ಭದ್ರಾವತಿ ಹಳೆನಗರದ ದೊಡ್ಡಕುರುಬರ ಬೀದಿ ಶ್ರೀ ರೇಣುಕಾ ಎಲ್ಲಮ್ಮ ದೇವಸ್ಥಾನದಲ್ಲಿ ಸೋಮವಾರ ಹುಣ್ಣಿಮೆಯಂದು ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ನಡೆಯಿತು.
ಭದ್ರಾವತಿ, ಜ. ೧೭: ಹಳೆನಗರದ ದೊಡ್ಡಕುರುಬರ ಬೀದಿ ಶ್ರೀ ರೇಣುಕಾ ಎಲ್ಲಮ್ಮ ದೇವಸ್ಥಾನದಲ್ಲಿ ಸೋಮವಾರ ಹುಣ್ಣಿಮೆಯಂದು ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ನಡೆಯಿತು.
ಪ್ರತಿವರ್ಷದಂತೆ ಈ ಬಾರಿ ಸಹ ಸೇವಾಕರ್ತರಾದ ಮಾಲಾ ಜೋಗಮ್ಮನವರ ನೇತ್ರತ್ವದಲ್ಲಿ ಧಾರ್ಮಿಕ ಆಚರಣೆಗಳು ಜರುಗಿದವು. ಬೆಳಿಗ್ಗೆ ಭದ್ರಾ ನದಿಯಿಂದ ಗಂಗಾ ಪೂಜೆಯೊಂದಿಗೆ ಶ್ರೀ ರೇಣುಕಾ ಎಲ್ಲಮ್ಮ ದೇವಿಯನ್ನು ಉತ್ಸವ ಮೆರವಣಿಗೆ ಮೂಲಕ ತರಲಾಯಿತು. ನಂತರ ಅಮ್ಮನವರಿಗೆ ವಿಶೇಷ ಅಲಂಕಾರದೊಂದಿಗೆ ಪೂಜೆ ಸಲ್ಲಿಸಲಾಯಿತು.
ಮಹಾಮಂಗಳರತಿ, ತೀರ್ಥಪ್ರಸಾದ ವಿನಿಯೋಗ, ಮಧ್ಯಾಹ್ನ ಅನ್ನಸಂತರ್ಪಣೆ ಕಾರ್ಯಕ್ರಮಗಳು ಜರುಗಿದವು. ಕೇಶವರಾವ್ ಬೋರತ್ ಮತ್ತು ಪರಶುರಾಮರಾವ್ ಬೋರತ್ ಅವರಿಂದ ಗೊಂದಳ್ ಸೇವೆ ನೆರವೇರಿತು.
No comments:
Post a Comment