ಭದ್ರಾವತಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿದ್ಯಾಮಂದಿರ ವಲಯ ಲೋಯರ್ ಹುತ್ತಾ ಕಾರ್ಯಕ್ಷೇತ್ರದ ವತಿಯಿಂದ ನೂತನವಾಗಿ ಆರಂಭಿಸಲಾಗಿರುವ ಗ್ರಾಹಕ ಸೇವಾ ಕೇಂದ್ರ(ಸಿಎಸ್‌ಸಿ)ಕ್ಕೆ ನಗರಸಭಾ ಸದಸ್ಯ ಜಾರ್ಜ್ ಭಾನುವಾರ ಚಾಲನೆ ನೀಡಿದರು.
ಭದ್ರಾವತಿ, ಜ. ೩೦: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿದ್ಯಾಮಂದಿರ ವಲಯ ಲೋಯರ್ ಹುತ್ತಾ ಕಾರ್ಯಕ್ಷೇತ್ರದ ವತಿಯಿಂದ ನೂತನವಾಗಿ ಆರಂಭಿಸಲಾಗಿರುವ ಗ್ರಾಹಕ ಸೇವಾ ಕೇಂದ್ರ(ಸಿಎಸ್‌ಸಿ)ಕ್ಕೆ ನಗರಸಭಾ ಸದಸ್ಯ ಜಾರ್ಜ್ ಭಾನುವಾರ ಚಾಲನೆ ನೀಡಿದರು.
ತಾಲೂಕಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ಒಟ್ಟು ೪೩ ಗ್ರಾಹಕ ಸೇವಾ ಕೇಂದ್ರಗಳು ಮಂಜೂರಾಗಿದ್ದು, ಗ್ರಾಮಾಂತರ ಹಾಗು ನಗರ ಪ್ರದೇಶ ವ್ಯಾಪ್ತಿಯಲ್ಲಿ ಹಂತ ಹಂತವಾಗಿ ಆರಂಭಗೊಳ್ಳಲಿವೆ. ಈ ಗ್ರಾಹಕ ಸೇವಾ ಕೇಂದ್ರಗಳು ಸಾರ್ವಜನಿಕರಿಗೆ ರಿಯಾಯಿತಿ ದರದಲ್ಲಿ ಕೇಂದ್ರ ಹಾಗು ರಾಜ್ಯ ಸರ್ಕಾರಗಳ ವಿವಿಧ ಸೇವೆಗಳನ್ನು ಒದಗಿಸಲಿವೆ.
ಕರ್ನಾಟಕ ಸ್ಟೇಟ್ ಕನ್ಸ್‌ಸ್ಟ್ರಕ್ಷನ್ ವರ್ಕರ್ಸ್ ಸೆಂಟ್ರಲ್ ಯೂನಿಯನ್ ತಾಲೂಕು ಕಾರ್ಯಾಧ್ಯಕ್ಷ ಅಭಿಲಾಷ್, ಯೋಜನೆಯ ವಲಯ ಮೇಲ್ವಿಚಾರಕ ವೀರೇಶ್, ಕಛೇರಿ ಕಾರ್ಯಕರ್ತರಾದ ಅವಿನಾಶ್, ಪ್ರೀತಮ್, ಸೇವಾ ಪ್ರತಿನಿಧಿಗಳಾದ ರಾಧ, ಕಲ್ಪನಾ ಮತ್ತು ಸದಸ್ಯರು ಉಪಸ್ಥಿತರಿದ್ದರು.
No comments:
Post a Comment