧಿಕಾರಿ ರಾಜ್‌ಕುಮಾರ್, ಜಾನಪದ ಹಾಗು ರಂಗಕಲಾವಿದ ಜಿ. ದಿವಾಕರ್, ಕ್ಷೇತ್ರ ಶಿಕ್ಷಣ ಸಂಯೋಜಕ ಎಸ್.ಕೆ ರವಿಕುಮಾರ್, ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯ ಅರವಳಿಕೆ ತಜ್ಞೆ ಡಾ. ಜೆ.ಎಂ ಪ್ರೀತಿ, ಹೆರಿಗೆ ಹಾಗು ಸ್ತ್ರೀ ರೋಗ ತಜ್ಞೆ ಡಾ. ಎಚ್.ಎಲ್ ಹರ್ಷ, ಸೀನಿಯರ್ ಗ್ರೇಡ್ ನರ್ಸ್ ಪೋಲೆನ್ ಸುನೀತ, ಹಿಂದೂಸ್ತಾನಿ ಗಾಯಕ ಹಾಗು ಕೀರ್ತನಕಾರ ಸಿ. ಶಿವರಾಜು, ಭಾಷಾ ಶಿಕ್ಷಕ ಜಿ. ಉಮಾಪತಿ, ರಂಗಕಲಾವಿದ ಹೊಸಹಳ್ಳಿ ದಾಳೇಗೌಡ, ಮಕ್ಕಳ ಸಹಾಯವಾಣಿ ಕೇಂದ್ರದ ಕೋ ಆರ್ಡಿನೇಟರ್ ಸುಮಿತ್ರ, ದೈಹಿಕ ಶಿಕ್ಷಕಿ ಎನ್. ಬನಶಂಕರಮ್ಮ, ಶಿಕ್ಷಕ ರೇಣುಕಪ್ಪ ಎನ್. ಮಡಿವಾಳರ, ಮುಖ್ಯೋಪಾಧ್ಯಾಯರಾದ ಸಿಸ್ಟರ್ ತೇರೆಸಾ, ಗಿರೀಶ್, ಗುಮಾಸ್ತ ವೆಂಕಟೇಶ್, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯ ರಹಮತುಲ್ಲಾ, ಜೆ. ಬಸವರಾಜು, ದೈಹಿಕ ಶಿಕ್ಷಕ ಆರ್. ರವಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಗಣ್ಯರನ್ನು ಸನ್ಮಾನಿಸಿ ಗೌರವಿಸಲಾಯಿತು.
ಶಾಸಕ ಬಿ.ಕೆ ಸಂಗಮೇಶ್ವರ್, ತಹಸೀಲ್ದಾರ್ ಪ್ರದೀಪ್ ಆರ್. ನಿಕ್ಕಮ್, ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ಉಪಾಧ್ಯಕ್ಷ ಚನ್ನಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಸುದೀಪ್‌ಕುಮಾರ್, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ ಸತೀಶ್, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿದ್ದಬಸಪ್ಪ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಮೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ಟಿ. ಸೋಮಶೇಖರಯ್ಯ, ನಗರಸಭೆ ಸದಸ್ಯರು, ಸರ್ಕಾರದ ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿಗಳು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಗಣ್ಯರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment