ಭದ್ರಾವತಿ, ಜ. ೨೩: ನಗರಸಭೆ ನೂತನ ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಸುದೀಪ್‌ಕುಮಾರ್ ಜ.೨೪ರ ಸೋಮವಾರ ತಮ್ಮ ಕಛೇರಿಯಲ್ಲಿ ಅಧಿಕಾರ ಸ್ವೀಕರಿಸಲಿದ್ದಾರೆ.
ನಗರಸಭೆ ವಾರ್ಡ್ ನಂ. ೧೨ರ ಕಾಂಗ್ರೆಸ್ ಪಕ್ಷದ ಸದಸ್ಯರಾಗಿರುವ ಸುದೀಪ್‌ಕುಮಾರ್ ಮೊದಲ ಬಾರಿಗೆ ನಗರಸಭೆಗೆ ಆಯ್ಕೆಯಾಗಿದ್ದು, ಮೊದಲ ಅವಧಿಯಲ್ಲಿಯೇ ಸ್ಥಾಯಿ ಸಮಿತಿ ಅಧ್ಯಕ್ಷರಾಗುವ ಮೂಲಕ ಗಮನ ಸೆಳೆದಿದ್ದಾರೆ.
ಇವರ ತಂದೆ ವಿ. ಕದಿರೇಶ್ ನಗರಸಭೆ ಹಿರಿಯ ಸದಸ್ಯರಾಗಿದ್ದು, ಜೊತೆಗೆ ಇದೀಗ ೨ನೇ ಬಾರಿಗೆ ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯರಾಗಿದ್ದಾರೆ. ಮಗ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದರೇ, ಇವರು ಬಿಜೆಪಿ ಪಕ್ಷದಲ್ಲಿ ಗುರುತಿಸಿಕೊಂಡಿರುವುದು ವಿಶೇಷವಾಗಿದೆ.
No comments:
Post a Comment