ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ೨ನೇ ಬಾರಿಗೆ ಸದಸ್ಯರಾಗಿ ಆಯ್ಕೆಯಾದ ಹಿನ್ನಲೆಯಲ್ಲಿ ನಗರದ ಹಿಂದೂ ಮಹಾಸಭಾ ಹಿಂದೂ ರಾಷ್ಟ್ರ ಸೇನಾ ಶ್ರೀ ವಿನಾಯಕ ಸೇವಾ ಸಮಿತಿ ಅಧ್ಯಕ್ಷ, ತಮಿಳು ಸಮಾಜದ ಮುಖಂಡ ವಿ. ಕದಿರೇಶ್ ನೇತೃತ್ವದಲ್ಲಿ ತಮಿಳು ಸಮಾಜದ ಮುಖಂಡರು ಸಂಸದ ಬಿ.ವೈ ರಾಘವೇಂದ್ರರನ್ನು ಶುಕ್ರವಾರ ಶಿವಮೊಗ್ಗದಲ್ಲಿ ಭೇಟಿ ಮಾಡಿ ಸನ್ಮಾನಿಸಿ ಅಭಿನಂದಿಸಿದರು.
ಭದ್ರಾವತಿ, ಜ. ೨೨: ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ೨ನೇ ಬಾರಿಗೆ ಸದಸ್ಯರಾಗಿ ಆಯ್ಕೆಯಾದ ಹಿನ್ನಲೆಯಲ್ಲಿ ನಗರದ ಹಿಂದೂ ಮಹಾಸಭಾ ಹಿಂದೂ ರಾಷ್ಟ್ರ ಸೇನಾ ಶ್ರೀ ವಿನಾಯಕ ಸೇವಾ ಸಮಿತಿ ಅಧ್ಯಕ್ಷ, ತಮಿಳು ಸಮಾಜದ ಮುಖಂಡ ವಿ. ಕದಿರೇಶ್ ನೇತೃತ್ವದಲ್ಲಿ ತಮಿಳು ಸಮಾಜದ ಮುಖಂಡರು ಸಂಸದ ಬಿ.ವೈ ರಾಘವೇಂದ್ರರನ್ನು ಶುಕ್ರವಾರ ಶಿವಮೊಗ್ಗದಲ್ಲಿ ಭೇಟಿ ಮಾಡಿ ಸನ್ಮಾನಿಸಿ ಅಭಿನಂದಿಸಿದರು.
ಭಾರತೀಯ ಜನತಾ ಪಕ್ಷದ ಹಿರಿಯ ಮುಖಂಡರು, ನಗರಸಭಾ ಸದಸ್ಯರಾದ ವಿ. ಕದಿರೇಶ್ ಈ ಹಿಂದಿನ ಅವಧಿಯಲ್ಲೂ ಸೂಡಾ ಸದಸ್ಯರಾಗಿ ನೇಮಕಗೊಂಡಿದ್ದರು. ಇದೀಗ ಪುನಃ ೨ನೇ ಬಾರಿ ಆಯ್ಕೆಯಾಗಿದ್ದು, ತಮಿಳು ಸಮಾಜದವನ್ನು ಗುರುತಿಸಿ ಪ್ರೋತ್ಸಾಹಿಸುತ್ತಿರುವ ಸಂಸದ ಬಿ.ವೈ ರಾಘವೇಂದ್ರರನ್ನು ವಿಶೇಷವಾಗಿ ಸನ್ಮಾನಿಸಿ ಅಭಿನಂದಿಸಲಾಯಿತು.
ತಮಿಳು ಸಮಾಜದ ಪ್ರಮುಖರಾದ ಎಂ. ರಾಜು, ನಗರಸಭೆ ಮಾಜಿ ಅಧ್ಯಕ್ಷ ಆರ್. ಕರುಣಾಮೂರ್ತಿ, ಹಿರಿಯ ಪತ್ರಕರ್ತ ಕಣ್ಣಪ್ಪ, ನಗರಸಭಾ ಸದಸ್ಯ ಮಣಿ ಎಎನ್‌ಎಸ್, ಯುವ ಮುಖಂಡ ಕೆ. ಮಂಜುನಾಥ್, ಬಿಎಸ್‌ಪಿ ಪಕ್ಷದ ತಾಲೂಕು ಅಧ್ಯಕ್ಷ ರಹಮತುಲ್ಲಾಖಾನ್(ಸರದಾರ್) ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment