ಭದ್ರಾವತಿ ತಾಲೂಕಿನ ಬಿಆರ್‌ಪಿ ಶಂಕರಘಟ್ಟ ಕುವೆಂಪು ವಿಶ್ವವಿದ್ಯಾನಿಲಯ ಸಮೀಪ ಶುಕ್ರವಾರ ಕರ್ನಾಟಕ ರತ್ನ, ತ್ರಿವಿಧ ದಾಸೋಹಿ, ತುಮಕೂರು ಸಿದ್ದಗಂಗಾಮಠದ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ೩ನೇ ವರ್ಷದ ಪುಣ್ಯಸ್ಮರಣೆ ಆಚರಿಸಲಾಯಿತು.
ಭದ್ರಾವತಿ, ಜ. ೨೧: ತಾಲೂಕಿನ ಬಿಆರ್‌ಪಿ ಶಂಕರಘಟ್ಟ ಕುವೆಂಪು ವಿಶ್ವವಿದ್ಯಾನಿಲಯ ಸಮೀಪ ಶುಕ್ರವಾರ ಕರ್ನಾಟಕ ರತ್ನ, ತ್ರಿವಿಧ ದಾಸೋಹಿ, ತುಮಕೂರು ಸಿದ್ದಗಂಗಾಮಠದ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ೩ನೇ ವರ್ಷದ ಪುಣ್ಯಸ್ಮರಣೆ ಆಚರಿಸಲಾಯಿತು.
ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ಭಕ್ತ ವೃಂದದವರು ಕಳೆದ ೩ ವರ್ಷಗಳಿಂದ ನಿರಂತರವಾಗಿ ಶ್ರೀಗಳ ಪುಣ್ಯಸ್ಮರಣೆ ಆಚರಿಸಿಕೊಂಡು ಬರುತ್ತಿದ್ದು, ಶ್ರೀಗಳ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಗೌರವ ನಮನ ಸಲ್ಲಿಸಲಾಯಿತು.
ಪ್ರತಿವರ್ಷ ಪುಣ್ಯಸ್ಮರಣೆಯಂದು ಅನ್ನಸಂತರ್ಪಣೆ ನೆರವೇರಿಸಿಕೊಂಡು ಬರಲಾಗುತ್ತಿದೆ. ಸಿಂಗನಮನೆ, ಶಂಕರಘಟ್ಟ ಸೇರಿದಂತೆ ಸುತ್ತಮುತ್ತಲ ಗ್ರಾಮಗಳ ಮುಖಂಡರು, ಗ್ರಾಮಸ್ಥರು ಪಾಲ್ಗೊಂಡಿದ್ದರು.
No comments:
Post a Comment