ಭದ್ರಾವತಿ ನಗರಸಭೆ ನೂತನ ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಸುದೀಪ್‌ಕುಮಾರ್ ಸೋಮವಾರ ತಮ್ಮ ಕಛೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.
ಭದ್ರಾವತಿ, ಜ. ೨೪: ನಗರಸಭೆ ನೂತನ ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಸುದೀಪ್‌ಕುಮಾರ್ ಸೋಮವಾರ ತಮ್ಮ ಕಛೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.
ಶಾಸಕ ಬಿ.ಕೆ ಸಂಗಮೇಶ್ವರ್ ಸ್ಥಾಯಿ ಸಮಿತಿ ಅಧ್ಯಕ್ಷರ ಕಛೇರಿಯನ್ನು ಉದ್ಘಾಟಿಸಿದರು. ನಂತರ ನೂತನ ಅಧ್ಯಕ್ಷರನ್ನು ಅಭಿನಂದಿಸಿದರು. ನಗರಸಭೆ ಅಧ್ಯಕ್ಷೆ ಗೀತಾರಾಜ್‌ಕುಮಾರ್, ಉಪಾಧ್ಯಕ್ಷ ಚನ್ನಪ್ಪ, ಸ್ಥಾಯಿ ಸಮಿತಿ ಸದಸ್ಯರಾದ ವಿ. ಕದಿರೇಶ್, ಮಣಿ ಎಎನ್‌ಎಸ್, ಬಷೀರ್ ಅಹಮದ್, ಲತಾ ಚಂದ್ರಶೇಖರ್, ರಿಯಾಜ್ ಅಹಮದ್, ಶೃತಿ ವಸಂತ್, ಜಯಶೀಲ ಸುರೇಶ್, ರೇಖಾ ಪ್ರಕಾಶ್, ಉದಯಕುಮಾರ್ ಮತ್ತು ಕೋಟೇಶ್ವರ ರಾವ್ ಉಪಸ್ಥಿತರಿದ್ದರು.
ಸದಸ್ಯರಾದ ಟಿಪ್ಪುಸುಲ್ತಾನ್, ಜಾರ್ಜ್, ಆರ್. ಶ್ರೇಯಸ್(ಚಿಟ್ಟೆ), ಅನುಸುಧಾ ಮೋಹನ್, ಪಲ್ಲವಿ ದಿಲೀಪ್, ಸವಿತಾ ಉಮೇಶ್, ಕಾಂತರಾಜ್, ಸರ್ವಮಂಗಳ ಭೈರಪ್ಪ, ಬಿ.ಎಂ ಮಂಜುನಾಥ್, ಮಾಜಿ ಸದಸ್ಯರಾದ ರೇಣುಕಾ ಸುದೀಪ್‌ಕುಮಾರ್, ಅನಿಲ್‌ಕುಮಾರ್, ಆಂಜನಪ್ಪ ಹಾಗು ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ಪಾಲ್ಗೊಂಡಿದ್ದರು.
ನಗರಸಭೆ ವಾರ್ಡ್ ನಂ. ೧೨ರ ಕಾಂಗ್ರೆಸ್ ಪಕ್ಷದ ಸದಸ್ಯರಾಗಿರುವ ಸುದೀಪ್‌ಕುಮಾರ್ ಮೊದಲ ಬಾರಿಗೆ ನಗರಸಭೆಗೆ ಆಯ್ಕೆಯಾಗಿದ್ದು, ಮೊದಲ ಅವಧಿಯಲ್ಲಿಯೇ ಸ್ಥಾಯಿ ಸಮಿತಿ ಅಧ್ಯಕ್ಷರಾಗುವ ಮೂಲಕ ಗಮನ ಸೆಳೆದಿದ್ದಾರೆ.
No comments:
Post a Comment