Saturday, January 8, 2022

ನಿಯಮ ಪಾಲಿಸದ ಅಂಗಡಿಮುಂಗಟ್ಟುಗಳ ಮೇಲೆ ತಹಸೀಲ್ದಾರ್ ದಾಳಿ : ಎಚ್ಚರಿಕೆ

ವಾರಾಂತ್ಯ ಕರ್ಪ್ಯೂ ಹಿನ್ನಲೆಯಲ್ಲಿ ತಹಸೀಲ್ದಾರ್ ಆರ್. ಪ್ರದೀಪ್ ನಿಕ್ಕಮ್ ಶನಿವಾರ ರಂಗಪ್ಪ ವೃತ್ತದಲ್ಲಿ ನಿಯಮ ಪಾಲಿಸದ ಅಂಗಡಿಮುಂಗಟ್ಟುಗಳ ಮೇಲೆ ದಾಳಿ ನಡೆಸಿ ಎಚ್ಚರಿಕೆ ನೀಡಿದರು.
    ಭದ್ರಾವತಿ, ಜ. ೮: ವಾರಾಂತ್ಯ ಕರ್ಪ್ಯೂ ಹಿನ್ನಲೆಯಲ್ಲಿ ತಹಸೀಲ್ದಾರ್ ಆರ್. ಪ್ರದೀಪ್ ನಿಕ್ಕಮ್ ಶನಿವಾರ ರಂಗಪ್ಪ ವೃತ್ತದಲ್ಲಿ ನಿಯಮ ಪಾಲಿಸದ ಅಂಗಡಿಮುಂಗಟ್ಟುಗಳ ಮೇಲೆ ದಾಳಿ ನಡೆಸಿ ಎಚ್ಚರಿಕೆ ನೀಡಿದರು.
    ನಗರದ ಪ್ರಮುಖ ಜನಸಂದಣಿ ಸ್ಥಳವಾಗಿರುವ ರಂಗಪ್ಪ ವೃತ್ತದಲ್ಲಿ ಅನಗತ್ಯವಾಗಿ ಸಂಚರಿಸುವ ವಾಹನಗಳು ಹಾಗು ಶಿವಮೊಗ್ಗ-ಭದ್ರಾವತಿ ನಡುವೆ ಸಂಚರಿಸುವ ಟ್ಯಾಕ್ಸಿಗಳ ತಪಾಸಣೆ ನಡೆಸಿ ಮಾಸ್ಕ್ ಧರಿಸದ ಪ್ರಯಾಣಿಕರಿಗೆ ಎಚ್ಚರಿಕೆ ನೀಡಿದರು. ಅಲ್ಲದೆ ಅನಗತ್ಯವಾಗಿ ಸಂಚರಿಸುವವರ ಮೇಲೆ ಸೂಕ್ತ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚಿಸಿದರು.


ವಾರಾಂತ್ಯ ಕರ್ಪ್ಯೂ ಹಿನ್ನಲೆಯಲ್ಲಿ ತಹಸೀಲ್ದಾರ್ ಆರ್. ಪ್ರದೀಪ್ ನಿಕ್ಕಮ್ ಶನಿವಾರ ರಂಗಪ್ಪ ವೃತ್ತದಲ್ಲಿ ಶಿವಮೊಗ್ಗ-ಭದ್ರಾವತಿ ನಡುವೆ ಸಂಚರಿಸುವ ಟ್ಯಾಕ್ಸಿಗಳ ತಪಾಸಣೆ ನಡೆಸಿ ಮಾಸ್ಕ್ ಧರಿಸದ ಪ್ರಯಾಣಿಕರಿಗೆ ಎಚ್ಚರಿಕೆ ನೀಡಿದರು.


No comments:

Post a Comment