ಪ್ರಕರಣ ದಾಖಲು : ಓರ್ವನ ಬಂಧನ
ಭದ್ರಾವತಿ, ಜ. ೧೧: ಅಪ್ರಾಪ್ತ ಬಾಲಕಿಯೊಬ್ಬಳನ್ನು ಲಾಡ್ಜ್‌ಗೆ ಕರೆದೊಯ್ದು ಅತ್ಯಾಚಾರ ನಡೆಸಲಾಗಿದೆ ಎಂಬ ದೂರು ನಗರದ ಪೇಪರ್‌ಟೌನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಕಳೆದ ೨ ದಿನಗಳ ಹಿಂದೆ ಘಟನೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ನಿದಿಗೆ ನಿವಾಸಿ ಉಮೇಶ್(೨೮) ಎಂಬಾತನನ್ನು ಬಂಧಿಸಲಾಗಿದೆ. ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗುತ್ತಿದೆ.
ಬಾರಂದೂರು ಗ್ರಾಮದ ಹೋಟೆಲ್ ಒಂದರಲ್ಲಿ ಕೆಲಸ ಮಾಡುತ್ತಿರುವ ಮಹಿಳೆಯೊಬ್ಬರ ಸುಮಾರು ೧೫ ವರ್ಷದ ಪುತ್ರಿಯನ್ನು ಶಾಲೆಗೆ ಹೋಗುವಾಗ ಮಾರ್ಗ ಮಧ್ಯದಲ್ಲಿ ತಡೆದು ತರೀಕೆರೆಗೆ ಕರೆದೊಯ್ದು ಲಾಡ್ಜ್ ಒಂದರಲ್ಲಿ ಅತ್ಯಾಚಾರ ನಡೆಸಲಾಗಿದ್ದು, ಅಲ್ಲದೆ ಈ ವಿಚಾರ ಯಾರಿಗಾದರೂ ತಿಳಿಸಿದ್ದಲ್ಲಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕಲಾಗಿದೆ ಎಂಬ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಈ ನಡುವೆ ಪೊಲೀಸರು ಬಾಲಕಿಯನ್ನು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿ ಆಪ್ತ ಸಮಾಲೋಚನೆಗೆ ಒಳಪಡಿಸಿದ್ದು, ಬಾಲಕಿಯಿಂದ ಇನ್ನೂ ಹೆಚ್ಚಿನ ಮಾಹಿತಿ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.
No comments:
Post a Comment