ಉಡುಪಿ ಪೇಜಾವರ ಮಠದ ಶ್ರೀ ವಿಶ್ವೇಶ್ವತೀರ್ಥ ಸ್ವಾಮೀಜಿಯವರ ೨ನೇ ವರ್ಷದ ಆರಾಧನಾ ಮಹೋತ್ಸವ ಭದ್ರಾವತಿ ಹಳೇನಗರದ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಜರುಗಿತು.
ಭದ್ರಾವತಿ, ಜ. ೬: ಉಡುಪಿ ಪೇಜಾವರ ಮಠದ ಶ್ರೀ ವಿಶ್ವೇಶ್ವತೀರ್ಥ ಸ್ವಾಮೀಜಿಯವರ ೨ನೇ ವರ್ಷದ ಆರಾಧನಾ ಮಹೋತ್ಸವ ಹಳೇನಗರದ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಜರುಗಿತು.
ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದಿಂದ ರಾಘವೇಂದ್ರ ಸ್ವಾಮಿ ಮಠದ ವರೆಗೆ ಶ್ರೀಗಳ ಭಾವಚಿತ್ರದೊಂದಿಗೆ ಮೆರವಣಿಗೆ ನಡೆಸಲಾಯಿತು. ವೇದಘೋಷದೊಂದಿಗೆ ಆರಂಭಗೊಂಡ ಮೆರವಣಿಗೆಗೆ ದೇವಸ್ಥಾನದ ಪ್ರಧಾನ ಅರ್ಚಕ ವೇದಬ್ರಹ್ಮ ರಂಗನಾಥ ಶರ್ಮ ಮತ್ತು ಸಹಾಯಕ ಅರ್ಚಕ ಶ್ರೀನಿವಾಸ್ ಚಾಲನೆ ನೀಡಿದರು.
ಯಾರಿಂದಲೂ ಆರ್ಥಿಕ ನೆರವು ಆಪೇಕ್ಷಿಸದೆ ಪೇಜಾವರ ಶ್ರೀಗಳ ಶಿಷ್ಯರಾದ ಪ್ರಮೋದ್‌ಕುಮಾರ್ ಮತ್ತು ಶ್ರೀನಿಧಿ ಪವನ್‌ಕುಮಾರ್‌ರವರು ತಮ್ಮ ಸ್ವಂತ ಹಣದಲ್ಲಿ ಕಾರ್ಯಕ್ರಮ ನೆರವೇರಿಸಿಕೊಟ್ಟರು.
ಗುರುರಾಜಸೇವಾ ಸಮಿತಿ ಅಧ್ಯಕ್ಷರಾದ ಮುರಳಿಧರ ತಂತ್ರಿ, ನಿರಂಜನ್ ಆಚಾರ್ ಉಪಾಧ್ಯಕ್ಷರಾದ ಸುಮಾ, ರಾಘವೇಂದ್ರ ತಂತ್ರಿ, ಪ್ರಧಾನ ಕಾರ್ಯದರ್ಶಿ ರಮಾಕಾಂತ್, ಪ್ರಧಾನ ಅರ್ಚಕ ಸತ್ಯನಾರಾಯಣ, ಜಯತೀರ್ಥ, ಶ್ರೀಪತಿ, ಮಧು, ಗುರುರಾಜ್ ಚೌತಾಯಿ, ವಾಸುದೇವಮೂರ್ತಿ, ನಾಗರಾಜ್ ಉಪಧ್ಯಾಯ, ರಂಗಣ್ಣ, ಗಿರಿ, ಕೃಷ್ಣಮೂರ್ತಿ, ರಾಘವೇಂದ್ರ ಅಡಿಗ, ಪ್ರಹ್ಲಾದ, ಉದಯಕುಮಾರ್, ಅನಿಲ, ಹರಿದಾಸ ಭಜನಾ ಮಂಡಳಿ, ಕರಾವಳಿ ವಿಪ್ರ ಬಳಗ ಭಜನಾ ಮಂಡಳಿ, ಹರಿಪ್ರಿಯಾ ಭಜನಾ ಮಂಡಳಿ, ಜ್ಞಾನವಾಹಿನಿ ಭಜನಾ ಮಂಡಳಿ ಮತ್ತು ವಿವಿಧ ಸಂಘ ಸಂಸ್ಥೆಗಳು ಪಾಲ್ಗೊಂಡಿದ್ದವು.
No comments:
Post a Comment