Monday, February 28, 2022

ರಾಜ್ಯದ ರೈತರು ಬೆಲೆದಿರುವ ರಾಗಿ ರು.೪ ಸಾವಿರ ಬೆಂಬಲ ಬೆಲೆಯೊಂದಿಗೆ ಖರೀದಿಸಿ

ಜೆಡಿಯು ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಎಸ್. ಗೌಡರಿಂದ ಪ್ರಧಾನಿಗೆ ಮನವಿ


ರಾಜ್ಯದಲ್ಲಿ ರೈತರು ಬೆಳೆದಿರುವ ರಾಗಿ ಬೆಳೆಗೆ ಕೇಂದ್ರ ಸರ್ಕಾರ ಸೂಕ್ತ ಬೆಂಬಲ ಬೆಲೆ ನೀಡುವ ಮೂಲಕ ಖರೀದಿಸುವಂತೆ ಒತ್ತಾಯಿಸಿ ಜನತಾದಳ(ಸಂಯುಕ್ತ) ಕರ್ನಾಟಕ ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಎಸ್. ಗೌಡ ಸೋಮವಾರ ಭದ್ರಾವತಿ ತಾಲೂಕು ಕಛೇರಿ ಮಿನಿ ವಿಧಾನಸೌಧದ ಮುಂಭಾಗ ಪ್ರತಿಭಟನೆ ನಡೆಸಿದರು.
    ಭದ್ರಾವತಿ, ಫೆ. ೨೮: ರಾಜ್ಯದಲ್ಲಿ ರೈತರು ಬೆಳೆದಿರುವ ರಾಗಿ ಬೆಳೆಗೆ ಕೇಂದ್ರ ಸರ್ಕಾರ ಸೂಕ್ತ ಬೆಂಬಲ ಬೆಲೆ ನೀಡುವ ಮೂಲಕ ಖರೀದಿಸುವಂತೆ ಒತ್ತಾಯಿಸಿ ಜನತಾದಳ(ಸಂಯುಕ್ತ) ಕರ್ನಾಟಕ ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಎಸ್. ಗೌಡ ಸೋಮವಾರ ತಾಲೂಕು ಕಛೇರಿ ಮಿನಿ ವಿಧಾನಸೌಧದ ಮುಂಭಾಗ ಪ್ರತಿಭಟನೆ ನಡೆಸಿ ಪ್ರಧಾನ ಮಂತ್ರಿಗಳಿಗೆ ತಹಸೀಲ್ದಾರ್ ಮೂಲಕ ಮನವಿ ಸಲ್ಲಿಸಿದರು.
    ಕೇಂದ್ರ ಸರ್ಕಾರ ಕಳೆದ ಬಾರಿ ೪.೧೦ ಲಕ್ಷ ಟನ್ ರಾಗಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಿತ್ತು. ಅಲ್ಲದೆ ಸಿರಿ ಧಾನ್ಯಗಳ ಸಾಲಿನಲ್ಲಿ ರಾಗಿಯನ್ನು ಸೇರಿಸುವ ಜೊತೆಗೆ ಪಡಿತರ ವಿತರಣೆಗೂ ಅವಕಾಶ ಮಾಡಿಕೊಡಲಾಗಿತ್ತು. ಈ ಹಿನ್ನಲೆಯಲ್ಲಿ ರಾಜ್ಯದ ಹಳೇ ಮೈಸೂರ ಭಾಗದ ಬಯಲು ಸೀಮೆಯಲ್ಲಿ ಈ ಬಾರಿ ಅತಿ ಹೆಚ್ಚು ರಾಗಿ ಬೆಳೆಯನ್ನು ಬೆಳೆಯಲಾಗಿದೆ. ಆದರೆ ಇದೀಗ ಕೇಂದ್ರ ಸರ್ಕಾರ ಕೇವಲ ೨.೧೦ ಲಕ್ಷ ಟನ್ ರಾಗಿ ಮಾತ್ರ ಬೆಂಬಲ ಬೆಲೆಯಲ್ಲಿ ಖರೀದಿಸುವುದಾಗಿ ತಿಳಿಸಿದೆ. ಇದರಿಂದಾಗಿ ರೈತರು ಆತಂಕಕ್ಕೆ ಒಳಗಾಗಿದ್ದಾರೆಂದು ಮನವಿಯಲ್ಲಿ ಅಳಲು ವ್ಯಕ್ತಪಡಿಸಲಾಗಿದೆ.
    ಪ್ರಸಕ್ತ ಸಾಲಿನಲ್ಲಿ ರಾಜ್ಯದಲ್ಲಿ ೧೫.೭ ಲಕ್ಷ ಟನ್ ರಾಗಿ ಬೆಳೆ ಬೆಳೆಯಲಾಗಿದೆ. ಮುಕ್ತ ಮಾರುಕಟ್ಟೆಯಲ್ಲಿ ರೈತರು ಬೆಳೆದಿರುವ ರಾಗಿಗೆ ಕ್ವಿಂಟಾಲ್‌ಗೆ  ರು. ೨ ಸಾವಿರ ಇದ್ದು, ಇದರಿಂದ ರೈತರು ಸಾಕಷ್ಟು ನಷ್ಟ ಅನುಭವಿಸುವಂತಾಗಿದೆ. ಈ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಕ್ವಿಂಟಾಲ್‌ಗೆ ರು.೪೦೦೦ ಬೆಂಬಲ ಬೆಲೆ ನಿಗದಿಪಡಿಸಿ ರೈತರು ಬೆಳೆದಿರುವ ೧೫.೭ ಲಕ್ಷ ಟನ್ ರಾಗಿ ಖರೀದಿಸುವ ಮೂಲಕ ನೆರವಿಗೆ ಬರುವಂತೆ ಮನವಿ ಮಾಡಲಾಗಿದೆ.
    ಸಾಮಾಜಿಕ ಹೋರಾಟಗಾರ ಉಕ್ಕುಂದ ಶಿವಕುಮಾರ್, ಕರುನಾಡ ಹಿತರಕ್ಷಣಾ ಸಮಿತಿ ರಾಜ್ಯಾಧ್ಯಕ್ಷ ವೈ. ಶಶಿಕುಮಾರ್, ನಾಗರಾಜ ನಾಯ್ಕ ಮತ್ತು ಜಿಟೋಜಿ ರಾವ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಒತ್ತಡಗಳ ನಡುವೆ ಉತ್ತಮವಾಗಿ ಕರ್ತವ್ಯ ನಿರ್ವಹಿಸುವುದು ಸವಾಲಿನ ಕೆಲಸ : ಸಿ.ಎಸ್ ಷಡಾಕ್ಷರಿ


ಭದ್ರಾವತಿ ಸಿದ್ದರೂಢನಗರದ ಶ್ರೀ ಬಸವೇಶ್ವರ ಸಭಾ ಭವನದಲ್ಲಿ ಸೋಮವಾರ ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್ ಸೋಮಶೇಖರಯ್ಯನವರ ಅಭಿನಂದನಾ ಗ್ರಂಥ ಬಿಡುಗಡೆಗೊಳಿಸಲಾಯಿತು.
    ಭದ್ರಾವತಿ, ಫೆ. ೨೮: ಹಲವಾರು ಒತ್ತಡಗಳ ನಡುವೆಯೂ ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್ ಸೋಮಶೇಖರಯ್ಯನವರು ಉತ್ತಮವಾಗಿ ಕರ್ತವ್ಯ ನಿರ್ವಹಿಸುವ ಮೂಲಕ ಎಲ್ಲರ ಪ್ರಶಂಸೆಗೆ ಪಾತ್ರರಾಗಿದ್ದಾರೆಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್ ಷಡಾಕ್ಷರಿ ಹೇಳಿದರು.
    ಅವರು ಸೋಮವಾರ ಸಿದ್ದರೂಢನಗರದ ಶ್ರೀ ಬಸವೇಶ್ವರ ಸಭಾ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಅಭಿನಂದನಾ ಗ್ರಂಥ ಬಿಡುಗಡೆಯೊಂದಿಗೆ ಬೀಳ್ಕೊಡುಗೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
    ಭದ್ರಾವತಿ ಸೂಕ್ಷ್ಮ ಸ್ಥಳವಾಗಿದ್ದು, ಇಲ್ಲಿ ಎಲ್ಲರೊಂದಿಗೆ ಉತ್ತಮ ಬಾಂಧವ್ಯ ವೃದ್ಧಿಸಿಕೊಂಡು ಕರ್ತವ್ಯ ನಿರ್ವಹಿಸುವುದು ಸವಾಲಿನ ಕೆಲಸವಾಗಿದೆ. ಅದರಲ್ಲೂ ಪ್ರತಿ ದಿನ ಒತ್ತಡದ ನಡುವೆ ಕರ್ತವ್ಯ ನಿರ್ವಹಿಸಬೇಕಾದ ಇಂದಿನ ದಿನಗಳಲ್ಲಿ ಸವಾಲುಗಳನ್ನು ಸಮರ್ಥವಾಗಿ ನಿಭಾಯಿಸಿ ಯಶಸ್ವಿಯಾಗಿ ಮುನ್ನಡೆಯುವುದು ಬಹಳ ಕಷ್ಟದ ಕೆಲಸವಾಗಿದೆ. ಸೋಮಶೇಖರಯ್ಯನವರು ತಮದೇ ಆದ ವ್ಯಕ್ತಿತ್ವ ಮತ್ತು ವೃತ್ತಿ ಅನುಭವದೊಂದಿಗೆ ಎಲ್ಲವನ್ನು ಸಮರ್ಥವಾಗಿ ಎದುರಿಸುವ ಸಾಮರ್ಥ್ಯ ಗಳಿಸಿಕೊಂಡಿದ್ದರು. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ದಕ್ಷತೆಯಿಂದ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಿದ್ದಾರೆಂದು ಪ್ರಶಂಸೆ ವ್ಯಕ್ತಪಡಿಸಿದರು.
    ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್ ಸೋಮಶೇಖರಯ್ಯನವರನ್ನು ಅಭಿನಂದನಾ ಸಮಿತಿ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳಿಂದ ಸನ್ಮಾನಿಸಿ ಅಭಿನಂದಿಸಲಾಯಿತು. ಅಭಿನಂದನೆ ಸ್ವೀಕರಿಸಿ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್ ಸೋಮಶೇಖರಯ್ಯ ಕ್ಷೇತ್ರದಲ್ಲಿ ೩ ಬಾರಿ ಒಟ್ಟು ೬ ವರ್ಷ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿರುವುದು ತೃಪ್ತಿ ತಂದುಕೊಟ್ಟಿದೆ. ವೃತ್ತಿ ಬದುಕಿನಲ್ಲಿ ಸಲಹೆ, ಸಹಕಾರ ನೀಡಿದ ಇಲಾಖೆಯ ಎಲ್ಲಾ ಸಿಬ್ಬಂದಿಗಳಿಗೂ, ತಾಲೂಕಿನ ಶಿಕ್ಷಕ ವೃಂದದವರು, ಸಂಘ-ಸಂಸ್ಥೆಗಳಿಗೆ ಕೃತಜ್ಞತೆ ಸಲ್ಲಿಸುತ್ತಿದ್ದೇನೆ ಎಂದರು.  
    ನಗರಸಭೆ ಮಾಜಿ ಅಧ್ಯಕ್ಷ ಬಿ.ಕೆ ಮೋಹನ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಸಾರ್ವಜನಿಕ ಶಿಕ್ಷಣ ಇಲಾಖೆ ಆಡಳಿತ ವಿಭಾಗದ ಜಿಲ್ಲಾ ಉಪನಿರ್ದೇಶಕ ಎನ್.ಎಂ ರಮೇಶ್, ಅಭಿವೃದ್ಧಿ ವಿಭಾಗದ ಜಿಲ್ಲಾ ಉಪನಿರ್ದೇಶಕ ಬಿ.ಆರ್ ಬಸವರಾಜಪ್ಪ, ಚಿಕ್ಕಮಗಳೂರು ಜಿಲ್ಲಾ ಉಪನಿರ್ದೇಶಕ ಮಲ್ಲೇಶಪ್ಪ, ಚಿತ್ರದುರ್ಗ ಶಿಕ್ಷಕರ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲ ಎಚ್. ಮಂಜುನಾಥ್, ಶಂಕರಪ್ಪ, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿದ್ದಬಸಪ್ಪ, ಅಭಿನಂದನಾ ಸಮಿತಿ ಗೌರವಾಧ್ಯಕ್ಷ ಡಿ. ಪ್ರಭಾಕರ ಬೀರಯ್ಯ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.  
    ಅಭಿನಂದನಾ ಗ್ರಂಥದ ಸಂಪಾದಕ, ಸಾಹಿತಿ ಅರಳೇಹಳ್ಳಿ ಅಣ್ಣಪ್ಪ ಪುಸ್ತಕ ಕುರಿತು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ತಾಲೂಕಿನ ವಿವಿಧ ಶಾಲೆಗಳ ಶಿಕ್ಷಕ ವೃಂದದವರು, ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ಪಾಲ್ಗೊಂಡಿದ್ದರು.


ಬಿಇಓ ಟಿ.ಎನ್ ಸೋಮಶೇಖರಯ್ಯ ವೃತ್ತಿ ಬದುಕು ವಿಶಿಷ್ಟ : ಸಿದ್ದಬಸಪ್ಪ


ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ 'ಸಾರ್ಥಕ ಸಂಭ್ರಮ' ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್ ಸೋಮಶೇಖರಯ್ಯನವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.
    ಭದ್ರಾವತಿ, ಫೆ. ೨೮: ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್ ಸೋಮಶೇರಯ್ಯನವರ ವೃತ್ತಿ ಬದುಕು ವಿಶಿಷ್ಟವಾಗಿದ್ದು, ಶಿಕ್ಷಣ ಇಲಾಖೆಗೆ ಇವರ ವೃತ್ತಿ ಬದುಕಿನ ಅನುಭವಗಳು ಪ್ರಸ್ತುತ ಅಗತ್ಯವಾಗಿವೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಸಿದ್ದಬಸಪ್ಪ ಹೇಳಿದರು.
    ಅವರು ತಾಲೂಕಿನ ಹೊಳೆಹೊನ್ನೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ 'ಸಾರ್ಥಕ ಸಂಭ್ರಮ' ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
    ಶಿಕ್ಷಣ ಕ್ಷೇತ್ರದ ಮಹತ್ವ ಎತ್ತಿ ಹಿಡಿಯುವ ಜೊತೆಗೆ ಶಿಕ್ಷಕರ ಸಮಸ್ಯೆಗಳಿಗೆ ಪೂರಕವಾಗಿ ಸ್ಪಂದಿಸುವ ಜೊತೆಗೆ ಆಡಳಿತದಲ್ಲಿ ಪ್ರಾಮಾಣಿಕತೆ, ದಕ್ಷತೆಯಿಂದ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ ಎಂದರು.
ಅಭಿನಂದನೆ ಸ್ವೀಕರಿಸಿ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್ ಸೋಮಶೇಖರಯ್ಯ ಕ್ಷೇತ್ರದಲ್ಲಿ ೩ ಬಾರಿ ಒಟ್ಟು ೬ ವರ್ಷ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿರುವುದು ತೃಪ್ತಿ ತಂದುಕೊಟ್ಟಿದೆ. ವೃತ್ತಿ ಬದುಕಿನಲ್ಲಿ ಸಲಹೆ, ಸಹಕಾರ ನೀಡಿದ ಇಲಾಖೆಯ ಎಲ್ಲಾ ಸಿಬ್ಬಂದಿಗಳಿಗೂ, ತಾಲೂಕಿನ ಶಿಕ್ಷಕ ವೃಂದದವರು, ಸಂಘ-ಸಂಸ್ಥೆಗಳಿಗೆ ಕೃತಜ್ಞತೆ ಸಲ್ಲಿಸುತ್ತಿದ್ದೇನೆ ಎಂದರು.  
    ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಗೌರವಾಧ್ಯಕ್ಷ ಯೂ. ಮಹದೇವಪ್ಪ, ಸಂಘದ ಅಧ್ಯಕ್ಷ ಪೃಥ್ವಿ, ಮಾಜಿ ಅಧ್ಯಕ್ಷ ಎಂ.ಎಸ್ ಬಸವರಾಜ್ ,ಸರ್ಕಾರಿ ನೌಕಾರರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರು ಮತ್ತು ಶಿಕ್ಷಕ ಸಂಘದ ನಿರ್ದೇಶಕರಾದ ಡಿ.ಎಸ್ ಬಸವಂತರಾವ್ ದಾಳೆ, ಮುಖ್ಯ ಶಿಕ್ಷಕರ ಸಂಘದ ಖಜಾಂಚಿ ಮೋಹಿದ್ದೀನ್, ಎಮ್ಮೆಹಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಟಿ. ರಾಮಕೃಷ್ಣ, ಎಸ್.ಪಿ ರಾಜು, ಮಾಯಮ್ಮ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
    ವಿವಿಧ ಶಾಲೆಗಳ ಮುಖ್ಯ ಶಿಕ್ಷಕರುಗಳಾದ ಬಸವರಾಜಪ್ಪ, ಅನ್ನಪೂರ್ಣಮ್ಮ ಬಸವರಾಜ, ಚಂದ್ರಪ್ಪ, ಪಾರ್ವತಮ್ಮ, ಉಪೇಂದ್ರ, ರಾಧಮ್ಮ, ಮಂಗಳ, ಜಯಪ್ಪ, ದಯಾನಂದ, ಸಂತೋಷ್ ಕುಮಾರ್ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿದ್ಯಾ ಡಂಬಾಲ್ಕರ್ ಪ್ರಾರ್ಥಿಸಿದರು. ಮಾಲತೇಶ್ ನಿರೂಪಿಸಿದರು.

ವಿಜಯ್‌ಕುಮಾರ್ ವಸಂತ್ ದಂಡಿನರವರಿಗೆ ಕೆಎನ್‌ಡಿ ರತ್ನ ಬಿರುದು


ಕರ್ನಾಟಕ ಉತ್ತರ ಸಭಾ ಪ್ರಾಂತ್ಯದ ಕಾರ್ಯದರ್ಶಿ  ವಿಜಯ್‌ಕುಮಾರ್ ವಸಂತ್ ದಂಡಿನರವರಿಗೆ ಭದ್ರಾವತಿ ಸಿಎಸ್‌ಐ ಜೂಬ್ಲಿ ದೇವಾಲಯದಲ್ಲಿ ನಡೆದ ದೃಢೀಕರಣ ಆರಾಧನೆಯಲ್ಲಿ ಕೆಎನ್‌ಡಿ ರತ್ನ ಬಿರುದನ್ನು ನೀಡಿ ಸನ್ಮಾನಿಸಿ ಗೌರವಿಸಲಾಯಿತು.
    ಭದ್ರಾವತಿ, ಫೆ. ೨೮:  ಕರ್ನಾಟಕ ಉತ್ತರ ಸಭಾ ಪ್ರಾಂತ್ಯದ ಕಾರ್ಯದರ್ಶಿ ವಿಜಯ್‌ಕುಮಾರ್ ವಸಂತ್ ದಂಡಿನರವರಿಗೆ ನಗರದ ಸಿಎಸ್‌ಐ ಜೂಬ್ಲಿ ದೇವಾಲಯದಲ್ಲಿ ನಡೆದ ದೃಢೀಕರಣ ಆರಾಧನೆಯಲ್ಲಿ ಕೆಎನ್‌ಡಿ ರತ್ನ ಬಿರುದನ್ನು ನೀಡಿ ಸನ್ಮಾನಿಸಿ ಗೌರವಿಸಲಾಯಿತು.
    ಕರ್ನಾಟಕ ಉತ್ತರ ಸಭಾ ಪ್ರಾಂತ್ಯದಲ್ಲಿ ವಿಜಯ್‌ಕುಮಾರ್ ವಸಂತ್ ದಂಡಿನರವರು ಸಲ್ಲಿಸಿರುವ ಸೇವೆ ಹಾಗು ಅವರ ಸಾಧನೆಯನ್ನು ಗುರುತಿಸಿ ಬಿರುದನ್ನು ನೀಡಿ ಸನ್ಮಾನಿಸಲಾಗಿದೆ.
    ಪ್ರಾಂತ್ಯದ ಬಿಷಪ್ ರೈಟ್ ರೇವರೆಂಡ್ ಮಾರ್ಟೀನಿ ಸಿ ಬೋರಗೈ, ವಿಜಯ್ ಕನಕರಾಜನ್, ರೇವರೆಂಡ್‌ಗಳಾದ ಸತ್ಯಬಾಬು ಸ್ಯಾಮುಯಲ್, ಅನಿಲ್ ನಿಲುಗಲ್, ಬಾಬು, ಸ್ಟ್ಯಾಂಲಿ, ಅಬ್ರಹಾಂ ಸಂಕೇಶ್ವರ್, ಗಿಡಿಯೋನ್, ಬೋಬಿರಾಜ್ ಸೇರಿದಂತೆ ಇನ್ನಿತರರು ಸಮ್ಮುಖದಲ್ಲಿ ಸಿಎಸ್‌ಐ ತೆಲುಗು ಜೂಬ್ಲಿ ದೇವಾಲಯದ ಸಭಾ ಪಾಲಕರದ ರೇವರೆಂಡ್ ಎಸ್ತೆರ್ ಅಬ್ರಹಾಂ, ಸಭಾ ಪಾಲನ ಸಮಿತಿಯವರಾದ ಅಂಬದಪುಡಿ ಸುವರ್ಣಮ್ಮ, ಇಟ್ಟೆ ಸಂತೋಷ್ ಕುಮಾರ್, ಪಿಲ್ಲಿ ಇಸ್ರಾಲ್, ಚಾಲ್ತಿರಿ ಡ್ಯಾನಿಯಲ್ ಸೇರಿದಂತೆ ಇನ್ನಿತರರು ವಿಜಯ್‌ಕುಮಾರ್ ವಸಂತ್ ದಂಡಿನರವರಿಗೆ ಬಿರುದನ್ನು ನೀಡಿ ಸನ್ಮಾನಿಸಿ ಗೌರವಿಸಿದರು. ತೆಲುಗು ಕ್ರಿಶ್ಚಿಯನ್ ಸಮುದಾಯದವರು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

ಸಾವಯುವ ಸಿರಿ ಯೋಜನೆ ಅನುಷ್ಠಾನಕ್ಕೆ ಅರ್ಜಿ ಆಹ್ವಾನ

ಭದ್ರಾವತಿ, ಫೆ. ೨೮: ರಾಜ್ಯದಲ್ಲಿ ಹೊಸ ಸಾವಯುವ ಕೃಷಿ ಉತ್ತೇಜನಗೊಳಿಸಲು, ಜನರಿಗೆ ಆರೋಗ್ಯಕರ ಹಾಗು ರಾಸಾಯನಿಕ ಮುಕ್ತ ಕೃಷಿ ಮತ್ತು ತೋಟಗಾರಿಕೆ ಉತ್ಪನ್ನಗಳನ್ನು ಒದಗಿಸಲು ಸರ್ಕಾರ ಇದೀಗ ಸಾವಯುವ ಸಿರಿ ಯೋಜನೆಯನ್ನು ಘೋಷಿಸಿದ್ದು, ಈ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಕೃಷಿ ಇಲಾಖೆ ರೈತರ ಗುಂಪು ಅಥವಾ ಸಂಘ ಅಥವಾ ಒಕ್ಕೂಟಗಳಿಂದ ಅರ್ಜಿ ಆಹ್ವಾನಿಸಿದೆ.
    ಸಾರ್ವಯುವ ಕೃಷಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಹಾಗು ೧೦ ವರ್ಷಗಳ ಅನುಭವವುಳ್ಳ ಜವಾಬ್ದಾರಿಯುತ ಸ್ಥಳೀಯ ನೋಂದಾಯಿತ ಸಾವಯುವ ರೈತರ ಗುಂಪು ಅಥವಾ ಸಂಘ ಅಥವಾ ಒಕ್ಕೂಟ ಮಾ.೫ರ ಸಂಜೆ ೪ ಗಂಟೆಯೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಸಹಾಯಕ ಕೃಷಿ ನಿರ್ದೇಶಕರ ಕಛೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಸಹಾಯಕ ನಿರ್ದೇಶಕ ಬಿ.ಸಿ ಶಶಿಧರ ಕೋರಿದ್ದಾರೆ.

Sunday, February 27, 2022

ಬಿಎಸ್‌ವೈ ಹುಟ್ಟುಹಬ್ಬ : ಒಳರೋಗಿಗಳಿಗೆ ಹಾಲು, ಹಣ್ಣು, ಬ್ರೆಡ್ ವಿತರಣೆ

ಭದ್ರಾವತಿಯಲ್ಲಿ ಭಾರತೀಯ ಜನತಾ ಪಕ್ಷ ತಾಲೂಕು ಮಂಡಲ ವತಿಯಿಂದ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹುಟ್ಟುಹಬ್ಬದ ಅಂಗವಾಗಿ ಹಳೇನಗರದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಭಾನುವಾರ ಒಳರೋಗಿಗಳಿಗೆ ಹಾಲು, ಹಣ್ಣು, ಬ್ರೆಡ್ ವಿತರಣೆ ನಡೆಯಿತು.
    ಭದ್ರಾವತಿ, ಫೆ. ೨೭: ಭಾರತೀಯ ಜನತಾ ಪಕ್ಷ ತಾಲೂಕು ಮಂಡಲ ವತಿಯಿಂದ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹುಟ್ಟುಹಬ್ಬದ ಅಂಗವಾಗಿ ಹಳೇನಗರದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಭಾನುವಾರ ಒಳರೋಗಿಗಳಿಗೆ ಹಾಲು, ಹಣ್ಣು, ಬ್ರೆಡ್ ವಿತರಣೆ ನಡೆಯಿತು.
    ಪ್ರತಿ ವರ್ಷ ತಾಲೂಕು ಮಂಡಲ ವತಿಯಿಂದ ಯಡಿಯೂರಪ್ಪನವರ ಹುಟ್ಟುಹಬ್ಬ ವಿಶೇಷವಾಗಿ ಆಚರಿಸಿಕೊಂಡು ಬರಲಾಗುತ್ತಿದೆ. ಬೆಳಿಗ್ಗೆ ನಗರದ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.
    ಮಂಡಲ ಅಧ್ಯಕ್ಷ ಎಂ. ಪ್ರಭಾಕರ್ ನೇತೃತ್ವದಲ್ಲಿ ನಡೆದ  ಕಾರ್ಯಕ್ರಮದಲ್ಲಿ ಪ್ರಮುಖರಾದ ಬಿ.ಕೆ ಶ್ರೀನಾಥ್, ಜಿ. ಧರ್ಮಪ್ರಸಾದ್, ಎಸ್. ಕುಮಾರ್, ಎನ್. ವಿಶ್ವನಾಥರಾವ್, ಸಂಪತ್‌ರಾಜ್ ಬಾಂಟಿಯಾ, ಕರಿಗೌಡ, ಕೆ. ಮಂಜಪ್ಪ, ರಾಮ್‌ನಾಥ ಬರ್ಗೆ, ಬಿ.ಎಸ್ ಶ್ರೀನಾಥ್, ಶೋಭಾಪಾಟೀಲ್, ಹೇಮಾವತಿ, ಆರ್.ಎಸ್ ಶೋಭಾ, ಮಂಜುಳಾ, ಕವಿತಾ, ರವಿಕುಮಾರ್, ಮಂಜುನಾಥ್, ಚಂದ್ರು, ಸುಬ್ರಮಣ್ಯ, ಪಿ. ಗಣೇಶ್‌ರಾವ್, ಸೇರಿದಂತೆ ಪಕ್ಷದ ವಿವಿಧ ಮೋರ್ಚಾಗಳ ಅಧ್ಯಕ್ಷರು, ಪದಾಧಿಕಾರಿಗಳು, ಕಾರ್ಯಕರ್ತರು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ತಾಲೂಕು ಮಟ್ಟದ ಷಟಲ್ ಪಂದ್ಯಾವಳಿಗೆ ಚಾಲನೆ

ಭದ್ರಾವತಿ ನಗರಸಭೆ ವ್ಯಾಪ್ತಿ ಜಟ್‌ಪಟ್ ನಗರದಲ್ಲಿರುವ ಷಟಲ್ ಒಳಾಂಗಣ ಕ್ರೀಡಾಂಗಣದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಆಯೋಜಿಸಲಾಗಿರುವ ತಾಲೂಕು ಮಟ್ಟದ ಷಟಲ್ ಪಂದ್ಯಾವಳಿಗೆ ಭಾನುವಾರ ಚಿಕ್ಕಮಗಳೂರು ಯೋಜನಾ ನಿರ್ದೇಶಕ ಮನೋಹರ್ ಷಟಲ್ ಬ್ಯಾಡ್ಮಿಂಟನ್ ಆಟವಾಡುವ ಮೂಲಕ ಚಾಲನೆ ನೀಡಿದರು.
    ಭದ್ರಾವತಿ, ಫೆ. ೨೭: ನಗರಸಭೆ ವ್ಯಾಪ್ತಿ ಜಟ್‌ಪಟ್ ನಗರದಲ್ಲಿರುವ ಷಟಲ್ ಒಳಾಂಗಣ ಕ್ರೀಡಾಂಗಣದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಆಯೋಜಿಸಲಾಗಿರುವ ತಾಲೂಕು ಮಟ್ಟದ ಷಟಲ್ ಪಂದ್ಯಾವಳಿಗೆ ಭಾನುವಾರ ಚಿಕ್ಕಮಗಳೂರು ಯೋಜನಾ ನಿರ್ದೇಶಕ ಮನೋಹರ್ ಚಾಲನೆ ನೀಡಿದರು.
    ಕ್ರೀಡಾಪಟುಗಳು, ಕ್ರೀಡಾಭಿಮಾನಿಗಳು ಮತ್ತು ನಗರಸಭಾ ಸದಸ್ಯರು ಹಾಗು ಕ್ರೀಡಾಂಗಣ ಉಸ್ತುವಾರಿ ಸಮಿತಿಯ ಪ್ರಮುಖರು ಈ ಹಿಂದೆ ನಗರಸಭೆ ಪೌರಾಯುಕ್ತರಾಗಿ ಮನೋಹರ್‌ರವರು ಕರ್ತವ್ಯ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಕ್ರೀಡಾಂಗಣದ ಅಭಿವೃದ್ಧಿಗಾಗಿ ಕೈಗೊಂಡ ಕಾರ್ಯವನ್ನು ಶ್ಲಾಘಿಸಿ ಅವರನ್ನು ಗೌರವಿಸುವ ಮೂಲಕ ಸನ್ಮಾನಿಸಲಾಯಿತು.
    ವಾರ್ಡ್ ವ್ಯಾಪ್ತಿಯ ನಗರಸಭಾ ಸದಸ್ಯರಾದ ಆರ್. ಶ್ರೇಯಸ್(ಚಿಟ್ಟೆ) ಮತ್ತು ಬಿ.ಎಂ ಮಂಜುನಾಥ್(ಟೀಕು) ಮುಂದಿನ ದಿನಗಳಲ್ಲಿ ಕ್ರೀಡಾಂಗಣದ ಅಭಿವೃದ್ಧಿಗೆ ಮತ್ತಷ್ಟು ಶಕ್ತಿ ಮೀರಿ ಶ್ರಮಿಸುವುದಾಗಿ ಭರವಸೆ ನೀಡಿದರು.
    ಇದೆ ಸಂದರ್ಭದಲ್ಲಿ ಒಳಾಂಗಣ ಕ್ರೀಡಾಂಗಣದಲ್ಲಿ  ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಿಸಲಾಯಿತು. ನಗರಸಭಾ ಸದಸ್ಯೆ ಅನುಪಮ ಚನ್ನೇಶ್, ಸಿದ್ದಲಿಂಗಯ್ಯ, ದೈಹಿಕ ಶಿಕ್ಷಕ ಶಿವಲಿಂಗೇಗೌಡ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.


ಈ ಹಿಂದೆ ಭದ್ರಾವತಿ ನಗರಸಭೆ ಪೌರಾಯುಕ್ತರಾಗಿ ಮನೋಹರ್‌ರವರು ಕರ್ತವ್ಯ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ನಗರಸಭೆ ವ್ಯಾಪ್ತಿಯ ಜಟ್‌ಪಟ್ ನಗರದಲ್ಲಿರುವ ಷಟಲ್ ಒಳಾಂಗಣ ಕ್ರೀಡಾಂಗಣದ ಅಭಿವೃದ್ಧಿಗಾಗಿ ಕೈಗೊಂಡ ಕಾರ್ಯವನ್ನು ಶ್ಲಾಘಿಸಿ ಅವರನ್ನು ಗೌರವಿಸುವ ಮೂಲಕ ಸನ್ಮಾನಿಸಲಾಯಿತು.

ಭದ್ರಾವತಿಯಲ್ಲಿ ಪಕ್ಷದ ಶಾಸಕರಿಲ್ಲ ಎಂಬ ಕೊರಗು ನೀಗಿಸಿದ ರಾಜಕೀಯ ಮುತ್ಸದ್ದಿ ಬಿ.ಎಸ್.ವೈ

ಬಿ.ಎಸ್.ವೈ ಹುಟ್ಟುಹಬ್ಬ : ವಿಶೇಷ ಪೂಜೆ, ಬಡವರಿಗೆ ಹೊದಿಕೆ ವಿತರಣೆ


ಬಿ.ಎಸ್ ಯಡಿಯೂರಪ್ಪನವರ ಹುಟ್ಟುಹಬ್ಬದ ಅಂಗವಾಗಿ ಭಾನುವಾರ ಭದ್ರಾವತಿಯಲ್ಲಿ ಬಿ.ವೈ ರಾಘವೇಂದ್ರ ಅಭಿಮಾನಿಗಳ ಬಳಗದ ವತಿಯಿಂದ ಹೊಸಮನೆ ಹಿಂದೂ ಮಹಾಸಭಾ ಗಣಪತಿ ದೇವಸ್ಥಾನದಲ್ಲಿ  ವಿಶೇಷ ಪೂಜೆ ಹಾಗು ಬಡ ವರ್ಗದ ಅಸಹಾಯಕರಿಗೆ ಮಲಗುವ ಹೊದಿಕೆ(ಬ್ಲಾಂಕೆಟ್) ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
    ಭದ್ರಾವತಿ, ಫೆ. ೨೭: ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಕ್ಷೇತ್ರದಲ್ಲಿ ಪಕ್ಷದ ಶಾಸಕರಿಲ್ಲ ಎಂಬ ಕೊರಗನ್ನು ನೀಗಿಸಿ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಮಾಡಿಸಿಕೊಟ್ಟಿದ್ದು, ಕ್ಷೇತ್ರದ ಜನರು ಇವರಿಗೆ ಚಿರಋಣಿಗಳಾಗಬೇಕಾಗಿದೆ ಎಂದು ಸ್ಥಳಿಯ ಬಿಜೆಪಿ ಮುಖಂಡರು ಪ್ರಶಂಸೆ ವ್ಯಕ್ತಪಡಿಸಿದರು.
    ಬಿ.ಎಸ್ ಯಡಿಯೂರಪ್ಪನವರ ಹುಟ್ಟುಹಬ್ಬದ ಅಂಗವಾಗಿ ಭಾನುವಾರ  ಬಿ.ವೈ ರಾಘವೇಂದ್ರ ಅಭಿಮಾನಿಗಳ ಬಳಗದ ವತಿಯಿಂದ ಹೊಸಮನೆ ಹಿಂದೂ ಮಹಾಸಭಾ ಗಣಪತಿ ದೇವಸ್ಥಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶೇಷ ಪೂಜೆ ಹಾಗು ಬಡ ವರ್ಗದ ಅಸಹಾಯಕರಿಗೆ ಮಲಗುವ ಹೊದಿಕೆ(ಬ್ಲಾಂಕೆಟ್) ವಿತರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಪಕ್ಷದ ಪ್ರಮುಖರಾದ ವಿ. ಕದಿರೇಶ್, ಜಿ. ಧರ್ಮ ಪ್ರಸಾದ್, ಜಿ. ಆನಂದಕುಮಾರ್, ಎಚ್.ಸಿ ರಮೇಶ್, ಎಸ್. ಕುಮಾರ್ ಮತ್ತು ಎಂ. ಮಂಜುನಾಥ್ ಹಾಗು ಮಹಿಳಾ ಮುಖಂಡರಾದ ಸುಲೋಚನಾ ಪ್ರಕಾಶ್ ಸೇರಿದಂತೆ ಇನ್ನಿತರರು, ಕ್ಷೇತ್ರದಲ್ಲಿ ಪಕ್ಷದ ಶಾಸಕರಿಲ್ಲದಿದ್ದರೂ ಸಹ ಇಲ್ಲಿನ ಪಕ್ಷದ ಮುಖಂಡರು, ಕಾರ್ಯಕರ್ತರಿಗೆ ಸದಾಕಾಲ ಹುಮ್ಮಸ್ಸು ತುಂಬುವ ಜೊತೆಗೆ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಬಿ.ಎಸ್ ಯಡಿಯೂರಪ್ಪ ಹಾಗು ಸಂಸದ ಬಿ.ವೈ ರಾಘವೆಂದ್ರರವರು ಕೈಗೊಂಡಿದ್ದಾರೆ.
    ಕುಡಿಯುವ ನೀರು, ರಸ್ತೆ, ಚರಂಡಿ ನಿರ್ಮಾಣ ಸೇರಿದಂತೆ ಮೂಲ ಸೌಕರ್ಯಗಳ ಜೊತೆಗೆ ಮಠ ಮಂದಿರಗಳ ಅಭಿವೃದ್ಧಿ, ಕಾರ್ಮಿಕರ ಹಿತಾಸಕ್ತಿ ಕಾಪಾಡುವ ನಿಟ್ಟಿನಲ್ಲಿ ಆರೋಗ್ಯ ಸೇವೆ ಒದಗಿಸಲು ಇಎಸ್‌ಐ ಆಸ್ಪತ್ರೆ, ಕೋವಿಡ್ ಸಂಕಷ್ಟದ ಸಮಯದಲ್ಲಿ ನೆರವಿನ ವ್ಯವಸ್ಥೆ, ಬಡ ಹಾಗು ಮಧ್ಯಮ ವರ್ಗದ ಜನರ ಪ್ರಯಾಣಕ್ಕೆ ಅನುಕೂಲವಾಗುವಂತೆ ರೈಲುಗಳ ವ್ಯವಸ್ಥೆ, ರೈಲ್ವೆ ಸೇತುವೆ ನಿರ್ಮಾಣ ಸೇರಿದಂತೆ ಹಲವಾರು ಅಭಿವೃದ್ಧಿಗಳನ್ನು ಯಾವುದೇ ಫಲಾಫೇಕ್ಷೆ ಇಲ್ಲದೆ ಕೈಗೊಂಡಿದ್ದಾರೆ. ಈ ಹಿನ್ನಲೆಯಲ್ಲಿ ಇಂತಹ ಧೀಮಂತ ನಾಯಕರ ಹುಟ್ಟುಹಬ್ಬವನ್ನು ಎಲ್ಲರೂ ಒಗ್ಗಟ್ಟಾಗಿ ಸಂಭ್ರಮದಿಂದ ಆಚರಿಸುವಂತಾಗಿದೆ ಎಂದರು.
    ಬಿ.ವೈ ರಾಘವೇಂದ್ರ ಅಭಿಮಾನಿಗಳ ಬಳಗದ ಯುವ ಮುಖಂಡ ಕೆ. ಮಂಜುನಾಥ್ ನೇತೃತ್ವದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
    ಪ್ರಮುಖರಾದ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ದುಗ್ಗೇಶ್ ತೇಲ್ಕರ್, ತಮಿಳು ಸಮಾಜದ ನಾರಾಯಣ, ರವಿಚಂದ್ರ, ಮಣಿ ಎಎನ್‌ಎಸ್, ಎನ್. ರಾಮಕೃಷ್ಣ, ರಾಮನಾಥ ಬರ್ಗೆ, ಬಿ.ಎಸ್ ಶ್ರೀನಾಥ್, ಸುಬ್ರಮಣ್ಯ, ಎಂ.ಎಸ್ ಸುರೇಶಪ್ಪ, ಬಿಜೆಪಿ ಮಹಿಳಾ ಘಟಕದ ಅಧ್ಯಕ್ಷೆ ಶೋಭಾ ಪಾಟೀಲ್, ನಗರಸಭಾ ಸದಸ್ಯೆ ಶಶಿಕಲಾ ನಾರಾಯಣಪ್ಪ, ಅನ್ನಪೂರ್ಣ ಸಾವಂತ್, ಮಂಜುಳ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

ತಪ್ಪದೇ ೫ ವರ್ಷದೊಳಗಿನ ಮಕ್ಕಳಿಗೆ ಪೋಲಿಯೋ ಹನಿ ಹಾಕಿಸಿ : ಗೀತಾರಾಜ್‌ಕುಮಾರ್

ಭದ್ರಾವತಿ ಹಳೇನಗರದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಆರೋಗ್ಯ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ಪಲ್ಸ್ ಪೋಲಿಯೋ ದಿನಾಚರಣೆಗೆ ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್ ಪಲ್ಸ್ ಪೋಲಿಯೋ ಹನಿ ಹಾಕುವ ಮೂಲಕ ಚಾಲನೆ ನೀಡಿದರು.
    ಭದ್ರಾವತಿ, ಫೆ. ೨೭: ಪೋಲಿಯೋ ಬಗ್ಗೆ ನಿರ್ಲಕ್ಷ್ಯ ವಹಿಸದೆ ಪೋಷಕರು ತಮ್ಮ ೫ ವರ್ಷದೊಳಗಿನ ಮಕ್ಕಳಿಗೆ ಪೋಲಿಯೋ ಹನಿ ಹಾಕಿಸುವಂತೆ ನಗರಸಭೆ ಅಧ್ಯಕ್ಷೆ  ಗೀತಾರಾಜ್‌ಕುಮಾರ್ ಕರೆ ನೀಡಿದರು.
    ಅವರು ಭಾನುವಾರ ಹಳೇನಗರದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಆರೋಗ್ಯ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ಪಲ್ಸ್ ಪೋಲಿಯೋ ದಿನಾಚರಣೆಗೆ ಚಾಲನೆ ನೀಡಿ ಮಾತನಾಡಿದರು.
    ಮುನ್ನಚ್ಚರಿಕೆ ಕ್ರಮವಾಗಿ ಎಲ್ಲರೂ ತಮ್ಮ ಮಕ್ಕಳಿಗೆ ಸಮೀಪದ ಪಲ್ಸ್ ಪೋಲಿಯೋ ಲಸಿಕಾ ಕೇಂದ್ರಗಳಿಗೆ ತೆರಳಿ ಪೋಲಿಯೋ ಹನಿ ಹಾಕಿಸುವ ಮೂಲಕ ಭವಿಷ್ಯದ ಆರೋಗ್ಯವಂತ ಸಮಾಜಕ್ಕೆ ಕೈಜೋಡಿಸುವಂತೆ ಮನವಿ ಮಾಡಿದರು.
    ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ವಿ ಅಶೋಕ್ ಮಾತನಾಡಿ, ಈ ಬಾರಿ ತಾಲೂಕಿನಲ್ಲಿ ೧೮೦ ಲಸಿಕಾ ಕೇಂದ್ರಗಳನ್ನು ತೆರೆಯಲಾಗಿದೆ. ಒಟ್ಟು ೨೬,೨೦೫ ಮಕ್ಕಳಿಗೆ ಪೋಲಿಯೋ ಹನಿ ಹಾಕುವ ಗುರಿ ಹೊಂದಲಾಗಿದ್ದು, ೭೨೦ ಮಂದಿ ಲಸಿಕೆ ಹಾಕುವವರು ಹಾಗು ೩೭ ಮಂದಿ ಮೇಲ್ವಿಚಾರಕರು ಕರ್ತವ್ಯ ನಿರ್ವಹಿಸಲಿದ್ದಾರೆ. ಸಾರ್ವಜನಿಕರು ಸಮೀಪದ ಕೇಂದ್ರಗಳಿಗೆ ತೆರಳಿ ಪೋಲಿಯೋ ಹನಿ ಹಾಕಿಸುವ ಮೂಲಕ ಸಹಕರಿಸುವಂತೆ ಮನವಿ ಮಾಡಿದರು.
    ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಸುದೀಪ್‌ಕುಮಾರ್, ವಾರ್ಡ್ ಸದಸ್ಯೆ ಅನುಸುಧಾ ಮೋಹನ್, ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ. ಶಂಕರಪ್ಪ, ಆರೋಗ್ಯ ರಕ್ಷಾ ಸಮಿತಿ ಸದಸ್ಯ ರಾಮನಾಥ್ ಬರ್ಗೆ, ಪಿ. ಗಣೇಶ್‌ರಾವ್, ರೋಟರಿ ಸಂಸ್ಥೆಯ ಅಡವೀಶಯ್ಯ, ಸುಂದರ್ ಬಾಬು, ಆಸ್ಪತ್ರೆ ಸಿಬ್ಬಂದಿಗಳಾದ ಆನಂದಮೂರ್ತಿ, ರೇವತಿ, ವಸಂತ, ಗ್ರೇಷಿಯಾ, ನೇತ್ರಾ, ದೇವಿಕಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಗ್ರಾಮಾಂತರ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗಕ್ಕೆ ನೂತನ ಪದಾಧಿಕಾರಿಗಳ ನೇಮಕ

ಭದ್ರಾವತಿ ತಾಲೂಕು ಕಾಂಗ್ರೆಸ್ ಗ್ರಾಮಾಂತರ ಸಮಿತಿ ಹಿಂದುಳಿದ ವರ್ಗಗಳ ವಿಭಾಗಕ್ಕೆ ನೂತನ ಪದಾಧಿಕಾರಗಳನ್ನು ನೇಮಿಸಿದ್ದು, ಜಿಲ್ಲಾ ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷ ಎ.ಎನ್. ರಮೇಶ್ ಇಕ್ಕೇರಿ ಹಾಗೂ ನಗರಸಭಾ ಸದಸ್ಯರ ಬಿ.ಕೆ.ಮೋಹನ್ ನೇಮಕಾತಿ ಪತ್ರ ನೀಡಿದರು.
    ಭದ್ರಾವತಿ, ಫೆ. ೨೭: ತಾಲೂಕು ಕಾಂಗ್ರೆಸ್ ಗ್ರಾಮಾಂತರ ಸಮಿತಿ ಹಿಂದುಳಿದ ವರ್ಗಗಳ ವಿಭಾಗಕ್ಕೆ ನೂತನ ಪದಾಧಿಕಾರಗಳನ್ನು ನೇಮಿಸಿ ಅಧ್ಯಕ್ಷ ಎಂ.ರಮೇಶ್ ಶಂಕರಘಟ್ಟ ಇವರು ಆದೇಶ ಹೊರಡಿಸಿದ್ದಾರೆ.
    ಶಾಸಕ ಬಿ.ಕೆ.ಸಂಗಮೇಶ್ವರ್ ಶಿಫಾರಸ್ಸಿನ ಮೇರೆಗೆ ರಾಜ್ಯ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯಾಧ್ಯಕ್ಷ ಎಂ.ಡಿ ಲಕ್ಷ್ಮಿನಾರಾಯಣ(ಅಣ್ಣಯ್ಯ) ಹಾಗೂ ಜಿಲ್ಲಾ ಅಧ್ಯಕ್ಷ ಇ.ಎನ್.ರಮೇಶ್ ಇಕ್ಕೇರಿಯವರ ಅನುಮೋದನೆಯೊಂದಿಗೆ ನೂತನ ಪದಾಧಿಕಾರಿಗಳಿಗೆ ನೇಮಕಾತಿ ಪತ್ರ ವಿತರಿಸಲಾಯಿತು.
    ತಾಲೂಕಿನ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಉಪಾಧ್ಯಕ್ಷರಾಗಿ ಸಿಂಗನಮನೆ ಟಿ.ಡಿ ಶಶಿಕುಮಾರ್, ಕೂಡಿಗ್ಲೆರೆ ಡಿ. ಪ್ರಭಾಕರ್ ಹಾಗೂ ಹಿರಿಯೂರು ಎಚ್.ಕೆ ಕುಮಾರ್ ನೇಮಿಸಲಾಗಿದೆ. ಉಳಿದಂತೆ ಸಂಘಟನಾ ಕಾರ್ಯದಶಿಗಳಾಗಿ ಕೂಡ್ಲಿಗೆರೆ ತಳ್ಳಿಕಟ್ಟೆ ಕುಪ್ಪೇಂದ್ರ, ಆರ್. ಮಂಜುನಾಥ್, ಸಿಂಗನಮನೆ ನಂಜಪ್ಪ, ಗಣೇಶ್ ರಾವ್, ಎಸ್. ಆನಂದ, ವಿ. ಗಿರೀಶ್, ಎಚ್. ಕಿರಣ್,  ಕಾರ್ಯದರ್ಶಿಗಳಾಗಿ ಹಿರಿಯೂರು ಎಚ್.ಆರ್ ವರದರಾಜ್, ಸಿಂಗನಮನೆ ಎನ್. ಮಂಜಪ್ಪ, ಪಿ. ನಂಜುಂಡೇಶ್ವರ ರಾವ್, ವಿ. ರೂಪೇಶ್, ಸುಜಾತ,  ಖಜಾಂಚಿಯಾಗಿ ಸಿಂಗನಮನೆ ಎನ್.ಶ್ರೀಕಾಂತ್, ಸಹಕಾರ್ಯದರ್ಶಿಗಳಾಗಿ ಕೂಡ್ಲಿಗೆರೆ ಜಡಿಯಪ್ಪ, ರಘು, ನಿತಿನ್ ಗಿರಿ, ಸಿಂಗನಮನೆ ಕೆ. ಸುರೇಶ್, ಹಾಗೂ ಸಂಚಾಲಕರಾಗಿ ಕೂಡ್ಲಿಗೆರೆ ವೀರಪ್ಪನ್, ಸಿಂಗನಮನೆ ಕುಮಾರ್‌ರವರನ್ನು ನೇಮಿಸಲಾಗಿದೆ.
    ಜಿಲ್ಲಾ ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷ ಎ.ಎನ್. ರಮೇಶ್ ಇಕ್ಕೇರಿ ಹಾಗೂ ನಗರಸಭಾ ಸದಸ್ಯರ ಬಿ.ಕೆ.ಮೋಹನ್ ನೇಮಕಾತಿ ಪತ್ರ ನೀಡಿದರು.
    ಮಾಜಿ ಸಚಿವ ಕೆ. ಶಿವಮೂರ್ತಿ, ಲೋಕೇಶ್‌ನಾಯ್ಕ್, ಕೆಪಿಸಿಸಿ ಸದಸ್ಯ ಎಚ್.ಸಿ ದಾಸೇಗೌಡ, ಗ್ರಾಮಾಂತರ ಕಾಂಗ್ರೆಸ್ ಅಧ್ಯಕ್ಷ ಎಚ್ ಎಲ್ ಷಡಾಕ್ಷರಿ, ನಗರ ಅಧ್ಯಕ್ಷ ಟಿ. ಚಂದ್ರೇಗೌಡ, ಹಿಂದುಳಿದ ನಗರ ಘಟಕದ ಅಧ್ಯಕ್ಷ ಬಿ. ಗಂಗಾದರ್, ಜಿಲ್ಲಾ ಹಿಂದುಳಿದ ಘಟಕದ ಪ್ರಧಾನ ಕಾರ್ಯದರ್ಶಿ ರಾಘವೆಂದ್ರ, ಜಿಲ್ಲಾ ಕಾರ್ಯದರ್ಶಿ ಮಹೇಂದ್ರ, ಉಪಾಧ್ಯಕ್ಷ ಬಿ.ಎಸ್.ಗೋಪಾಲ್(ಗೋಪಿ), ಮಾಜಿ ಅಧ್ಯಕ್ಷರಾದ ತಳ್ಳಿಕಟ್ಟೆ ಪ್ರಕಾಶ್, ದಿನೇಶ್ ಸೇರಿದಂತೆ ಇನ್ನಿತರರು  ಉಪಸ್ಥಿತರಿದ್ದರು.

Saturday, February 26, 2022

ದ.ರಾ. ಬೇಂದ್ರೆ ಶತಮಾನ ಕಳೆದರೂ ಸಿಗಲಾರದ ಅಪರೂಪದ ಕವಿ : ಡಾ. ಸರ್ಫ್ರಾಜ್ ಚಂದ್ರಗುತ್ತಿ

ಭದ್ರಾವತಿ ತರೀಕೆರೆ ರಸ್ತೆಯ ನಯನ ಆಸ್ಪತ್ರೆ ಸಭಾಂಗಣದಲ್ಲಿ ಭೂಮಿಕಾ ವೇದಿಕೆ ವತಿಯಿಂದ ಶನಿವಾರ ಹಮ್ಮಿಕೊಳ್ಳಲಾಗಿದ್ದ 'ದ.ರಾ.ಬೇಂದ್ರೆ ಸವಿ ನೆನಪು' ಅಂಗವಾಗಿ ಅಂಬಿಕಾತನಯತ್ತ ಗೀತಗಾಯನ ಕಾರ್ಯಕ್ರಮದಲ್ಲಿ ಉಪನ್ಯಾಸಕ, ಸಾಹಿತಿ ಡಾ. ಸರ್ಫ್ರಾಜ್ ಚಂದ್ರಗುತ್ತಿ  ಪಾಲ್ಗೊಂಡು ಮಾತನಾಡಿದರು.
    ಭದ್ರಾವತಿ, ಫೆ. ೨೬: ವರಕವಿ ದತ್ತಾತ್ರೇಯ ರಾಮಚಂದ್ರ ಬೇಂದ್ರೆ ಕನ್ನಡ ನಾಡಿನ ಅಪರೂಪದ ಕವಿ ಎಂದರೆ ತಪ್ಪಾಗಲಾರದು. ಇಂತಹ ಕವಿ ಶತಮಾನ ಕಳೆದರೂ ಸಿಗಲಾರರು ಎಂದು ಉಪನ್ಯಾಸಕ, ಸಾಹಿತಿ ಡಾ. ಸರ್ಫ್ರಾಜ್ ಚಂದ್ರಗುತ್ತಿ ಹೇಳಿದರು.
    ಅವರು ಶನಿವಾರ ನಗರದ ತರೀಕೆರೆ ರಸ್ತೆಯ ನಯನ ಆಸ್ಪತ್ರೆ ಸಭಾಂಗಣದಲ್ಲಿ ಭೂಮಿಕಾ ವೇದಿಕೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ 'ದ.ರಾ.ಬೇಂದ್ರೆ ಸವಿ ನೆನಪು' ಅಂಗವಾಗಿ ಅಂಬಿಕಾತನಯತ್ತ ಗೀತಗಾಯನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
    ದ.ರಾ. ಬೇಂದ್ರೆಯವರು ತಮ್ಮ ಬದುಕನ್ನು ಪ್ರತಿಕ್ಷಣ, ಪ್ರತಿದಿನ ಉತ್ಸಾಹದೊಂದಿಗೆ ಕವಿತೆಗಳ ರಚನೆಯಲ್ಲಿ ಕಳೆದವರು. ಎಂದಿಗೂ ಉತ್ಸಾಹದಿಂದ ವಿಮುಖರಾದವರಲ್ಲ. ಅವರ ಪ್ರತಿಯೊಂದು ಕವಿತೆ ಅಪರೂಪದ ವಿಶೇಷತೆಗಳನ್ನು ಒಳಗೊಂಡಿವೆ. ಕವಿತೆ ಎಂದರೆ ಬೇಂದ್ರೆ, ಬೇಂದ್ರೆ ಎಂದರೆ ಕವಿತೆ ಎಂಬ ಅಭಿಪ್ರಾಯವನ್ನು ಬಹಳಷ್ಟು ವಿಮರ್ಶಕರು ವ್ಯಕ್ತಪಡಿಸಿದ್ದಾರೆ. ಸಾಹಿತ್ಯ ಕ್ಷೇತ್ರದಲ್ಲಿ ಬೇಂದ್ರೆಯವರ ಸಾಧನೆ ಅಸಾಧಾರಣ ಎಂದು ಬಣ್ಣಿಸಿದರು.
    ಪ್ರಾಸ್ತಾವಿಕವಾಗಿ ಮಾತನಾಡಿದ ವೇದಿಕೆ ಅಧ್ಯಕ್ಷ, ವೈದ್ಯ ಸಾಹಿತಿ ಡಾ. ಕೃಷ್ಣ ಎಸ್. ಭಟ್, ವೇದಿಕೆ ವತಿಯಿಂದ ಪ್ರತಿ ವರ್ಷ ವರಕವಿ ದ.ರಾ. ಬೇಂದ್ರೆಯವರನ್ನು ನೆನಪು ಮಾಡಿಕೊಳ್ಳುವ ಕಾರ್ಯಕ್ರಮಗಳನ್ನು ಆಚರಿಸಿಕೊಂಡು ಬರಲಾಗುತ್ತಿದೆ. ಈ ಬಾರಿ ಕೋವಿಡ್ ಹಿನ್ನಲೆಯಲ್ಲಿ ಅವರ ಜನ್ಮದಿನದಂದು ನಡೆಯಬೇಕಾದ ಕಾರ್ಯಕ್ರಮವನ್ನು ಇದೀಗ ಆಚರಿಸಲಾಗುತ್ತಿದೆ ಎಂದರು. ವೇದಿಕೆ ಕಾರ್ಯ ಚಟುವಟಿಕೆಗಳನ್ನು ಮತ್ತಷ್ಟು ಚುರುಕುಗೊಳಿಸಲು ಸಾಹಿತ್ಯದ ಬಗ್ಗೆ ಆಸಕ್ತಿ ಹೊಂದಿರುವ ಹೊಸಬರನ್ನು ಕಾರ್ಯಕಾರಿ ಸಮಿತಿಗೆ ಆಯ್ಕೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ವಿಭಿನ್ನವಾದ ಸಾಹಿತ್ಯಪರ ಕಾರ್ಯಕ್ರಮಗಳನ್ನು ಆಯೋಜಿಸಲು ನಿರ್ಧರಿಸಲಾಗಿದೆ. ವೇದಿಕೆಯ ಕಾರ್ಯಚಟುವಟಿಕೆಗಳಿಗೆ ಎಲ್ಲರೂ ಹೆಚ್ಚಿನ ಪ್ರೋತ್ಸಾಹ ನೀಡಬೇಕೆಂದು ಮನವಿ ಮಾಡಿದರು.
    ಆಕಾಶವಾಣಿ ಕಲಾವಿದ ಗುರುಮೂರ್ತಿ ಅಂಬಿಕಾತನಯದತ್ತ ಗೀತಗಾಯನ ನಡೆಸಿಕೊಟ್ಟರು. ವೇದಿಕೆ ಪ್ರಧಾನ ಕಾರ್ಯದರ್ಶಿ ಅಪರಂಜಿ ಶಿವರಾಜ್ ಸ್ವಾಗತಿಸಿದರು. ಕಾರ್ಯದರ್ಶಿ ಡಾ. ವೀಣಾಭಟ್, ಕಾರ್ಯಕಾರಿ ಸಮಿತಿ ಸದಸ್ಯರಾದ ಡಾ. ನಾಗರಾಜ್, ಎಂ. ಪ್ರಕಾಶ್, ಎಚ್. ಮಲ್ಲಿಕಾರ್ಜುನ, ಟಿ.ಎ ರಮೇಶ್, ಶಾರದ ಶ್ರೀನಿವಾಸ್, ವಿಶ್ವ ಹಿಂದೂ ಪರಿಷತ್ ಪ್ರಾಂತ್ಯ ಉಪಾಧ್ಯಕ್ಷ ಹಾ. ರಾಮಪ್ಪ, ವಿಐಎಸ್‌ಎಲ್ ಸಾರ್ವಜನಿಕ ಸಂಪರ್ಕಾಧಿಕಾರಿ ಎಲ್. ಪ್ರವೀಣ್‌ಕುಮಾರ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.  ಪುಷ್ಪ ಸುಬ್ರಹ್ಮಣ್ಯ ಮತ್ತು ರಾಧಾ ಕೃಷ್ಣಭಟ್ ಪ್ರಾರ್ಥಿಸಿದರು. ಅನ್ನಪೂರ್ಣ ಇತ್ತೀಚೆಗೆ ನಿಧನ ಭಾರತರತ್ನ, ಗಾನ ಕೋಗಿಲೆ ಲತಾಮಂಗೇಶ್ಕರ್‌ರವರ ಕನ್ನಡ ಚಲನಚಿತ್ರ ಗೀತೆ ಸುಶ್ರಾವ್ಯವಾಗಿ ಹಾಡಿದರು.
    ಕಾರ್ಯಕ್ರಮ ಆರಂಭದಲ್ಲಿ ಲತಾಮಂಗೇಶ್ಕರ್‌ರವರ ನಿಧನ ಸಂತಾಪ ಸೂಚಿಸಿ ಮೌನಾಚರಣೆ ನಡೆಸಲಾಯಿತು.



ಬಿ.ಎಸ್.ವೈ ಹುಟ್ಟುಹಬ್ಬ : ಅಭಿಮಾನಿ ಬಳಗದಿಂದ ವಿಶೇಷ ಪೂಜೆ

    ಭದ್ರಾವತಿ, ಫೆ. ೨೬: ನಾನು ಕಂಡ ಹಿರಿಯ ರಾಜಕೀಯ ಮುತ್ಸದ್ದಿ, ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರ ಹುಟ್ಟುಹಬ್ಬದ ಅಂಗವಾಗಿ ಯಡಿಯೂರಪ್ಪ ಅಭಿಮಾನಿಗಳ ಬಳಗದ ವತಿಯಿಂದ ಫೆ.೨೭ರ ಭಾನುವಾರ ಬೆಳಿಗ್ಗೆ ೮ ಗಂಟೆಗೆ ಹೊಸಮನೆ ಹಿಂದೂ ಮಹಾಸಭಾ ಗಣಪತಿ ದೇವಸ್ಥಾನದಲ್ಲಿ ವಿಶೇಷ ಹಮ್ಮಿಕೊಳ್ಳಲಾಗಿದೆ.
    ಪ್ರತಿ ವರ್ಷ ಯಡಿಯೂರಪ್ಪ ಹುಟ್ಟುಹಬ್ಬವನ್ನು ಅಭಿಮಾನಿಗಳ ಬಳಗದಿಂದ ವಿಶೇಷವಾಗಿ ಆಚರಿಸಿಕೊಂಡು ಬರಲಾಗುತ್ತಿದೆ. ಈ ಬಾರಿ ಬಡ ವರ್ಗದ ಅಸಹಾಯಕರಿಗೆ ಮಲಗುವ ಹೊದಿಕೆ(ಬ್ಲಾಂಕೆಟ್) ವಿತರಣೆ ಕಾರ್ಯಕ್ರಮ ಸಹ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮ ಯಶಸ್ವಿಗೊಳಿಸಲು ಅಭಿಮಾನಿ ಬಳಗದ ವತಿಯಿಂದ ಯುವ ಮುಖಂಡ ಕೆ. ಮಂಜುನಾಥ್ ಕದಿರೇಶ್ ಕೋರಿದ್ದಾರೆ.

ಮಾತೃ ಭಾಷೆ ಭವಿಷ್ಯದ ಬೆಳವಣಿಗೆಗೆ ಪೂರಕ : ಕೋಗಲೂರು ತಿಪ್ಪೇಸ್ವಾಮಿ

ಭದ್ರಾವತಿ ನ್ಯೂಟೌನ್ ಶ್ರೀ ಸತ್ಯಸಾಯಿ ಸಮಗ್ರ ಶಿಕ್ಷಣ ಸಂಸ್ಥೆಯ ಸಾಯಿ ಮಂದಿರದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ವತಿಯಿಂದ ವಿಶ್ವ ಮಾತೃ ಭಾಷಾ ದಿನಾಚರಣೆ ಅಂಗವಾಗಿ ಶನಿವಾರ ಹಮ್ಮಿಕೊಳ್ಳಲಾಗಿದ್ದ ಮಾತೃ ಭಾಷಾ ಮಹತ್ವ ಕಾರ್ಯಕ್ರಮವನ್ನು ಶ್ರೀ ಸತ್ಯಸಾಯಿ ಸೇವಾ ಸಂಸ್ಥೆಗಳ ರಾಜ್ಯ ಸಂಯೋಜಕ ಡಿ. ಪ್ರಭಾಕರ ಬೀರಯ್ಯ  ಉದ್ಘಾಟಿಸಿದರು.
    ಭದ್ರಾವತಿ, ಫೆ. ೨೬: ತಾಯಿಯಂತೆ ಮಾತೃ ಭಾಷೆಯನ್ನು ಪ್ರೀತಿಸಬೇಕು. ಮಾತೃ ಭಾಷೆ ಭವಿಷ್ಯದ ಬೆಳವಣಿಗೆಗೆ ಪೂರಕವಾಗಿದೆ ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಕೋಗಲೂರು ತಿಪ್ಪೇಸ್ವಾಮಿ ಹೇಳಿದರು.
    ಅವರು ಶನಿವಾರ ನ್ಯೂಟೌನ್ ಶ್ರೀ ಸತ್ಯಸಾಯಿ ಸಮಗ್ರ ಶಿಕ್ಷಣ ಸಂಸ್ಥೆಯ ಸಾಯಿ ಮಂದಿರದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ವತಿಯಿಂದ ವಿಶ್ವ ಮಾತೃ ಭಾಷಾ ದಿನಾಚರಣೆ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಮಾತೃ ಭಾಷಾ ಮಹತ್ವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
    ಅಖಂಡ ಭಾರತ ಪಾಕಿಸ್ತಾನ ಮತ್ತು ಬಾಂಗ್ಲಾದೇಶಗಳಾಗಿ ವಿಭಜನೆಯಾದ ಸಂದರ್ಭದಲ್ಲಿ ಮಾತೃ ಭಾಷಾ ಸಮಸ್ಯೆ ಉಲ್ಬಣವಾಯಿತು. ಈ ಸಂದರ್ಭದಲ್ಲಿ ನಡೆದ ಹೋರಾಟದ ಹಿನ್ನಲೆಯಲ್ಲಿ ವಿಶ್ವ ಮಾತೃ ಭಾಷಾ ದಿನಾಚರಣೆ ಅಸ್ತಿತ್ವಕ್ಕೆ ಬಂದಿತು. ಮಾತೃ ಭಾಷೆಯ ಮಹತ್ವ ಪ್ರತಿಯೊಬ್ಬರು ಅರಿತುಕೊಳ್ಳಬೇಕು. ಪ್ರತಿಯೊಬ್ಬರು ಅವರವರ ಮಾತೃಭಾಷೆಯಲ್ಲಿ ಕಲಿಕೆ ಆರಂಭಿಸಿದಾಗ ಮಾತ್ರ ನಮ್ಮ ಬೆಳವಣಿಗೆಯಲ್ಲಿ ಪರಿಪೂರ್ಣತೆ ಸಾಧಿಸಲು ಸಾಧ್ಯ. ಈ ಹಿನ್ನಲೆಯಲ್ಲಿ ಮಾತೃ ಭಾಷೆಯ ಮಹತ್ವ ತಿಳಿಸಿಕೊಡುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬರಲಾಗುತ್ತಿದೆ. ಶಾಲಾ ಮಕ್ಕಳು ಇದರ ಸದುಪಯೋಗಪಡೆದುಕೊಳ್ಳಬೇಕೆಂದರು.
    ಶ್ರೀ ಸತ್ಯಸಾಯಿ ಸೇವಾ ಸಂಸ್ಥೆಗಳ ರಾಜ್ಯ ಸಂಯೋಜಕ ಡಿ. ಪ್ರಭಾಕರ ಬೀರಯ್ಯ ಕಾರ್ಯಕ್ರಮ ಉದ್ಘಾಟಿಸಿದರು. ವೇದಿಕೆ ಅಧ್ಯಕ್ಷೆ ಎಂ.ಎಸ್ ಸುಧಾಮಣಿ ಅಧ್ಯಕ್ಷತೆ ವಹಿಸಿದ್ದರು.
    ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ ಸೋಮಶೇಖರಯ್ಯ, ವೇದಿಕೆ ಉಪಾಧ್ಯಕ್ಷ ವಿಠಲ್‌ರಾವ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಿಕ್ಷಕಿ ವಿಜಯಲಕ್ಷ್ಮಿ ಪ್ರಾರ್ಥಿಸಿದರು. ವೇದಿಕೆ ಉಪಾಧ್ಯಕ್ಷೆ ಸುಮತಿ ಕಾರಂತ್ ಕಾರ್ಯಕ್ರಮ ನಿರೂಪಿಸಿದರು.
    ಕಸಾಪ ತಾಲೂಕು ಕಾರ್ಯದರ್ಶಿ ಎಚ್. ತಿಮ್ಮಪ್ಪ, ಬಿ. ಗುರು, ಶ್ರೀ ಸತ್ಯಸಾಯಿ ಸಮಗ್ರ ಶಿಕ್ಷಣ ಸಂಸ್ಥೆಯ ಶಿಕ್ಷಕರು, ವಿದ್ಯಾರ್ಥಿಗಳು, ಸಿಬ್ಬಂದಿಗಳು ಪಾಲ್ಗೊಂಡಿದ್ದರು.

ಪ್ರಜ್ಞಾವಂತ ಯುವ ಸದಸ್ಯರ ಪಡೆಯನ್ನು ರೂಪಿಸಲು ಡಿಜಿಟಲ್ ಸದಸ್ಯತ್ವ ಅಭಿಯಾನ : ಕೆ. ಶಿವಮೂರ್ತಿ

ಭದ್ರಾವತಿಯಲ್ಲಿ ಶನಿವಾರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಶಾಸಕ ಬಿ.ಕೆ ಸಂಗಮೇಶ್ವರ್ ಸಹೋದರ ಬಿ.ಕೆ ಶಿವಕುಮಾರ್‌ರವರ ಮಾಧವನಗರದ ಮನೆ ಹಿಂಭಾಗದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾಂಗ್ರೆಸ್ ಪಕ್ಷದ ಡಿಜಿಟಲ್ ಸದಸ್ಯತ್ವ ನೋಂದಣಿ ಅಭಿಯಾನ ಹಾಗೂ ಮೇಕೆದಾಟು ಯೋಜನೆಯ ಪೂರ್ವಭಾವಿಯಲ್ಲಿ ಪಾಲ್ಗೊಂಡು ಮಾತನಾಡಿದರು.
    ಭದ್ರಾವತಿ, ಫೆ. ೨೬: ಈ ದೇಶದ ಭವಿಷ್ಯದ ಆಡಳಿತಕ್ಕೆ ಕಾಂಗ್ರೆಸ್ ಪಕ್ಷದ ಮಹತ್ವ ಅರಿತುಕೊಂಡಿರುವ ಪ್ರಜ್ಞಾವಂತ ಯುವ ಸದಸ್ಯರ ಪಡೆಯನ್ನು ರೂಪಿಸುವ ನಿಟ್ಟಿನಲ್ಲಿ ಇದೀಗ ಡಿಜಿಟಲ್ ಸದಸ್ಯತ್ವ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಸಚಿವ ಕೆ. ಶಿವಮೂರ್ತಿ ಹೇಳಿದರು.
    ಅವರು ಶನಿವಾರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಶಾಸಕ ಬಿ.ಕೆ ಸಂಗಮೇಶ್ವರ್ ಸಹೋದರ ಬಿ.ಕೆ ಶಿವಕುಮಾರ್‌ರವರ ಮಾಧವನಗರದ ಮನೆ ಹಿಂಭಾಗದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾಂಗ್ರೆಸ್ ಪಕ್ಷದ ಡಿಜಿಟಲ್ ಸದಸ್ಯತ್ವ ನೋಂದಣಿ ಅಭಿಯಾನ ಹಾಗೂ ಮೇಕೆದಾಟು ಯೋಜನೆಯ ಪೂರ್ವಭಾವಿಯಲ್ಲಿ ಪಾಲ್ಗೊಂಡು ಮಾತನಾಡಿದರು.
    ಕಾಂಗ್ರೆಸ್ ಪಕ್ಷ ಈ ದೇಶಕ್ಕೆ ನೀಡಿರುವ ಕೊಡುಗೆಗಳನ್ನು ಅರಿತುಕೊಂಡಿರುವ ಪ್ರಜ್ಞಾವಂತರು ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯತ್ವ ಪಡೆಯುವ ಮೂಲಕ ಭವಿಷ್ಯದಲ್ಲಿ ಸದೃಢವಾದ ದೇಶ ನಿರ್ಮಾಣಕ್ಕೆ ಮುಂದಾಗಬೇಕು. ಇದೀಗ ಸದಸ್ಯತ್ವ ಶುಲ್ಕ ರು. ೫ ನಿಗದಿಪಡಿಸಲಾಗಿದೆ. ಪಕ್ಷಕ್ಕೆ ಡಿಜಿಟಲ್ ಆಧಾರಿತ ಸದಸ್ಯತ್ವದಿಂದ ಹಲವು ಪ್ರಯೋಜನಗಳಾಗಲಿವೆ. ಈ ಹಿನ್ನಲೆಯಲ್ಲಿ ಡಿಜಿಟಲ್ ಸದಸ್ಯತ್ವಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದರು.
    ಬೃಹತ್ ಮಹಾನಗರವಾಗಿರುವ ಬೆಂಗಳೂರಿನ ಮುಂದಿನ ಭವಿಷ್ಯದ ಆಲೋಚನೆಯೊಂದಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಪಕ್ಷದಿಂದ ಜಾಗೃತಿವಹಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಕಾವೇರಿ ನದಿ ನೀರನ್ನು ಸದ್ಬಳಕೆ ಮಾಡಿಕೊಳ್ಳಲು ಮೇಕೆದಾಟು ಯೋಜನೆಗಾಗಿ ಹೋರಾಟ ನಡೆಸಲಾಗುತ್ತಿದೆ. ಫೆ.೨೭ರಿಂದ ೫ ದಿನಗಳ ವರೆಗೆ ನಡೆಯುವ ಈ ಹೋರಾಟದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.
    ವೇದಿಕೆಯಲ್ಲಿ ಕೆಪಿಸಿಸಿ ಸದಸ್ಯತ್ವ ನೋಂದಣಿ ಹಾಗು ತಾಂತ್ರಿಕ ಸಮಿತಿಯ ಉಸ್ತುವಾರಿಗಳಾದ ಬಾಲಕೃಷ್ಣ, ಟಿ. ಲೋಕೇಶ್‌ನಾಯ್ಕ್, ತಸ್ರೀಫ್, ರೇಖಾ ಶ್ರೀನಿವಾಸ್, ಸ್ಥಳೀಯ ಪ್ರಮುಖರಾದ ಎಚ್.ಸಿ ದಾಸೇಗೌಡ,  ಬಿ.ಕೆ ಮೋಹನ್, ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ಉಪಾಧ್ಯಕ್ಷ ಚನ್ನಪ್ಪ, ಬ್ಲಾಕ್ ಕಾಂಗ್ರೆಸ್ ಗ್ರಾಮಾಂತರ ಅಧ್ಯಕ್ಷ ಎಚ್.ಎಲ್ ಷಡಾಕ್ಷರಿ, ಬಾಬಾಜಾನ್, ಫೀರ್‌ಷರೀಫ, ಸಿ.ಎಂ ಖಾದರ್, ಅಮೀರ್‌ಜಾನ್, ಬಿ. ಗಂಗಾಧರ್, ರಮೇಶ್ ಶಂಕರಘಟ್ಟ, ಪ್ರವೀಣ್‌ನಾಯ್ಕ, ವಿನೋದ್‌ಕುಮಾರ್, ಅಫ್ತಾಬ್ ಅಹಮದ್, ಕೃಷ್ಣನಾಯ್ಕ, ಅಭಿಲಾಷ್, ಕಾಂಗ್ರೆಸ್ ಪಕ್ಷದ ಎಲ್ಲಾ ನಗರಸಭಾ ಸದಸ್ಯರು ಸೇರಿದಂತೆ  ಇನ್ನಿತರರು ಉಪಸ್ಥಿತರಿದ್ದರು.
    ಗ್ರಾಮ ಪಂಚಾಯತ್ ಚುನಾಯಿತ ಸದಸ್ಯರು, ಡಿಜಿಟಲ್ ನೋಂದಣಿ ವಿಭಾಗದ ಸಿಬ್ಬಂದಿಗಳು ಹಾಗು ಪಕ್ಷದ ಕಾರ್ಯಕರ್ತರು ಪಾಲ್ಗೊಂಡಿದ್ದರು. ಬ್ಲಾಕ್ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಟಿ. ಚಂದ್ರೇಗೌಡ ಸ್ವಾಗತಿಸಿದರು.


ಭದ್ರಾವತಿ ಭದ್ರಾವತಿಯಲ್ಲಿ ಶನಿವಾರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಶಾಸಕ ಬಿ.ಕೆ ಸಂಗಮೇಶ್ವರ್ ಸಹೋದರ ಬಿ.ಕೆ ಶಿವಕುಮಾರ್‌ರವರ ಮಾಧವನಗರದ ಮನೆ ಹಿಂಭಾಗದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾಂಗ್ರೆಸ್ ಪಕ್ಷದ ಡಿಜಿಟಲ್ ಸದಸ್ಯತ್ವ ನೋಂದಣಿ ಅಭಿಯಾನ ಹಾಗೂ ಮೇಕೆದಾಟು ಯೋಜನೆಯ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡಿರುವ ಗ್ರಾಮ ಪಂಚಾಯತ್ ಚುನಾಯಿತ ಸದಸ್ಯರು, ಡಿಜಿಟಲ್ ನೋಂದಣಿ ವಿಭಾಗದ ಸಿಬ್ಬಂದಿಗಳು ಹಾಗು ಪಕ್ಷದ ಕಾರ್ಯಕರ್ತರು.

Friday, February 25, 2022

ಕುವೆಂಪು ವಿ.ವಿ ಭ್ರಷ್ಟಾಚಾರ : ಕ್ರಮಕ್ಕೆ ಸಿ.ಎಂ ಸೂಚನೆ


ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ನಡೆದಿರುವ ನಿರ್ಣಯಗಳ ಹಿಂದೆ ನಿಯಮ ಬಾಹಿರ, ಅವ್ಯವಹಾರ ಹಾಗು ಭ್ರಷ್ಟಾಚಾರದ ಆರೋಪಕ್ಕೆ ಸಂಬಂಧಿಸಿದಂತೆ ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರು ಸಲ್ಲಿಸಿದ್ದ ಮನವಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪೂರಕವಾಗಿ ಸ್ಪಂದಿಸಿದ್ದು, ಸೂಕ್ತ ಕ್ರಮಕ್ಕೆ ಆದೇಶಿಸಿರುವುದು.
    ಭದ್ರಾವತಿ, ಫೆ. ೨೫: ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ನಡೆದಿರುವ ನಿರ್ಣಯಗಳ ಹಿಂದೆ ನಿಯಮ ಬಾಹಿರ, ಅವ್ಯವಹಾರ ಹಾಗು ಭ್ರಷ್ಟಾಚಾರದ ಆರೋಪಕ್ಕೆ ಸಂಬಂಧಿಸಿದಂತೆ ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರು ಸಲ್ಲಿಸಿದ್ದ ಮನವಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪೂರಕವಾಗಿ ಸ್ಪಂದಿಸಿದ್ದು, ಸೂಕ್ತ ಕ್ರಮಕ್ಕೆ ಆದೇಶಿಸಿದ್ದಾರೆ.
    ಸಿಂಡಿಕೇಟ್ ಸದಸ್ಯರಾದ ಜಿ. ಧರ್ಮಪ್ರಸಾದ್, ಬಳ್ಳೇಕೆರೆ ಸಂತೋಷ್, ಎಚ್.ಬಿ ರಮೆಶ್‌ಬಾಬು, ಎಚ್. ರಾಮಲಿಂಗಪ್ಪ ಸೇರಿದಂತೆ ಇನ್ನಿತರರು ಫೆ.೯ರಂದು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದರು.
    ಮುಖ್ಯಮಂತ್ರಿಗಳು ಪೂರಕವಾಗಿ ಸ್ಪಂದಿಸಿ ಕ್ರಮ ಕೈಗೊಳ್ಳುವಂತೆ ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಿದ್ದಾರೆಂದು ಮುಖ್ಯಮಂತ್ರಿಗಳ ಅಧೀನ ಕಾರ್ಯದರ್ಶಿ ಸಿ.ವಿ ಹರಿದಾಸನ್ ತಿಳಿಸಿದ್ದಾರೆ.

ಶತಾಯುಷಿ, ಗಟ್ಟಿಗಿತ್ತಿ ಪಾರ್ವತಮ್ಮ ಷಡಾಕ್ಷರಯ್ಯ ನಿಧನ

ಪಾರ್ವತಮ್ಮ ಷಡಾಕ್ಷರಯ್ಯ
    ಭದ್ರಾವತಿ, ಫೆ. ೨೫: ತಾಲೂಕಿನ ಗೋಣಿಬೀಡು ಗ್ರಾಮದ ಶತಾಯುಷಿ, ಗಟ್ಟಿಗಿತ್ತಿ ಎಂದೇ ಹೆಸರಾಗಿದ್ದ ಪಾರ್ವತಮ್ಮ ಷಡಾಕ್ಷರಯ್ಯ(೧೦೧) ಶುಕ್ರವಾರ ನಿಧನ ಹೊಂದಿದರು.
    ಜ್ಯೂನಿಯರ್ ಅಂಬರೀಷ್ ಎಂದೇ ಹೆಸರಾಗಿರುವ ಕಲಾವಿದ ಆರಾಧ್ಯ ಸೇರಿದಂತೆ ೫ ಗಂಡು ಮತ್ತು ೪ ಹೆಣ್ಣು ಮಕ್ಕಳನ್ನು ಹೊಂದಿದ್ದರು. ಪಾರ್ವತಮ್ಮ ೯೯ರ ಹರೆಯದಲ್ಲೂ ಗ್ರಾಮದಲ್ಲಿ ಪಾದರಸದಂತೆ ಓಡಾಡಿಕೊಂಡು ಭತ್ತ ನಾಟಿ ಸೇರಿದಂತೆ ಗದ್ದೆ ಕೆಲಸಗಳಲ್ಲಿ ಸಕ್ರಿಯವಾಗಿದ್ದರು. ಇವರ ಕ್ರಿಯಾಶೀಲತೆಯನ್ನು ಕಂಡು ಗ್ರಾಮಸ್ಥರು ಬೆರಗಾಗಿದ್ದರು. ಇವರ ಅಂತ್ಯಕ್ರಿಯೆ ಶನಿವಾರ ಮಧ್ಯಾಹ್ನ ಗ್ರಾಮದಲ್ಲಿರುವ ಇವರ ತೋಟದಲ್ಲಿ ನಡೆಯಲಿದೆ.
    ಇವರ ನಿಧನಕ್ಕೆ ಶಾಸಕ ಬಿ.ಕೆ ಸಂಗಮೇಶ್ವರ್, ಜೆಡಿಎಸ್ ಮುಖಂಡರಾದ ಶಾರದ ಅಪ್ಪಾಜಿ, ಬ್ಲಾಕ್ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಟಿ. ಚಂದ್ರೇಗೌಡ, ನೋಟರಿ ಆರ್.ಎಸ್ ಶೋಭಾ, ಜಯಕರ್ನಾಟಕ ಸಂಘಟನೆ ಜಿಲ್ಲಾ ಉಪಾಧ್ಯಕ್ಷ ತ್ಯಾಜರಾಜ್ ಸೇರಿದಂತೆ ತಾವರಘಟ್ಟ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು, ಸ್ಥಳೀಯ ಮುಖಂಡರು, ಗ್ರಾಮಸ್ಥರು ಸಂತಾಪ ಸೂಚಿಸಿದ್ದಾರೆ.

ಫೆ.೨೭ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ

ಭದ್ರಾವತಿ, ಫೆ. ೨೫: ಪ್ರತಿ ವರ್ಷದಂತೆ ಈ ಬಾರಿ ಸಹ ಫೆ.೨೭ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
    ಅಂದು ಬೆಳಿಗ್ಗೆ ೮ ಗಂಟೆಗೆ ಹಳೇನಗರದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು. ಸ್ಥಳೀಯ ಜನಪ್ರತಿನಿಧಿಗಳು, ತಾಲೂಕು ಆರೋಗ್ಯ ಇಲಾಖೆ ಅಧಿಕಾರಿಗಳು, ವಿವಿಧ ಸ್ವಯಂ ಸೇವಾ ಸಂಸ್ಥೆಗಳ ಪ್ರಮುಖರು ಉಪಸ್ಥಿತರಿರುವರು. ಕಾರ್ಯಕ್ರಮ ಯಶಸ್ವಿಗೊಳಿಸಿಕೊಡುವಂತೆ ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ವಿ ಅಶೋಕ್ ಕೋರಿದ್ದಾರೆ.

ಅನ್ಯಾಯದ ವಿರುದ್ಧ ಧ್ವನಿ ಎತ್ತದಂತೆ ಕುತಂತ್ರ : ಪ್ರತಿಭಟನೆ

ನಟ, ಪ್ರಗತಿಪರ ಚಿಂತಕ ಚೇತನ್ ಬಿಡುಗಡೆಗೆ  ಆಗ್ರಹ


ಪ್ರಗತಿಪರ ಸಂಘಟನೆಗಳ ವತಿಯಿಂದ ಶುಕ್ರವಾರ ಭದ್ರಾವತಿ ತಾಲೂಕು ಕಛೇರಿ ಮುಂಭಾಗ ನಟ, ಪ್ರಗತಿಪರ ಚಿಂತಕ ಚೇತನ್ ಬಂಧನ ವಿರೋಧಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
    ಭದ್ರಾವತಿ, ಫೆ. ೨೫: ಈ ದೇಶದ ಪ್ರಜೆಗಳ ಸಂವಿಧಾನ ಬದ್ಧ ಹಕ್ಕುಗಳನ್ನು ಬಲವಂತವಾಗಿ ಮೊಟಕುಗೊಳಿಸುವ ನಿಟ್ಟಿನಲ್ಲಿ ಪ್ರಯತ್ನಿಸಲಾಗುತ್ತಿದ್ದು, ಯಾರು ಸಹ ಅನ್ಯಾಯದ ವಿರುದ್ಧ ಧ್ವನಿ ಎತ್ತದಂತೆ ಎಚ್ಚರಿಕೆ ನೀಡಲಾಗುತ್ತಿದೆ ಎಂದು ನಿವೃತ್ತ ಉಪನ್ಯಾಸಕ, ಪ್ರಗತಿಪರ ಚಿಂತಕ ಪ್ರೊ. ಎಂ. ಚಂದ್ರಶೇಖರಯ್ಯ ಆರೋಪಿಸಿದರು.
    ಅವರು ಶುಕ್ರವಾರ ಪ್ರಗತಿಪರ ಸಂಘಟನೆಗಳ ವತಿಯಿಂದ ತಾಲೂಕು ಕಛೇರಿ ಮುಂಭಾಗ ನಟ, ಪ್ರಗತಿಪರ ಚಿಂತಕ ಚೇತನ್ ಬಂಧನ ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದರು.
    ದೇಶದಲ್ಲಿ ಅನ್ಯಾಯದ ವಿರುದ್ಧ ಯಾರು ಸಹ ಧ್ವನಿ ಎತ್ತುವಂತಿಲ್ಲ. ಒಂದು ವೇಳೆ ವಿರುದ್ಧವಾಗಿ ನಡೆದುಕೊಂಡಲ್ಲಿ ಅವರ ವಿರುದ್ಧ ಬಲವಂತವಾಗಿ ಕ್ರಮ ಕೈಗೊಂಡು ಧ್ವನಿ ಎತ್ತದಂತೆ ಎಚ್ಚರಿಸುವ ಮೂಲಕ ಸಮಾಜದಲ್ಲಿ ಆತಂಕ ಉಂಟು ಮಾಡಲಾಗುತ್ತಿದೆ. ಈ ಹಿನ್ನಲೆಯಲ್ಲಿ ದೇಶದ ಬಹುತೇಕ ಕಾರಾಗೃಹಗಳಲ್ಲಿ ಕಾರಣವಿಲ್ಲದೆ ಬಂಧಿತರಾಗಿರುವವರು ಹೆಚ್ಚಿನ ಸಂಖ್ಯೆಯಲ್ಲಿದ್ದು, ಈ ಸಾಲಿನಲ್ಲಿ ಇದೀಗ ನಟ, ಪ್ರಗತಿಪರ ಚಿಂತಕ ಚೇತನ್ ಸಹ ಸೇರಿಕೊಂಡಿದ್ದಾರೆಂದು ಆರೋಪಿಸಿದರು.
    ಪೊಲೀಸರು ತಕ್ಷಣ ಚೇತನ್‌ರನ್ನು ಬಿಡುಗಡೆಗೊಳಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿ ತಹಸೀಲ್ದಾರ್‌ರವರಿಗೆ ಮನವಿ ಸಲ್ಲಿಸಲಾಯಿತು.  
    ಪ್ರಮುಖವಾದ ಸುರೇಶ್, ಸತ್ಯ ಭದ್ರಾವತಿ, ಚಿನ್ನಯ್ಯ, ಬಾಲಕೃಷ್ಣ, ಜಿ. ರಾಜು, ನಿತ್ಯಾನಂದ, ಜಯರಾಜ್, ಮಹೇಶ್, ಅರುಣ್, ಈಶ್ವರಪ್ಪ, ಜೆಬಿಟಿ ಬಾಬು, ರಾಜೇಂದ್ರ, ಜಗದೀಶ್, ಟಿಪ್ಪು ಸುಲ್ತಾನ್, ವೆಂಕಟೇಶ್, ಜಿಂಕ್ ಲೈನ್ ಮಣಿ, ಕಾಣಿಕ್‌ರಾಜ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

ಫೆ.೨೬ರಂದು ಡಿಜಿಟಲ್ ಸದಸ್ಯತ್ವ ನೋಂದಣಿ ಅಭಿಯಾನ, ಮೇಕೆದಾಟು ಯೋಜನೆ ಪೂರ್ವ ಭಾವಿ ಸಭೆ

    ಭದ್ರಾವತಿ, ಫೆ. ೨೫ : ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಕಾಂಗ್ರೆಸ್ ಪಕ್ಷದ ಡಿಜಿಟಲ್ ಸದಸ್ಯತ್ವ ನೋಂದಣಿ ಅಭಿಯಾನ ಹಾಗೂ ಮೇಕೆದಾಟು ಯೋಜನೆಯ ಪೂರ್ವಭಾವಿ ಸಭೆ ಫೆ.೨೬ರಂದು  ಬೆಳಿಗ್ಗೆ ೧೧ ಗಂಟೆಗೆ ಶಾಸಕ ಬಿ.ಕೆ ಸಂಗಮೇಶ್ವರ್ ಸಹೋದರ ಬಿ.ಕೆ ಶಿವಕುಮಾರ್‌ರವರ ಮಾಧವನಗರದ ಮನೆ ಹಿಂಭಾಗದ ಆವರಣದಲ್ಲಿ ನಡೆಯಲಿದೆ.
    ಶಾಸಕ ಬಿ.ಕೆ ಸಂಗಮೇಶ್ವರ್,  ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಚ್.ಎಸ್ ಸುಂದರೇಶ್, ಕೆಪಿಸಿಸಿ ಉಸ್ತುವಾರಿ ರೇಖಾ ಶ್ರೀ ನಿವಾಸ್, ಜಿಲ್ಲಾ ಉಸ್ತುವಾರಿ ಹಾಗು ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವ ನಾರಾಯಣ, ಕೆಪಿಸಿಸಿ ಡಿಜಿಟಲ್ ಕಮಿಟಿ ಅಧ್ಯಕ್ಷ ರಘುನಂದಾ ರಾಮಣ್ಣ, ಮಾಜಿ ಸಂಸದ ಬಿ.ಎನ್ ಚಂದ್ರಪ್ಪ, ಪ್ರಮುಖರಾದ ಆಗ ಸುಲ್ತಾನ್, ಕೆ. ಶಿವಮೂರ್ತಿ, ಪ್ರಫುಲ್ಲಾ ಮಧುಕರ್, ಬಾಲಕೃಷ್ಣ, ಟಿ ಲೋಕೇಶ್‌ನಾಯ್ಕ್, ತಸ್ರೀಫ್ ಸೇರಿದಂತೆ ಪಕ್ಷದ ಮುಖಂಡರು, ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಉಪಸ್ಥಿತರಿರುವರು.  
    ಗ್ರಾಮ ಪಂಚಾಯತ್ ಚುನಾಯಿತ ಸದಸ್ಯರು, ಡಿಜಿಟಲ್ ನೋಂದಣಿ ವಿಭಾಗದ ಸಿಬ್ಬಂದಿಗಳು ಹಾಗು ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಕೋರಲಾಗಿದೆ.

Thursday, February 24, 2022

ಜನಪರ ಯೋಜನೆಗಳು ಜಾರಿಗೆ ಬರದಂತೆ ತಡೆಯಲು ಕಾಂಗ್ರೆಸ್ ಕುತಂತ್ರ

೨ ಕೋ. ರು. ವೆಚ್ಚದ ಅಧಿವೇಶನ ಮೊಟಕು : ಎಂ.ಪಿ ರೇಣುಕಾಚಾರ್ಯ


ಭದ್ರಾವತಿ ಹೊಸಮನೆ ಶಿವಾಜಿ ವೃತ್ತದಲ್ಲಿ ಬಿಜೆಪಿ ಮಂಡಲ ವತಿಯಿಂದ ಗುರುವಾರ ಹಮ್ಮಿಕೊಳ್ಳಲಾಗಿದ್ದ ಜನ ವಿರೋಧಿ ಕಾಂಗ್ರೆಸ್ ವಿರುದ್ಧ ಜನಜಾಗೃತಿ ಸಭೆಯಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ, ಮಾಜಿ ಸಚಿವ ಎಂ.ಪಿ ರೇಣುಕಾಚಾರ್ಯ ಪಾಲ್ಗೊಂಡು ಮಾತನಾಡಿದರು.
    ಭದ್ರಾವತಿ, ಫೆ. ೨೪: ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಜನಪರ ಯೋಜನೆಗಳು ಜಾರಿಗೆ ಬರದಂತೆ ತಡೆಯುವ ಉದ್ದೇಶದಿಂದ ವಿಧಾನಸಭೆ ಅಧಿವೇಶನ ಮೊಟಕುಗೊಳ್ಳುವಂತೆ ವಿರೋಧ ಪಕ್ಷವಾದ ಕಾಂಗ್ರೆಸ್ ಈ ಬಾರಿ ಕುತಂತ್ರ ನಡೆಸಿತು ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ, ಮಾಜಿ ಸಚಿವ ಎಂ.ಪಿ ರೇಣುಕಾಚಾರ್ಯ ಆರೋಪಿಸಿದರು.
    ಅವರು ಗುರುವಾರ ಹೊಸಮನೆ ಶಿವಾಜಿ ವೃತ್ತದಲ್ಲಿ ಬಿಜೆಪಿ ಮಂಡಲ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಜನ ವಿರೋಧಿ ಕಾಂಗ್ರೆಸ್ ವಿರುದ್ಧ ಜನಜಾಗೃತಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.
    ಹಿಜಾಬ್ ಸಂಬಂಧ ಕಾಂಗ್ರೆಸ್ ಅನುಸರಿಸುತ್ತಿರುವ ಗೊಂದಲದ ನಿಲುವಿನಿಂದ ಜನರ ಮನಸ್ಸನ್ನು ಬೇರೆಡೆಗೆ ಸೆಳೆಯುವ ಉದ್ದೇಶದಿಂದ ವಿನಾಕಾರಣ ಸುಮಾರು ೨ ಕೋ. ರು. ವೆಚ್ಚದ ಅಧಿವೇಶನ ಹಾಳು ಮಾಡಲಾಗಿದೆ. ಸರ್ಕಾರಕ್ಕೆ ಸೂಕ್ತ ಸಲಹೆ, ಸಹಕಾರ ನೀಡುವ ಮೂಲಕ ರಾಜ್ಯದ ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕಾದ ವಿರೋಧ ಪಕ್ಷ ಅಸಭ್ಯ ಘೋಷಣೆಗಳ ಮೂಲಕ ಕೀಳುಮಟ್ಟದ ಸಂಸ್ಕೃತಿಯನ್ನು ಪ್ರದರ್ಶಿಸಿದೆ. ಮತ್ತೊಂದೆಡೆ ಹಿಜಾಬ್ ಸಂಬಂಧ ಹೋರಾಟ ನಡೆಸುವ ಕೆಲವೇ ಕೆಲವು ಮಂದಿಗೆ ಕಾನೂನು ಹೋರಾಟ ನಡೆಸಲು ಎಲ್ಲಾ ರೀತಿಯ ಸಿದ್ದತೆಯನ್ನು ಕಾಂಗ್ರೆಸ್ ಪಕ್ಷ ಮಾಡಿ ಕೊಟ್ಟಿದೆ ದೂರಿದರು.
    ಶಿವಮೊಗ್ಗದಲ್ಲಿ ಹಿಜಾಬ್ ಸಂಬಂಧ ನಡೆದ ಗಲಭೆ ಹಿನ್ನಲೆಯಲ್ಲಿ ಡಿ.ಕೆ ಶಿವಕುಮಾರ್‌ರವರು ನೀಡಿದ ಪ್ರಚೋದನಾಕಾರಿ ಹೇಳಿಕೆಯೇ ಕೋಮು ಸೌಹಾರ್ದತೆಗೆ ಧಕ್ಕೆಯನ್ನುಂಟು ಮಾಡಿದೆ. ಬದಲಾದ ಮನಸ್ಥಿತಿಯೇ ಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಕಾರಣ ಎಂದು ಆರೋಪಿಸಿ ಹತ್ಯೆಗೈದವರನ್ನು ತಕ್ಷಣ ಬಂಧಿಸ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಬಿಜೆಪಿ ಮಂಡಲ ಅಧ್ಯಕ್ಷ ಎಂ. ಪ್ರಭಾಕರ್ ಅಧ್ಯಕ್ಷತೆ ವಹಿಸಿದ್ದರು. ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಬಿ.ಕೆ ಶ್ರೀನಾಥ್, ಜಿ. ಧರ್ಮಪ್ರಸಾದ್, ಜಿ.ಪಂ. ಮಾಜಿ ಸದಸ್ಯ ಎಸ್. ಕುಮಾರ್, ಸೂಡಾ ಸದಸ್ಯ ವಿ. ಕದಿರೇಶ್, ಕರ್ನಾಟಕ ರಾಜ್ಯ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ದೇಶಕ ಮಂಗೋಟೆ ರುದ್ರೇಶ್, ಆರ್.ಎಸ್ ಶೋಭಾ, ರಾಮನಾಥ್ ಬರ್ಗೆ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
    ಪಕ್ಷದ ಪ್ರಮುಖರಾದ ಪ್ರಧಾನ ಕಾರ್ಯದರ್ಶಿಗಳಾದ ಚನ್ನೇಶ್, ಪಿ. ರಂಗಸ್ವಾಮಿ, ಮಹಿಳಾ ಘಟಕದ ಅಧ್ಯಕ್ಷೆ ಶೋಭಾ ಪಾಟೀಲ್, ಯುವ ಘಟಕದ ಅಧ್ಯಕ್ಷ ವಿಜಯ್, ಎಸ್.ಸಿ ಘಟಕದ ಅಧ್ಯಕ್ಷ ಗಣೇಶ್ ರಾವ್, ಎಂ. ಮಂಜುನಾಥ್, ಕೃಷ್ಣ ಛಲವಾದಿ, ಬಿ.ಎಸ್ ಶ್ರೀನಾಥ್, ಅವಿನಾಶ್, ಮಲ್ಲೇಶ್, ಸುಲೋಚನಾ ಪ್ರಕಾಶ್, ಎಸ್.ಎನ್ ನಾಗಮಣಿ, ಮಂಜುಳ, ಶ್ಯಾಮಲ, ಕವಿತಾ ಸುರೇಶ್ ಸೇರಿದಂತೆ ಪಕ್ಷದ ವಿವಿಧ ಘಟಕಗಳ ಪದಾಧಿಕಾರಿಗಳು, ಕಾರ್ಯಕರ್ತರು ಪಾಲ್ಗೊಂಡಿದ್ದರು.

ಅಂಚೆ ಜೀವ ವಿಮೆ ಜನಸಾಮಾನ್ಯರಿಗೆ ತಲುಪಿಸಲಿ : ಪ್ರಹ್ಲಾದ್ ನಾಯಕ್


ಭದ್ರಾವತಿ ನ್ಯೂಟೌನ್ ವಿಐಎಸ್‌ಎಲ್ ಭದ್ರಾ ಅತಿಥಿ ಗೃಹದ ಸಭಾಂಗಣದಲ್ಲಿ ಅಯೋಜಿಸಲಾಗಿದ್ದ ಅಂಚೆ ಜೀವ ವಿಮೆ ಮತ್ತು ಗ್ರಾಮೀಣ ಅಂಚೆ ಜೀವ ವಿಮೆ ಮೇಳವನ್ನು ಅಂಚೆ ಇಲಾಖೆ ಶಿವಮೊಗ್ಗ ವಿಭಾಗದ ಅಧೀಕ್ಷಕ ಜಿ. ಹರೀಶ್ ಸೇರಿದಂತೆ ಇನ್ನಿತರರು ಉದ್ಘಾಟಿಸಿದರು.
    ಭದ್ರಾವತಿ, ಫೆ. ೨೪: ಪ್ರಸ್ತುತ ಜಿಲ್ಲೆಯಲ್ಲಿ ಭಾರತೀಯ ಅಂಚೆ ಇಲಾಖೆ ವ್ಯಾಪಕವಾಗಿ ವಿಸ್ತರಿಸಿಕೊಂಡಿದ್ದು, ಅಲ್ಲದೆ ಸೇವಾ ಕಾರ್ಯ ವ್ಯಾಪ್ತಿಯನ್ನೂ ಸಹ ಹೆಚ್ಚಿಸಿಕೊಂಡಿದೆ. ಅಂಚೆ ಜೀವ ವಿಮೆ ಮತ್ತು ಗ್ರಾಮೀಣ ಅಂಚೆ ಜೀವ ವಿಮೆ ಯೋಜನೆಗಳು ಜನಸಾಮಾನ್ಯರಿಗೆ ತಲುಪಿಸುವ ನಿಟ್ಟಿನಲ್ಲಿ ಎಲ್ಲರೂ ಸಹಕಾರ ನೀಡಬೇಕೆಂದು ಅಂಚೆ ನಿರೀಕ್ಷಿಕ ಪ್ರಹ್ಲಾದ ನಾಯಕ್ ಮನವಿ ಮಾಡಿದರು.
    ಅವರು ಗುರುವಾರ ನಗರದ ನ್ಯೂಟೌನ್ ವಿಐಎಸ್‌ಎಲ್ ಭದ್ರಾ ಅತಿಥಿ ಗೃಹದ ಸಭಾಂಗಣದಲ್ಲಿ ಅಯೋಜಿಸಲಾಗಿದ್ದ ಅಂಚೆ ಜೀವ ವಿಮೆ ಮತ್ತು ಗ್ರಾಮೀಣ ಅಂಚೆ ಜೀವ ವಿಮೆ ಮೇಳದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದರು.
    ಜೀವ ವಿಮೆ ಯೋಜನೆಯಿಂದಾಗಿ ಅಂಚೆ ನೌಕರರು ಜನರೊಂದಿಗೆ ಹೆಚ್ಚಿನ ಸಂಪರ್ಕ ಸಾಧಿಸುವ ಜೊತೆಗೆ ಸಾಮಾನ್ಯ ಜನರು ಭವಿಷ್ಯದಲ್ಲಿ ಆರ್ಥಿಕವಾಗಿ ಭದ್ರತೆ ಹೊಂದಲು ಅಗತ್ಯವಿರುವ ಸೇವೆಯನ್ನು ನೀಡಬಹುದಾಗಿದೆ. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಶಿವಮೊಗ್ಗ ವಿಮಾ ವಿಭಾಗದಲ್ಲಿ ಭದ್ರಾವತಿ, ಶಿವಮೊಗ್ಗ ಮತ್ತು ಸಾಗರದಲ್ಲಿ ವಿಭಾಗಗಳನ್ನು ತೆರೆಯಲಾಗಿದೆ. ಹಲವಾರು ವಿಮಾ ಯೋಜನೆಗಳು ಅಸ್ತಿತ್ವದಲ್ಲಿದ್ದು, ಈ ಯೋಜನೆಗಳು ಜನಸಾಮಾನ್ಯರಿಗೆ ತಲುಪಿಸುವ ನಿಟ್ಟಿನಲ್ಲಿ ಎಲ್ಲರ ಸಹಕಾರ ಅಗತ್ಯವಾಗಿದೆ ಎಂದರು.
    ಭದ್ರಾವತಿ ಪ್ರಧಾನ ಅಂಚೆ ಕಛೇರಿಯ ಪೋಸ್ಟ್ ಮಾಸ್ಟರ್ ವಿ. ಶಶಿಧರ್ ಅಧ್ಯಕ್ಷತೆ ವಹಿಸಿದ್ದರು. ಅಂಚೆ ಇಲಾಖೆ ಶಿವಮೊಗ್ಗ ವಿಭಾಗದ ಅಧೀಕ್ಷಕ ಜಿ. ಹರೀಶ್, ಉಪ ಅಧೀಕ್ಷಕರಾದ ಕೆ.ಆರ್ ಉಷಾ, ನಾಗರಾಜ್, ವಿಐಎಸ್‌ಎಲ್ ಕಾರ್ಖಾನೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಎಲ್ ಪ್ರವೀಣ್‌ಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Wednesday, February 23, 2022

ಸಮಾಜಕ್ಕೆ ಉತ್ತಮ ಸಂದೇಶದ ಜೊತೆಗೆ ಚಿತ್ರರಂಗದಲ್ಲಿಯೇ ಎಲ್ಲವನ್ನೂ ಕಂಡುಕೊಂಡು ಡಾ. ರಾಜ್‌ಕುಮಾರ್ ಕುಟುಂಬ

ಡಾ. ರಾಜ್‌ಕುಮಾರರ ದೇಗುಲ, ಪುನೀತ್ ರಾಜ್‌ಕುಮಾರ್ ಪುತ್ಥಳಿ ಅನಾವರಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಬಿ.ವೈ ರಾಘವೇಂದ್ರ ಪ್ರಶಂಸೆ


ಭದ್ರಾವತಿ ನಗರಸಭೆ ೩ನೇ ವಾರ್ಡ್ ವ್ಯಾಪ್ತಿಯ ಬಿ.ಎಚ್ ರಸ್ತೆ ಚಾಮೇಗೌಡ ಏರಿಯಾದಲ್ಲಿರುವ ಡಾ. ರಾಜ್‌ಕುಮಾರ್ ಅಭಿಮಾನಿಗಳ ಬಳಗ ಹಾಗು ಕರ್ನಾಟಕ ರತ್ನ ಪುನೀತ್ ರಾಜ್‌ಕುಮಾರ್ ಅಭಿಮಾನಿಗಳ ಸಂಘದ ವತಿಯಿಂದ ರಾಜ್‌ಕುಮಾರರ ದೇಗುಲ ಹಾಗು ಪುತ್ಥಳಿ ಆನಾವರಣಕ್ಕೆ ಬುಧವಾರ ಸಂಸದ ಬಿ.ವೈ ರಾಘವೇಂದ್ರ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು.
    ಭದ್ರಾವತಿ, ಫೆ. ೨೩: ಕರ್ನಾಟಕ ರತ್ನ, ವರನಟ ಡಾ. ರಾಜ್‌ಕುಮಾರ್ ಕುಟುಂಬದವರು ತಮ್ಮ ಇಡೀ ಬದುಕನ್ನು ಕೇವಲ ಚಿತ್ರರಂಗ ಹಾಗು ಸಮಾಜ ಸೇವೆಗೆ ಮಾತ್ರ ಮೀಸಲಿಡುವ ಮೂಲಕ ಸಮಾಜಕ್ಕೆ ತಮ್ಮದೇ ಆದ ಕೊಡುಗೆಗಳನ್ನು ನೀಡಿದ್ದಾರೆಂದು ಸಂಸದ ಬಿ.ವೈ ರಾಘವೇಂದ್ರ ಪ್ರಶಂಸೆ ವ್ಯಕ್ತಪಡಿಸಿದರು.
    ಅವರು ಬುಧವಾರ ನಗರಸಭೆ ೩ನೇ ವಾರ್ಡ್ ವ್ಯಾಪ್ತಿಯ ಬಿ.ಎಚ್ ರಸ್ತೆ ಚಾಮೇಗೌಡ ಏರಿಯಾದಲ್ಲಿರುವ ಡಾ. ರಾಜ್‌ಕುಮಾರ್ ಅಭಿಮಾನಿಗಳ ಬಳಗ ಹಾಗು ಕರ್ನಾಟಕ ರತ್ನ ಪುನೀತ್ ರಾಜ್‌ಕುಮಾರ್ ಅಭಿಮಾನಿಗಳ ಸಂಘದ ವತಿಯಿಂದ ರಾಜ್‌ಕುಮಾರರ ದೇಗುಲ ಹಾಗು ಪುತ್ಥಳಿ ಆನಾವರಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.
    ಡಾ. ರಾಜ್‌ಕುಮಾರ್ ಕುಟುಂಬದವರು ಚಿತ್ರರಂಗದಲ್ಲಿಯೇ ಎಲ್ಲವನ್ನು ಕಂಡು ಕೊಂಡಿದ್ದಾರೆ. ಆ ಮೂಲಕ ಸಮಾಜಕ್ಕೆ ಉತ್ತಮ ಸಂದೇಶಗಳನ್ನು ನೀಡಿದ್ದಾರೆ. ಹಲವಾರು ಸಮಾಜಮುಖಿ ಸೇವಾ ಕಾರ್ಯಗಳನ್ನು ಕೈಗೊಂಡಿದ್ದಾರೆ. ಆದರ್ಶತನದ ಬದುಕನ್ನು ಈ ನಾಡಿಗೆ ನೀಡಿದ್ದಾರೆ. ರಾಜ್‌ಕುಮಾರ್‌ರವರು ಒಂದು ವೇಳೆ ರಾಜಕೀಯಕ್ಕೆ ಪ್ರವೇಶಿಸಿದ್ದರೇ ಅವರನ್ನು ನಾವೆಲ್ಲರೂ ಮುಖ್ಯಮಂತ್ರಿ ಸ್ಥಾನದಲ್ಲಿ ನೋಡಬೇಕಾಗಿರುತ್ತಿತ್ತು. ಆದರೆ ಈ ಕುಟುಂಬದವರು ಯಾವುದಕ್ಕೂ ಆಸೆ ಪಡದೆ ಚಿತ್ರರಂಗದಲ್ಲಿ ತೊಡಗಿಸಿಕೊಂಡಿದ್ದಾರೆ. ಇಂತಹ ಕುಟುಂಬದ ಪುನೀತ್‌ರಾಜ್‌ಕುಮಾರ್‌ರವರ ಪುತ್ಥಳಿ ಜಿಲ್ಲೆಯಲ್ಲಿ ಅದರಲ್ಲೂ ಭದ್ರಾವತಿಯಲ್ಲಿ ನಿರ್ಮಾಣಗೊಳ್ಳುತ್ತಿರುವುದು ತುಂಬಾ ಸಂತಸದ ಸಂಗತಿಯಾಗಿದೆ ಎಂದರು.

ಒಟ್ಟು ೨೦ ಲಕ್ಷ ರು. ಅಂದಾಜು ವೆಚ್ಚದಲ್ಲಿ ದೇಗುಲ ಮತ್ತು ಪುತ್ಥಳಿ ನಿರ್ಮಿಸಲಾಗುತ್ತಿದೆ. ಕಂಚು ಸೇರಿದಂತೆ ಇನ್ನಿತರ ಲೋಹ ಬಳಸಿ ಸುಮಾರು ೬.೫ ಲಕ್ಷ ರು. ವೆಚ್ಚದಲ್ಲಿ ೩ ಅಡಿ ಎತ್ತರ, ೨ ಅಡಿ ಅಗಲ ಹೊಂದಿರುವ ಪುತ್ಥಳಿಯನ್ನು ನಗರದ ಉಜ್ಜನಿಪುರದ ವಿಷ್ಣು ಆರ್ಟ್ಸ್‌ರವರು ನಿರ್ಮಿಸುತ್ತಿದ್ದಾರೆ. ಈ ಕಾರ್ಯಕ್ಕೆ ಸಂಸದರು ರು. ೫೧,೦೦೦ ದೇಣಿಗೆ ನೀಡಿದ್ದು, ಇದೆ ರೀತಿ ಹಲವು ಮಂದಿ ಗಣ್ಯರು, ದಾನಿಗಳು, ಅಭಿಮಾನಿಗಳು ದೇಣಿಗೆ ನೀಡಿದ್ದಾರೆ.
                                                 - ಅಪ್ಪು, ಅಧ್ಯಕ್ಷರು, ಕರ್ನಾಟಕ ರತ್ನ ಪುನೀತ್‌ರಾಜ್‌ಕುಮಾರ್ ಅಭಿಮಾನಿಗಳ ಸಂಘ

    ನಗರಸಭಾ ಸದಸ್ಯ ಬಿ.ಕೆ ಮೋಹನ್ ಮಾತನಾಡಿ, ಕಳೆದ ೫-೬ ದಶಕಗಳಿಂದ ಡಾ. ರಾಜ್‌ಕುಮಾರ್ ಅಭಿಮಾನಿಗಳ ಬಳಗ ಯಾವುದೇ ರಾಜಕೀಯ ಹಿತಾಸಕ್ತಿಗೆ ಒಳಗಾಗದೆ ಮುನ್ನಡೆದುಕೊಂಡು ಬರುತ್ತಿರುವುದು ಜಿಲ್ಲೆಯಲ್ಲಿಯೇ ವಿಶೇಷವಾಗಿದೆ. ಎಲ್ಲಾ ಧರ್ಮ, ಜಾತಿ, ಪಂಗಡ, ಎಲ್ಲಾ ರಾಜಕೀಯ ಪಕ್ಷಗಳ, ವಿವಿಧ ಸಂಘಟನೆಗಳು ಒಟ್ಟಾಗಿ ಅಭಿಮಾನಿ ಬಳಗ ರೂಪಿಸಿಕೊಂಡಿರುವುದು ಸಮಾಜಕ್ಕೆ ಮಾದರಿಯಾಗಿದೆ. ಈ ಸಂಘಟನೆ ಇದೀಗ ರಾಜ್‌ಕುಮಾರ್‌ರವರ ದೇಗುಲ ಪುನೀತ್‌ರಾಜ್‌ಕುಮಾರ್‌ರವರ ಪುತ್ಥಳಿ ನಿರ್ಮಾಣಕ್ಕೆ ಮುಂದಾಗಿರುವುದು ಒಳ್ಳೆಯ ಬೆಳೆವಣಿಗೆಯಾಗಿದೆ ಎಂದರು.
    ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್. ಕುಮಾರ್, ಬಿಜೆಪಿ ಮುಖಂಡ ಬಿ.ಕೆ ಶ್ರೀನಾಥ್, ನಗರಸಭಾ ಸದಸ್ಯರಾದ ವಿ. ಕದಿರೇಶ್, ಜಾರ್ಜ್, ಡಾ. ರಾಜ್‌ಕುಮಾರ್ ಹಾಗು ಪುನೀತ್‌ರಾಜ್‌ಕುಮಾರ್ ಅಭಿಮಾನಿ ಬಳಗದ ಪದಾಧಿಕಾರಿಗಳು, ಪ್ರಮುಖರು, ಸ್ಥಳೀಯ ಮುಖಂಡರು ಸೇರಿದಂತೆ ಇನ್ನಿತರರು ಉಪಸ್ಥಿರಿದ್ದರು.


ಭದ್ರಾವತಿ ನಗರಸಭೆ ೩ನೇ ವಾರ್ಡ್ ವ್ಯಾಪ್ತಿಯ ಬಿ.ಎಚ್ ರಸ್ತೆ ಚಾಮೇಗೌಡ ಏರಿಯಾದಲ್ಲಿರುವ ಡಾ. ರಾಜ್‌ಕುಮಾರ್ ಅಭಿಮಾನಿಗಳ ಬಳಗ ಹಾಗು ಕರ್ನಾಟಕ ರತ್ನ ಪುನೀತ್ ರಾಜ್‌ಕುಮಾರ್ ಅಭಿಮಾನಿಗಳ ಸಂಘದ ವತಿಯಿಂದ ರಾಜ್‌ಕುಮಾರರ ದೇಗುಲ ಹಾಗು ಪುತ್ಥಳಿ ಆನಾವರಣಕ್ಕೆ ಬುಧವಾರ ಸಂಸದ ಬಿ.ವೈ ರಾಘವೇಂದ್ರ ಗುದ್ದಲಿ ಪೂಜೆ ನೆರವೇರಿಸಿದರು.




ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆಗೆ ಖಂಡನೆ, ಸಂತಾಪ

ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆಯನ್ನು ಖಂಡಿಸಿ ಭದ್ರಾವತಿ ಶಿವಾಜಿ ವೃತ್ತದಲ್ಲಿ ಬುಧವಾರ ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ ನಡೆಸುವ ಜೊತೆಗೆ ಸಂತಾಪ ಸೂಚಿಸಲಾಯಿತು.
    ಭದ್ರಾವತಿ, ಫೆ. ೨೩: ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆಯನ್ನು ಖಂಡಿಸಿ ನಗರದಲ್ಲಿ ಬುಧವಾರ ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ ನಡೆಸುವ ಜೊತೆಗೆ ಸಂತಾಪ ಸೂಚಿಸಲಾಯಿತು.
     ನಗರದ ಹೊಸಮನೆ ಶಿವಾಜಿ ವೃತ್ತದಲ್ಲಿ ರಾಷ್ಟ್ರೀಯ ಬಜರಂಗದಳ, ಕೇಸರಿ ಪಡೆ, ಹಿಂದೂ ಕೋಟೆ ಮತ್ತು ರಾಮ್ ಸೇನೆ ವತಿಯಿಂದ ಬಜರಂಗದಳ ಕಾರ್ಯಕರ್ತ ಹರ್ಷ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಸಂತಾಪ ಸೂಚಿಸಲಾಯಿತು. ನಂತರ ಮಾತನಾಡಿದ ಪ್ರಮುಖರು ಹತ್ಯೆಯನ್ನು ತೀವ್ರವಾಗಿ ಖಂಡಿಸಿದರು.
    ಹಿಂದೂಪರ ಸಂಘಟನೆಗಳಿಂದ ಪ್ರತಿಭಟನಾ ಮೆರವಣಿಗೆ ನಡೆಸಲು ನಿರ್ಧರಿಸಲಾಗಿತ್ತು. ಆದರೆ ಇದಕ್ಕೆ ಪೊಲೀಸ್ ಇಲಾಖೆ ಅನುಮತಿ ನೀಡದ ಹಿನ್ನಲೆಯಲ್ಲಿ ಶಿವಾಜಿ ವೃತ್ತದಲ್ಲಿ ವೃತ್ತದಲ್ಲಿ ಕೇವಲ ಪ್ರತಿಭಟನೆ ನಡೆಸಲಾಯಿತು ಎಂದು ಸಂಘಟನೆಯ ಪ್ರಮುಖರು ಆರೋಪಿಸಿದ್ದಾರೆ.
    ಪ್ರಮುಖರಾದ ಬಿ.ವಿ ಚಂದನ್‌ರಾವ್, ನವೀನ್, ಮನು ಗೌಡ, ಜೀವನ್, ಗಿರೀಶ್, ಮಂಜುನಾಥ್, ಕಿರಣ್, ಹಿಂದೂ ಕೋಟೆ  ಮಂಜುನಾಥ್, ಉಮೇಶ್ ಗೌಡ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

ಕೇಂದ್ರ, ರಾಜ್ಯ ಸರ್ಕಾರಗಳ ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳಿ : ಬಿ. ವೈ ರಾಘವೇಂದ್ರ

ಶ್ರಮ ಶಕ್ತಿ ಅಸಂಘಟಿತ ಕಾರ್ಮಿಕರ ಒಕ್ಕೂಟದ ವತಿಯಿಂದ ಭದ್ರಾವತಿ ಗಾಂಧಿನಗರದ ಆಗಮುಡಿ(ಮೊದಲಿಯಾರ್) ಸಮುದಾಯ ಭವನದಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ಇ-ಶ್ರಮ್ ಕಾರ್ಡ್ ವಿತರಣೆ ಹಾಗು ಕಾರ್ಮಿಕ ಇಲಾಖೆಯಿಂದ ಕಿಟ್ ವಿತರಣಾ ಕಾರ್ಯಕ್ರಮವನ್ನು ಸಂಸದ ಬಿ.ವೈ ರಾಘವೇಂದ್ರ ಉದ್ಘಾಟಿಸಿದರು.
    ಭದ್ರಾವತಿ, ಫೆ. ೨೩: ಕೇಂದ್ರ ಹಾಗು ರಾಜ್ಯ ಸರ್ಕಾರಗಳು ಅಸಂಘಟಿತ ಕಾರ್ಮಿಕರಿಗಾಗಿ ಹಲವಾರು ಯೋಜನೆಗಳನ್ನು ರೂಪಿಸಿದ್ದು, ಅವುಗಳನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಸಂಸದ ಬಿ.ವೈ. ರಾಘವೇಂದ್ರ ಮನವಿ ಮಾಡಿದರು.
    ಅವರು ಬುಧವಾರ ಶ್ರಮ ಶಕ್ತಿ ಅಸಂಘಟಿತ ಕಾರ್ಮಿಕರ ಒಕ್ಕೂಟದ ವತಿಯಿಂದ ಗಾಂಧಿನಗರದ ಆಗಮುಡಿ(ಮೊದಲಿಯಾರ್) ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಇ-ಶ್ರಮ್ ಕಾರ್ಡ್ ವಿತರಣೆ ಹಾಗು ಕಾರ್ಮಿಕ ಇಲಾಖೆಯಿಂದ ಕಿಟ್ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
    ಅಸಂಘಟಿತ ಕಾರ್ಮಿಕರು ಸಹ ಸಮಾಜದ ಮುಖ್ಯ ವಾಹಿನಿಯಲ್ಲಿ ಗುರುತಿಸಿಕೊಳ್ಳುವ ನಿಟ್ಟಿನಲ್ಲಿ ಅಗತ್ಯವಿರುವ ಯೋಜನೆಗಳನ್ನು ಕೇಂದ್ರ ಹಾಗು ರಾಜ್ಯ ಸರ್ಕಾರಗಳು ರೂಪಿಸಿವೆ. ಈ ಯೋಜನೆಗಳು ಸಮರ್ಪಕವಾಗಿ ತಲುಪಿಸುವ ನಿಟ್ಟಿನಲ್ಲಿ ಸಂಘಟನೆಗಳ ಪಾತ್ರ ಪ್ರಮುಖವಾಗಿವೆ ಎಂದರು.
    ನಗರಸಭಾ ಸದಸ್ಯ ಬಿ.ಕೆ ಮೋಹನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ಸ್ಥಾಯಿ ಸಮಿತಿ ಅಧ್ಯಕ್ಷ ಸುದೀಪ್‌ಕುಮಾರ್, ಸದಸ್ಯರಾದ ವಿ. ಕದಿರೇಶ್, ಮಣಿ ಎಎನ್‌ಎಸ್, ಜಾರ್ಜ್, ಜಿಲ್ಲಾ ಕಾರ್ಮಿಕ ಇಲಾಖೆ ಅಧಿಕಾರಿ ಸಿ.ಬಿ ರಂಗಯ್ಯ, ಕಾರ್ಮಿಕ ನಿರೀಕ್ಷಕಿ ಮುಮ್ತಾಜ್ ಬೇಗಂ, ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ವಿ ಅಶೋಕ್, ಕರ್ನಾಟಕ ರಾಜ್ಯ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ ಸದಸ್ಯ ಮಂಗೋಟೆ ರುದ್ರೇಶ್, ಬಿಜೆಪಿ ಮುಖಂಡರಾದ ಎಸ್. ಕುಮಾರ್, ಬಿ.ಕೆ ಶ್ರೀನಾಥ್, ಎಂ. ಪ್ರಭಾಕರ್, ಶಿವಕುಮಾರ್(ಬಂಕ್),  ಉದ್ಯಮಿಗಳಾದ ಎ. ಮಾಧು, ಜಿ. ಸುರೇಶ್‌ಕುಮಾರ್, ಕಣ್ಣಪ್ಪ, ಸುಂದರ್ ಬಾಬು, ಬಿ.ಎಸ್ ಗಣೇಶ್, ವಿವಿಧ ಕಾರ್ಮಿಕ ಸಂಘಟನೆಗಳ ಪ್ರಮುಖರಾದ ರಾಜೇಶ್ವರಿ, ಶಾರದಮ್ಮ, ವಸಂತ, ಎಂ. ಭೂಪಾಲ್, ಕೆ.ಎಸ್ ಸುಬ್ರಹ್ಮಣಿ, ದುಗ್ಗೇಶ್ ತೇಲ್ಕರ್, ಅರುಣ್‌ಕುಮಾರ್, ಚಂದ್ರಶೇಖರ್, ಬಾಬು, ಲಕ್ಷ್ಮಣ, ವಿಶ್ವನಾಥ್, ಸತೀಶ್‌ಗೌಡ, ಚಂದ್ರಕಲಾ, ಸುಂದರ್, ಜಯಂತಿ, ಕೃಷ್ಣಮೂರ್ತಿ, ಸಚಿನ್, ಸಮಿವುಲ್ಲಾ, ಹಫೀಜ್, ಮುರುಗನ್, ಶ್ರೀನಿವಾಸ್, ಸುರೇಶ್, ವಸಂತಿ, ಅರುಣ್, ಸಂಜಯ್‌ಕುಮಾರ್, ಮಣಿಕಂಠ, ಆರ್‍ಮುಗಂ, ತರಕಾರಿ ಮಂಜಣ್ಣ, ಮಂಜು, ಹೇಮಾವತಿ ಮತ್ತು ಪುಷ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    ಕವಿತಾ ಸುರೇಶ್ ಪ್ರಾರ್ಥಿಸಿದರು. ಕೆ. ಮಂಜುನಾಥ್ ಸ್ವಾಗತಿಸಿದರು. ವಿಜಯ್ ಸಿದ್ದಾರ್ಥ್ ಮತ್ತು ಅಭಿಲಾಷ್ ನಿರೂಪಿಸಿದರು. ಉದ್ಯಮಿ ಎ. ಮಾಧು ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

Tuesday, February 22, 2022

ಕುವೆಂಪು ವಿ.ವಿ ಭ್ರಷ್ಟಾಚಾರ ಕುರಿತು ಸಿಂಡಿಕೇಟ್ ಸದಸ್ಯರಿಂದ ರಾಜ್ಯಪಾಲರಿಗೆ ದೂರು

ಕುವೆಂಪು ವಿಶ್ವ ವಿದ್ಯಾನಿಲಯದ ಆಡಳಿತ ಮತ್ತು ಹಣಕಾಸು ಕಾರ್ಯಗಳ ನಿರ್ವಹಣೆ ಹಾಗು ಇನ್ನಿತರ ಭ್ರಷ್ಟಾಚಾರಗಳ ಕುರಿತು ತಕ್ಷಣ ತನಿಖೆ ನಡೆಸಿ ತಪ್ಪಿತಸ್ಥರ ಮೇಲೆ ಶಿಸ್ತು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಮಂಗಳವಾರ ಸಚಿವ ಕೆ.ಎಸ್ ಈಶ್ವರಪ್ಪ ನೇತೃತ್ವದಲ್ಲಿ ಸಿಂಡಿಕೇಟ್ ಸದಸ್ಯರು ವಿಶ್ವ ವಿದ್ಯಾನಿಲಯದ ಕುಲಾಧಿಪತಿಗಳಾದ ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದಾರೆ.
    ಭದ್ರಾವತಿ, ಫೆ. ೨೨: ಕುವೆಂಪು ವಿಶ್ವ ವಿದ್ಯಾನಿಲಯದ ಆಡಳಿತ ಮತ್ತು ಹಣಕಾಸು ಕಾರ್ಯಗಳ ನಿರ್ವಹಣೆ ಹಾಗು ಇನ್ನಿತರ ಭ್ರಷ್ಟಾಚಾರಗಳ ಕುರಿತು ತಕ್ಷಣ ತನಿಖೆ ನಡೆಸಿ ತಪ್ಪಿತಸ್ಥರ ಮೇಲೆ ಶಿಸ್ತು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಮಂಗಳವಾರ ಸಚಿವ ಕೆ.ಎಸ್ ಈಶ್ವರಪ್ಪ ನೇತೃತ್ವದಲ್ಲಿ ಸಿಂಡಿಕೇಟ್ ಸದಸ್ಯರು ವಿಶ್ವ ವಿದ್ಯಾನಿಲಯದ ಕುಲಾಧಿಪತಿಗಳಾದ ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದಾರೆ.
    ವಿಶ್ವ ವಿದ್ಯಾನಿಲಯದಲ್ಲಿ ಕಳೆದ ೨ ವರ್ಷಗಳ ಆಡಳಿತ ಮತ್ತು ಹಣಕಾಸು ಕಾರ್ಯಗಳ ನಿರ್ವಹಣೆಯಲ್ಲಿ ಸಾಕಷ್ಟು ಭ್ರಷ್ಟಾಚಾರಗಳು ನಡೆದಿರುವ ಬಗ್ಗೆ ಆರೋಪಗಳು ಕೇಳಿ ಬರುತ್ತಿವೆ. ಈ ಹಿನ್ನಲೆಯಲ್ಲಿ ದೂರ ಶಿಕ್ಷಣ ಪರಿಷತ್ ಪರೀಕ್ಷೆಗಳನ್ನು ನಡೆಸದೆ ಫಲಿತಾಂಶ ಪ್ರಕಟಿಸಿರುವ ಅಕ್ರಮದ ಬಗ್ಗೆ, ಅಧ್ಯಯನ ಕೇಂದ್ರಗಳಿಂದ ಕೋಟ್ಯಾಂತರ ರು. ಬಾಕಿ ಉಳಿಸಿಕೊಂಡು ವಿಶ್ವ ವಿದ್ಯಾನಿಲಯಕ್ಕೆ ನಷ್ಟ ಉಂಟು ಮಾಡಿರುವ ಅವ್ಯವಹಾರ ಕುರಿತು ಹಾಗು ಸರ್ವೋಚ್ಛ ನ್ಯಾಯಾಲಯದ ತೀರ್ಪಿನ ಹಿನ್ನಲೆಯಲ್ಲಿ ರಾಜ್ಯ ಸರ್ಕಾರದ ಆದೇಶದಂತೆ ಮೇ. ೧೫, ೨೦೧೯ರಂದು(ಜೇಷ್ಠತೆ ಮತ್ತು ಬಡ್ತಿ ಸಂಬಂಧಿತ) ಮತ್ತು ಜ. ೨೧, ೨೦೨೧ರಂದು ಸಮಾಜ ಕಲ್ಯಾಣ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಸಮಿತಿಯ ನಡಾವಳಿಗಳನ್ನು ಹಾಗು ಸಿಂಡಿಕೇಟ್ ನಿರ್ಣಯಗಳನ್ನು ಜಾರಿಯಾಗದಂತೆ ತಡೆದು ಅವುಗಳ ಉಲ್ಲಂಘನೆ ಮಾಡಿರುವ ಬಗ್ಗೆ ಮತ್ತು ಪ್ರಸ್ತುತ ಕರ್ತವ್ಯ ನಿರ್ವಹಿಸುತ್ತಿರುವ ಕುಲಪತಿಗಳ ಅವಧಿಯಲ್ಲಿನ ಆಡಳಿತ ಮತ್ತು ಹಣಕಾಸಿನ ಎಲ್ಲಾ ಕಾರ್ಯ ನಿರ್ವಹಣೆಗಳ ಬಗ್ಗೆ ತನಿಖೆ ನಡೆಸುವಂತೆ ಆಗ್ರಹಿಸಲಾಗಿದೆ.
    ಜಿ. ಧರ್ಮಪ್ರಸಾದ್, ಬಳ್ಳೇಕೆರೆ ಸಂತೋಷ್, ಎಚ್.ಬಿ ರಮೇಶ್ ಬಾಬು, ಎಚ್. ರಾಮಲಿಂಗಪ್ಪ ಸೇರಿದಂತೆ ಇನ್ನಿತರ ಸಿಂಡಿಕೇಟ್ ಸದಸ್ಯರು ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಲ್ಲಿ ಕಲಿಕೆಯ ಆಸಕ್ತಿ, ಸಾಧಿಸುವ ಛಲ, ಮುಂದೆ ಬರಬೇಕೆಂಬ ಮನೋಭಾವ ಮುಖ್ಯ : ಸುರಜಿತ್ ಮಿಶ್ರಾ

ಭಾರತೀಯ ಉಕ್ಕು ಪ್ರಾಧಿಕಾರದ ಭದ್ರಾವತಿ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ವತಿಯಿಂದ ಸಿಎಸ್‌ಆರ್ ಅಡಿಯಲ್ಲಿ ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕೆಗೆ ಅಗತ್ಯವಿರುವ ಕಲಿಕಾ ಸಾಮಾಗ್ರಿಗಳನ್ನು  ವಿತರಿಸಲಾಯಿತು.
    ಭದ್ರಾವತಿ, ಫೆ. ೨೨: ವಿದ್ಯಾರ್ಥಿಗಳಲ್ಲಿ ಕಲಿಕೆಯ ಆಸಕ್ತಿ, ಜೀವನದಲ್ಲಿ ಮುಂದೆ ಬರಬೇಕೆಂಬ ಮನೋಭಾವ ಮತ್ತು ಸಾಧಿಸುವ ಛಲ ಮುಖ್ಯವಾಗಿದೆ ಎಂದು ಭಾರತೀಯ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯ ಕಾರ್ಯಪಾಲಕ ನಿರ್ದೇಶಕ ಸುರಜಿತ್ ಮಿಶ್ರಾ ಹೇಳಿದರು.
    ಅವರು ಕಾರ್ಖಾನೆ ವತಿಯಿಂದ ಸಾಮಾಜಿಕ ಸಾಂಸ್ಥಿಕ ಹೊಣೆಗಾರಿಕೆ (ಸಿಎಸ್‌ಆರ್) ಅಡಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕೆಗೆ ಅಗತ್ಯವಿರುವ ಸಾಮಾಗ್ರಿಗಳನ್ನು ಉಚಿತವಾಗಿ ವಿತರಿಸಿ ಮಾತನಾಡಿದರು.
    ಸರ್ಕಾರಿ ಶಾಲೆಗಳಲ್ಲಿ ಓದಿರುವ ಬಹಳಷ್ಟು ವಿದ್ಯಾರ್ಥಿಗಳು ಜೀವನದಲ್ಲಿ ಮುಂದೆ ಬಂದಿದ್ದು, ಪ್ರಪಂಚದಾದ್ಯಂತ ಗುರುತಿಸಿಕೊಂಡಿದ್ದಾರೆ. ಅಲ್ಲದೆ ಶಾಲೆಗಳಿಗೆ ಮೂಲ ಸೌಕರ್ಯಗಳಿಗಿಂತ ಕಲಿಕೆಯ ಆಸಕ್ತಿ, ಜೀವನದಲ್ಲಿ ಮುಂದೆ ಬರಬೇಕೆಂಬ ಮನೋಭಾವ ಮತ್ತು ಸಾಧಿಸುವ ಛಲ ಮುಖ್ಯವಾಗಿದೆ ಎಂಬುದನ್ನು ತೋರಿಸಿಕೊಟ್ಟಿದ್ದಾರೆ. ಈ ನಡುವೆ ಸೈಲ್-ವಿಐಎಸ್‌ಎಲ್ ಸಾಮಾಜಿಕವಾಗಿ ಪ್ರಜ್ಞೆಯುಳ್ಳ ಕಾರ್ಪೊರೇಟ್ ಸಂಸ್ಥೆಯಾಗಿ ಸಾಮಾಜಿಕ ಅಭಿವೃದ್ದಿಗೆ ತನ್ನ ಸಾಮಾಜಿಕ ಬದ್ಧತೆಯನ್ನು ಪೂರೈಸಲು ಶ್ರಮಿಸುತ್ತಿದೆ ಎಂದರು.
    ಹುತ್ತಾಕಾಲೋನಿ ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕಿ ಜಿ.ಸಿ ಗೀತಾಂಜಲಿ ಮಾತನಾಡಿ, ಶಿಕ್ಷಣದಲ್ಲಿ ಬಡತನವಿಲ್ಲ. ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಕಲಿತು ಮುಂದೆ ಬರಬೇಕೆಂಬ ತುಡಿತದಿಂದ ಶ್ರೀಮಂತರಾಗಬೇಕು. ಕಾರ್ಖಾನೆ ವತಿಯಿಂದ ನೀಡಲಾಗಿರುವ ಕಲಿಕಾ ಸಾಮಾಗ್ರಿಗಳನ್ನು ತಮ್ಮ ಜ್ಞಾನ ಮತ್ತು ಶೈಕ್ಷಣಿಕ ಅಡಿಪಾಯ ಹೆಚ್ಚಿಸಿಕೊಳ್ಳಲು ಸದುಪಯೋಗಪಡಿಸಿಕೊಳ್ಳಬೇಕು. ಪ್ರತಿಯೊಬ್ಬ ವಿದ್ಯಾರ್ಥಿ ಸಹ ತಾವು ಆಯ್ಕೆ ಮಾಡಿಕೊಂಡಿರುವ ಯಾವುದೇ ಕ್ಷೇತ್ರದಲ್ಲಿ ಉನ್ನತ ಸ್ಥಾನ ಪಡೆದು ಸರ್.ಎಂ. ವಿಶ್ವೇಶ್ವರಯ್ಯ, ಡಾ. ಬಿ.ಆರ್. ಅಂಬೇಡ್ಕರ್, ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಸೇರಿದಂತೆ ಮಹಾನ್ ನಾಯಕರ ಆದರ್ಶ ಗುಣಗಳನ್ನು ಅಳವಡಿಸಿಕೊಂಡು ಭ್ರಷ್ಟಾಚಾರ ಮುಕ್ತರಾಗಿ ದೇಶದ ಜವಾಬ್ದಾರಿಯುತ ನಾಗರೀಕರಾಗಿ ಬೆಳೆಯಬೇಕೆಂದು ಆಶಿಸಿದರು.
    ಕಾರ್ಖಾನೆಯ ಸಹಾಯಕ ಪ್ರಬಂಧಕಿ (ಸಿಬ್ಬಂದಿ) ಕೆ.ಎಸ್. ಶೋಭಾ ಮಾತನಾಡಿ, ಸಿಎಸ್‌ಆರ್ ಅಡಿಯಲ್ಲಿ ಕೈಗೊಂಡಿರುವ ವಿವಿಧ ಚಟುವಟಿಕೆಗಳು ಮತ್ತು ಪ್ರಸಕ್ತ ಸಾಲಿನಲ್ಲಿ ಶಿಕ್ಷಣ ಮತ್ತು ಸಾರ್ವಜನಿಕ ಆರೋಗ್ಯ ಕ್ಷೇತ್ರಗಳಿಗೆ ಒತ್ತು ನೀಡಲಾಗಿರುವ ಚಟುವಟಿಕೆಗಳ ಕುರಿತು ಸಂಕ್ಷಿಪ್ತವಾಗಿ ತಿಳಿಸಿದರು.
    ಆಜಾದಿ ಕಾ ಅಮೃತ್ ಮಹೋತ್ಸವ ಅಂಗವಾಗಿ ಕಾರ್ಖಾನೆವತಿಯಿಂದ ಸಿಎಸ್‌ಆರ್ ಅಡಿಯಲ್ಲಿ ನಗರದ ಎರಡು ಸರ್ಕಾರಿ ಶಾಲೆಗಳಿಗೆ ಗ್ಲೋಬ್ಸ್, ರೋಲಿಂಗ್ ಬ್ಲ್ಯಾಕ್ ಬೋರ್ಡ್‌ಗಳು ಮತ್ತು ೧೦೯ ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್‌ಗಳು, ಬರವಣೆಗೆ ನೋಟ್ ಪುಸ್ತಕಗಳು ಸೇರಿದಂತೆ ಕಲಿಕಾ ಸಾಮಾಗ್ರಿಗಳನ್ನು ವಿತರಿಸಲಾಯಿತು.  
    ಕಾರ್ಖಾನೆ ವತಿಯಿಂದ ಸಿಎಸ್‌ಆರ್ ಅಡಿಯಲ್ಲಿ ವಿವಿಧ ಸಾಮಾಜಿಕ ಅಭಿವೃದ್ಧಿ ಚಟುವಟಿಕೆಗಳನ್ನು ನಗರ ಹಾಗು ಗ್ರಾಮಾಂತರ ಭಾಗಗಳಲ್ಲಿ ಕೈಗೊಳ್ಳಲಾಗುತ್ತಿದೆ. ಅದರಲ್ಲೂ ಗ್ರಾಮಾಂತರ ಭಾಗದಲ್ಲಿ ಹೆಚ್ಚಿನ ಆದ್ಯತೆ ನೀಡಲಾಗಿದೆ. ಗ್ರಾಮಗಳ ಅಭಿವೃದ್ಧಿ ಜೊತೆಗೆ ಶೈಕ್ಷಣಿಕ ಮೂಲಸೌಕರ್ಯಗಳನ್ನು ಸುಧಾರಿಸುವುದಕ್ಕೆ ಅಗತ್ಯವಿರುವ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಬೆಂಬಲವನ್ನು ಒದಗಿಸುವುದಕ್ಕೆ ಒತ್ತು ನೀಡಲಾಗುತ್ತಿದೆ. ಅಲ್ಲದೆ  ಕ್ರೀಡಾ ಚಟುವಟಿಕೆಗಳು ಮತ್ತು ನಗರಾಡಳಿತ ವ್ಯಾಪ್ತಿಯಲ್ಲಿ ಮನರಂಜನಾ ಸೌಲಭ್ಯಗಳನ್ನು ಉತ್ತೇಜಿಸಲು ಕ್ರೀಡಾಂಗಣ, ಜಿಮ್ನಾಷಿಯಂ ಮತ್ತು ಉದ್ಯಾನವನಗಳಂತಹ ವಿವಿಧ ಸೌಲಭ್ಯಗಳನ್ನು ಕಲ್ಪಿಸಿಕೊಡಲು ಹೆಚ್ಚಿನ ಗಮನ ನೀಡಲಾಗಿದೆ.  
     ಪ್ರಭಾರ ಮಹಾಪ್ರಬಂಧಕ(ಸಿಬ್ಬಂದಿ ಮತ್ತು ಆಡಳಿತ) ಪಿ.ಪಿ. ಚಕ್ರಬರ್ತಿ,  ಮಹಾಪ್ರಬಂಧಕ(ಸಾರ್ವಜನಿಕ ಸಂಪರ್ಕ) ಎಲ್. ಪ್ರವೀಣ್ ಕುಮಾರ್,  ಉಪ ಮಹಾಪ್ರಬಂಧಕಿ(ಸಿಬ್ಬಂದಿ) ವಿ. ಧನಲಕ್ಷ್ಮಿ, ಸಹಾಯಕ ಮಹಾಪ್ರಬಂಧಕ(ನಗರಾಡಳಿತ) ಉಮೇಶ್ ಮಧುಕರ್ ಉಕೆ ಮತ್ತು ಸಹಾಯಕ ಪ್ರಬಂಧಕ(ಹಣಕಾಸು) ಅಮುಲ್ ಸುರೇಖ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಾದ ದಿವ್ಯಶ್ರೀ, ದುರ್ಗಾಶ್ರೀ ಮತ್ತು ಆಶಾ ಸುಶ್ರಾವ್ಯ ಪ್ರಾರ್ಥಿಸಿದರು. ಸಹಾಯಕ ಶಿಕ್ಷಕಿಯರಾದ ಹೇಮಾಮಾಲಿನಿ ಸ್ವಾಗತಿಸಿ, ಎಸ್.ವೀಣಾ ವಂದಿಸಿ, ಎಂ. ಸುಮಾ ನಿರೂಪಿಸಿದರು.

ಫೆ.೨೩ರಂದು ಅಸಂಘಟಿತ ಕಾರ್ಮಿಕರಿಗೆ ಇ-ಶ್ರಮ್ ಕಾರ್ಡ್ ವಿತರಣೆ

    ಭದ್ರಾವತಿ, ಫೆ. ೨೨: ಶ್ರಮ ಶಕ್ತಿ ಅಸಂಘಟಿತ ಕಾರ್ಮಿಕರ ಒಕ್ಕೂಟದ ವತಿಯಿಂದ ಫೆ.೨೩ರಂದು ಬೆಳಿಗ್ಗೆ ೧೦.೩೫ಕ್ಕೆ ಗಾಂಧಿನಗರದ ಆಗಮುಡಿ(ಮೊದಲಿಯಾರ್) ಸಮುದಾಯ ಭವನದಲ್ಲಿ ಇ-ಶ್ರಮ್ ಕಾರ್ಡ್ ವಿತರಣೆ ಹಾಗು ಕಾರ್ಮಿಕ ಇಲಾಖೆಯಿಂದ ಕಿಟ್ ವಿತರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
    ಸಂಸದ ಬಿ.ವೈ ರಾಘವೇಂದ್ರ ಕಾರ್ಯಕ್ರಮ ಉದ್ಘಾಟಿಸಲಿದ್ದು, ಶಾಸಕ ಬಿ.ಕೆ ಸಂಗಮೇಶ್ವರ್ ಅಧ್ಯಕ್ಷತೆ ವಹಿಸಲಿದ್ದಾರೆ. ಪ್ರಮುಖರಾದ ಬಿ.ಕೆ ಶ್ರೀನಾಥ್, ಶಿವಕುಮಾರ್, ಕೆ. ಮಂಜುನಾಥ್, ಮಾದಣ್ಣ, ಬಿ.ಕೆ ಮೋಹನ್, ಜಾರ್ಜ್, ಮಣಿ, ಜಿ. ಸುರೇಶ್‌ಕುಮಾರ್, ರಾಜೇಶ್ವರಿ, ಶಾರದಮ್ಮ, ಸಿ.ಬಿ ರಂಗಯ್ಯ, ಮುಮ್ತಾಜ್ ಬೇಗಂ, ಡಾ. ಎಂ.ವಿ ಅಶೋಕ್, ವಸಂತ, ಎಂ. ಭೂಪಾಲ್, ಕಣ್ಣಪ್ಪ, ಕೆ.ಎಸ್ ಸುಬ್ರಹ್ಮಣಿ, ದುಗ್ಗೇಶ್ ತೇಲ್ಕರ್, ಅರುಣ್‌ಕುಮಾರ್, ಚಂದ್ರಶೇಖರ್, ಬಾಬು, ಲಕ್ಷ್ಮಣ, ವಿಶ್ವನಾಥ್, ಸತೀಶ್‌ಗೌಡ, ಚಂದ್ರಕಲಾ, ಸುಂದರ್, ಜಯಂತಿ, ಕೃಷ್ಣಮೂರ್ತಿ, ಸಚಿನ್, ಸಮಿವುಲ್ಲಾ, ಹಫೀಜ್, ಮುರುಗನ್, ಶ್ರೀನಿವಾಸ್, ಸುರೇಶ್, ವಸಂತಿ, ಅರುಣ್, ಸಂಜಯ್‌ಕುಮಾರ್, ಮಣಿಕಂಠ, ಆರ್‍ಮುಗಂ, ತರಕಾರಿ ಮಂಜಣ್ಣ, ಮಂಜು, ಹೇಮಾವತಿ ಮತ್ತು ಪುಷ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು.
    ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು, ಅಸಂಘಟಿತ ಕಾರ್ಮಿಕರು ಸೇರಿದಂತೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ಮೂಲಕ ಯಶಸ್ವಿಗೊಳಿಸುವಂತೆ ಕೆ.ಸಿ.ಡಬ್ಲ್ಯೂಸಿಯು ಜಿಲ್ಲಾ ಕಾರ್ಯಾಧ್ಯಕ್ಷ ಸುಂದರ್ ಬಾಬು, ತಾಲೂಕು ಕಾರ್ಯಾಧ್ಯಕ್ಷ ಅಭಿಲಾಷ್ ಮತ್ತು ಯುವ ಮುಖಂಡ ವಿಜಯ್ ಸಿದ್ದಾರ್ಥ್ ಕೋರಿದ್ದಾರೆ.  

ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕೂಲಿ ಕಾರ್ಮಿಕರ ಒಕ್ಕೂಟದ ಲೋಕಾರ್ಪಣೆ

ಭದ್ರಾವತಿ ಚನ್ನಗಿರಿ ರಸ್ತೆಯಲ್ಲಿರುವ ಶ್ರೀ ಗಂಗಾಪರಮೇಶ್ವರಿ ಸಮುದಾಯ ಭವನದ ಕಟ್ಟಡದಲ್ಲಿ ತೆರೆಯಲಾಗಿರುವ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕೂಲಿ ಕಾರ್ಮಿಕರ ಒಕ್ಕೂಟದ ಲೋಕಾರ್ಪಣೆಯನ್ನು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ರಾಜ್ಯ ಖಜಾಂಚಿ ಸತ್ಯ ನೆರವೇರಿಸಿದರು.
    ಭದ್ರಾವತಿ, ಫೆ. ೨೨: ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕೂಲಿ ಕಾರ್ಮಿಕರ ಒಕ್ಕೂಟದ ಲೋಕಾರ್ಪಣೆಯನ್ನು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ರಾಜ್ಯ ಖಜಾಂಚಿ ಸತ್ಯ ನೆರವೇರಿಸಿದರು.
    ನಗರದ ಚನ್ನಗಿರಿ ರಸ್ತೆಯಲ್ಲಿರುವ ಶ್ರೀ ಗಂಗಾಪರಮೇಶ್ವರಿ ಸಮುದಾಯ ಭವನದ ಕಟ್ಟಡದಲ್ಲಿ ತೆರೆಯಲಾಗಿರುವ ಒಕ್ಕೂಟದ ಕೇಂದ್ರದ ಸಮಿತಿಯ ನೂತನ ಕಾರ್ಯಾಲಯಕ್ಕೆ ಡಿಎಸ್‌ಎಸ್ ಜಿಲ್ಲಾ ಸಂಚಾಲಕ ಚಿನ್ನಯ್ಯ ಚಾಲನೆ ನೀಡಿದರು. ನಾಮಫಲಕ ಉದ್ಘಾಟನೆಯನ್ನು ಗಂಗಾಮತಸ್ಥರ ಸಂಘದ ತಾಲೂಕು ಅಧ್ಯಕ್ಷ ಎಚ್.ಎ ಪರಮೇಶ್ವರಪ್ಪ ನೆರವೇರಿಸಿದರು.
ವೇದಿಕೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಒಕ್ಕೂಟದ ರಾಜ್ಯಾಧ್ಯಕ್ಷ ವಿ. ವಿನೋದ್ ವಹಿಸಿದ್ದರು. ನಗರಸಭೆ ಸದಸ್ಯ ಬಿ.ಕೆ ಸಂಗಮೇಶ್ವರ್ ಸಮಾರಂಭ ಉದ್ಘಾಟಿಸಿದರು.
    ನಗರಸಭೆ ಉಪಾಧ್ಯಕ್ಷ ಚನ್ನಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಸುದೀಪ್‌ಕುಮಾರ್, ಸದಸ್ಯ ಮಣಿ ಎಎನ್‌ಎಸ್, ಗಂಗಾಮತಸ್ಥರ ಸಂಘದ ತಾಲೂಕು ಪ್ರಧಾನ ಕಾರ್ಯದರ್ಶಿ ಬಿ.ಆರ್ ಯಲ್ಲಪ್ಪ, ಡಿಎಸ್‌ಎಸ್ ಜಿಲ್ಲಾ ಸಮಿತಿ ಸದಸ್ಯ ಡಿ. ಏಳುಮಲೈ, ನಾಗರತ್ನ, ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕೂಲಿ ಕಾರ್ಮಿಕರ ಒಕ್ಕೂಟದ ರಾಜ್ಯ ಸಮಿತಿ ಉಪಾಧ್ಯಕ್ಷರಾದ ಶಶಿಕುಮಾರ್, ಎನ್. ವೆಂಕಟೇಶ್, ಬಿ. ರಾಜಾಚಾರಿ, ಪ್ರಧಾನ ಕಾರ್ಯದರ್ಶಿ ಎಂ. ಕಂದನ್, ಕಾರ್ಯದರ್ಶಿ ಎಸ್. ಕುಮಾರ್, ಸಹ ಕಾರ್ಯದರ್ಶಿಗಳಾದ ಬಿ.ಎಸ್. ಸುಶೀಲ, ಎಸ್. ವೆಂಕಟೇಶ್, ಖಜಾಂಚಿ ಚೆಲುವರಾಜ್, ನಿರ್ದೇಶಕರಾದ ಪಿ. ಏಳುಮಲೈ, ಬಿ.ಆರ್ ಯಲ್ಲಪ್ಪ, ಸುಬ್ರಮಣಿ, ಎನ್. ವಸಂತಕುಮಾರ್, ಎ. ಶಶಿಕುಮಾರ್, ವಿ. ಅರವಿಂದ್, ಕಾರ್ಯಕಾರಿ ಸಮಿತಿ ಸದಸ್ಯರಾದ ಪಿ. ದೊರೈ, ಶ್ರೀನಿವಾಸ್, ಎಚ್. ನಿಂಗರಾಜ್, ಎಂ. ಪವಿತ್ರ, ಜಿಲ್ಲಾ ಸಮಿತಿ ಅಧ್ಯಕ್ಷ ಎಂ. ಅರುಳ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಸಂಧ್ಯಾ, ಡಿ.ಜಿ. ಭಾಷಾ, ಎಂ. ರೇಖಾ, ಎಲ್. ಮಂಜುಳ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Monday, February 21, 2022

ಬಜರಂಗದಳ ಕಾರ್ಯಕರ್ತ ಹತ್ಯೆಗೆ ಹಿಂದೂ ಪರ ಸಂಘಟನೆಗಳಿಂದ ಖಂಡನೆ : ಸೂಕ್ತ ಕ್ರಮಕ್ಕೆ ಆಗ್ರಹಿಸಿ ಮನವಿ

ಶಿವಮೊಗ್ಗ ನಡೆದಿರುವ ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ  ಖಂಡಿಸಿ ಸೂಕ್ತ ಕ್ರಮಕ್ಕೆ ಆಗ್ರಹಿಸಿ ವಿಶ್ವ ಹಿಂದೂ ಪರಿಷದ್ ವತಿಯಿಂದ ತಹಸೀಲ್ದಾರ್ ಗ್ರೇಡ್-೨ ರಂಗಮ್ಮ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
    ಭದ್ರಾವತಿ, ಫೆ. ೨೧: ಶಿವಮೊಗ್ಗದಲ್ಲಿ ನಡೆದಿರುವ ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆಯನ್ನು ಖಂಡಿಸಿ ತಕ್ಷಣ ತಪ್ಪಿತಸ್ಥರನ್ನು ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಸೋಮವಾರ ನಗರದಲ್ಲಿ ಹಿಂದೂಪರ ಸಂಘಟನೆಗಳು ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿವೆ.
    ಹರ್ಷ ಹತ್ಯೆ ಹಿನ್ನಲೆಯಲ್ಲಿ ಮುನ್ನಚ್ಚರಿಕೆ ಕ್ರಮವಾಗಿ ನಗರದಲ್ಲಿ ತಹಸೀಲ್ದಾರ್ ಆರ್. ಪ್ರದೀಪ್ ಸೋಮವಾರ ನಿಷೇದಾಜ್ಞೆ ಜಾರಿಗೊಳಿಸಿದ್ದ ಹಿನ್ನಲೆಯಲ್ಲಿ ಯಾವುದೇ ರೀತಿ ಪ್ರತಿಭಟನೆ, ಮೆರವಣಿಗೆಗಳಿಗೆ ಅವಕಾಶ ನೀಡಲಿಲ್ಲ. ಈ ಹಿನ್ನಲೆಯಲ್ಲಿ ಕೆಲವು ಖಂಡನೆಗಳು ತಾಲೂಕು ಕಛೇರಿಗೆ ತೆರಳಿ ಮನವಿ ಸಲ್ಲಿಸಿದವು.
    ವಿಎಚ್‌ಪಿ ಮನವಿ :
    ವಿಶ್ವ ಹಿಂದೂ ಪರಿಷದ್ ವತಿಯಿಂದ ತಹಸೀಲ್ದಾರ್ ಗ್ರೇಡ್-೨ ರಂಗಮ್ಮ ಮೂಲಕ ಮನವಿ ಸಲ್ಲಿಸಲಾಯಿತು. ಇತ್ತೀಚಿನ ದಿನಗಳಲ್ಲಿ ಹಿಂದೂಪರ ಸಂಘಟನೆಗಳ ಕಾರ್ಯಕರ್ತರ ಹತ್ಯೆ ಹೆಚ್ಚಾಗುತ್ತಿದ್ದು, ಹಿಂದೂಪರ ಕಾರ್ಯಕರ್ತರಿಗೆ ಸೂಕ್ತ ಭದ್ರತೆ ನೀಡುವ ಜೊತೆಗೆ ಇಂತಹ ಘಟನೆಗಳನ್ನು ಗಂಭೀರವಾಗಿ ಪರಿಗಣಿಸಿ ತಕ್ಷಣ ತಪ್ಪಿತಸ್ಥರನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಲಾಗಿದೆ.
    ವಿಶ್ವ ಹಿಂದೂ ಪರಿಷತ್ ದಕ್ಷಣ ಪ್ರಾಂತ್ಯ ಉಪಾಧ್ಯಕ್ಷ ಹಾ. ರಾಮಪ್ಪ, ಪ್ರಮುಖರಾದ ಸತ್ಯಣ್ಣ, ಡಿ.ಆರ್ ಶಿವಕುಮಾರ್, ರಾಮೂರ್ತಿ, ಮಂಜುನಾಥರಾವ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.



ಶಿವಮೊಗ್ಗ ನಡೆದಿರುವ ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ  ಖಂಡಿಸಿ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಹಿಂದೂ ಪಡೆ ವತಿಯಿಂದ ತಹಸೀಲ್ದಾರ್ ಗ್ರೇಡ್-೨ ರಂಗಮ್ಮ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. 
    ಹಿಂದೂ ಪಡೆಯಿಂದ ಮನವಿ :
    ಹೊಸಮನೆ ಹಿಂದೂಪಡೆ ವತಿಯಿಂದ ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ  ಖಂಡಿಸಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
    ಹಿಂದೂ ಸಮುದಾಯದವರನ್ನು ಮಾತ್ರ ಗುರಿಯಾಗಿಸಿಕೊಂಡು ಇತ್ತೀಚಿನ ದಿನಗಳಲ್ಲಿ ಹತ್ಯೆ ನಡೆಸಲಾಗುತ್ತಿದೆ. ವಿನಾಕಾರಣ ನಡೆಸಲಾಗುತ್ತಿರುವ ಹತ್ಯೆಗೆ ಕಾರಣರಾಗಿರುವವರನ್ನು ತಕ್ಷಣ ಬಂಧಿಸಬೇಕು. ಹಿಂದೂಪರ ಕಾರ್ಯಕರ್ತರಿಗೆ ಸೂಕ್ತ ರಕ್ಷಣೆ ನೀಡಬೇಕು. ಹತ್ಯೆಯಾದ ಹಿಂದೂ ಕಾರ್ಯಕರ್ತರ ಕುಟುಂಬಗಳಿಗೆ ಸರ್ಕಾರ ಸೂಕ್ತ ಪರಿಹಾರ ನೀಡಬೇಕು. ಹಿಂದೂ ಸಮುದಾಯದವರ ಭಾವನೆಗಳಿಗೆ ಬೆಲೆ ನೀಡುವ ಮೂಲಕ ನ್ಯಾಯ ಒದಗಿಸಿಕೊಡಬೇಕೆಂದು ಕೋರಲಾಗಿದೆ.  
    ಹಿಂದೂಪಡೆ ಅಧ್ಯಕ್ಷ ಹರೀಶ್ ನೇತೃತ್ವದಲ್ಲಿ ತಹಸೀಲ್ದಾರ್-೨ ರಂಗಮ್ಮ ಮೂಲಕ ಮನವಿ ಸಲ್ಲಿಸಲಾಯಿತು. ಉಪಾಧ್ಯಕ್ಷ ವೆಂಕಟೇಶ್, ಪ್ರಧಾನ ಕಾರ್ಯದರ್ಶಿ ಅಭಿಜಿತ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    ಶಾಲೆಗಳಿಗೆ ಫೆ.೨೨ರಂದು ರಜೆ ಇಲ್ಲ :
    ಹರ್ಷ ಹತ್ಯೆ ಹಿನ್ನಲೆಯಲ್ಲಿ ಮುನ್ನಚ್ಚರಿಕೆ ಕ್ರಮವಾಗಿ ಸೋಮವಾರ ತಾಲೂಕಿನಾದ್ಯಂತ ೧ ರಿಂದ ೧೦ ತರಗತಿವರೆಗಿನ ಸರ್ಕಾರಿ, ಅನುದಾನ ಮತ್ತು ಅನುದಾನ ರಹಿತ ಶಾಲೆಗಳಿಗೆ ರಜೆ ಘೋಷಿಸಲಾಗಿತ್ತು. ಮಂಗಳವಾರ ಎಂದಿನಂತೆ ಶಾಲೆಗಳು ಆರಂಭಗೊಳ್ಳಲಿವೆ. ಶಾಲೆಗಳ ಸುತ್ತಮುತ್ತ ಶಾಂತಿ ಸುವ್ಯವಸ್ಥೆ ಕಾಪಾಡಿಕೊಳ್ಳಲು ಹೆಚ್ಚಿನ ಗಮನ ಹರಿಸುವಂತೆ ಸಂಬಂಧಪಟ್ಟ ಶಾಲೆಗಳ ಮುಖ್ಯಸ್ಥರಿಗೆ, ಇಲಾಖೆಯ ಸಂಪನ್ಮೂಲ ವ್ಯಕ್ತಿಗಳಿಗೆ ಶಿಕ್ಷಣ ಇಲಾಖೆ ಸೂಚಿಸಿದೆ.

ರಾಷ್ಟ್ರ ದ್ರೋಹ ಹೇಳಿಕೆ : ಸಚಿವ ಈಶ್ವರಪ್ಪ ವಿರುದ್ಧ ಕ್ರಮಕ್ಕೆ ಆಗ್ರಹ

ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ತಹಸೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ

ದೇಶ ದ್ರೋಹದ ಹೇಳಿಕೆ ನೀಡಿರುವ ಸಚಿವ ಈಶ್ವರಪ್ಪರನ್ನು ತಕ್ಷಣ ಸಚಿವ ಸಂಪುಟದಿಂದ ಕೈಬಿಟ್ಟು, ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡಬೇಕೆಂದು ಆಗ್ರಹಿಸಿ ಭದ್ರಾವತಿಯಲ್ಲಿ ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಸೋಮವಾರ ತಹಸೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
    ಭದ್ರಾವತಿ, ಫೆ. ೨೧: ದೇಶ ದ್ರೋಹದ ಹೇಳಿಕೆ ನೀಡಿರುವ ಸಚಿವ ಈಶ್ವರಪ್ಪರನ್ನು ತಕ್ಷಣ ಸಚಿವ ಸಂಪುಟದಿಂದ ಕೈಬಿಟ್ಟು, ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡಬೇಕೆಂದು ಆಗ್ರಹಿಸಿ ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಸೋಮವಾರ ತಹಸೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
    ಪಕ್ಷದ ಪ್ರಮುಖರು ಮಾತನಾಡಿ, ಸರ್ಕಾರದಲ್ಲಿ ಸಚಿವರಾಗಿರುವ ಈಶ್ವರಪ್ಪರವರು ರಾಷ್ಟ್ರಧ್ವಜ ಸ್ಥಾನದಲ್ಲಿ ಕೇಸರಿ ಧ್ವಜ(ಭಗವದ್ವಜ) ಹಾರಿಸುವುದಾಗಿ ಹೇಳಿಕೆಯನ್ನು ನೀಡುವ ಮೂಲಕ ದೇಶದ್ರೋಹವೆಸಗಿದ್ದಾರೆ. ಇವರ ಹೇಳಿಕೆ ಅತ್ಯಂತ ಅಪಾಯಕಾರಿಯಾಗಿದ್ದು, ತ್ರಿವರ್ಣ ಧ್ವಜವು ನಮ್ಮ ರಾಷ್ಟ್ರದ ಸ್ವಾತಂತ್ರ್ಯ, ಅಖಂಡತೆ, ಸಾರ್ವಭೌಮತೆ, ಅಸ್ಮಿತೆ ಮತ್ತು ಸಂವಿಧಾನದ ಸಂಕೇತವಾಗಿದೆ. ಈಶ್ವರಪ್ಪನವರ ಹೇಳಿಕೆಯಿಂದ ದೇಶದ ಪ್ರಜೆಗಳಿಗೆ ದಿಗ್ಭ್ರಮೆಯಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.
    ತಕ್ಷಣ ಈಶ್ವರಪ್ಪರನ್ನು ಸಚಿವ ಸಂಪುಟದಿಂದ ಕೈಬಿಟ್ಟು ಅವರ ವಿರುದ್ಧ ದೇಹದ್ರೋಹದ ಪ್ರಕರಣ ದಾಖಲಿಸಿ ರಾಷ್ಟ್ರ ಧ್ವಜದ ಗೌರವ ಎತ್ತಿ ಹಿಡಿಯುವಂತೆ ಆಗ್ರಹಿಸಿ ಕಾಂಗ್ರೆಸ್ ಪಕ್ಷದ ಶಾಸಕರು ವಿಧಾನ ಸೌಧದಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಆದರೆ ಸರ್ಕಾರ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯತನದಿಂದ ವರ್ತಿಸುತ್ತಿದೆ. ಈ ಹಿನ್ನಲೆಯಲ್ಲಿ ಸಂವಿಧಾನ ರಕ್ಷಣೆಯ ಪವಿತ್ರ ಜವಾಬ್ದಾರಿಯನ್ನು ಹೊಂದಿರುವ ರಾಜ್ಯಪಾಲರು ತಕ್ಷಣ ಸಚಿವ ಸಂಪುಟದಿಂದ ಈಶ್ವರಪ್ಪರನ್ನು ಕೈಬಿಟ್ಟು ಅವರ ವಿರುದ್ಧ ಪ್ರಕರಣ ದಾಖಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡಬೇಕೆಂದು ಮನವಿ ಮಾಡಿದರು.
    ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಟಿ. ಚಂದ್ರೇಗೌಡ ನೇತೃತ್ವದಲ್ಲಿ ತಹಸೀಲ್ದಾರ್ ಗ್ರೇಡ್-೨ ರಂಗಮ್ಮ ಮೂಲಕ ಮನವಿ ಸಲ್ಲಿಸಲಾಯಿತು. ನಗರಸಭೆ ಉಪಾಧ್ಯಕ್ಷ ಚನ್ನಪ್ಪ, ಗ್ರಾಮಾಂತರ ಯುವ ಘಟಕದ ಅಧ್ಯಕ್ಷ ಅಫ್ತಾಬ್ ಅಹಮದ್, ಪ್ರಮುಖರಾದ ಸಿ.ಎಂ ಖಾದರ್, ಅಮೀರ್‌ಜಾನ್, ಫೀರ್ ಷರೀಫ್, ಬಿ. ಗಂಗಾಧರ್, ಗೋಪಿ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

ಚಪ್ಪಲಿ ಅಂಗಡಿಯಲ್ಲಿ ಬೆಂಕಿ : ಲಕ್ಷಾಂತರ ರು. ನಷ್ಟ

ಭದ್ರಾವತಿ ನಗರಸಭೆ ವಾರ್ಡ್ ನಂ.೩ರ ನಗರದ ಬಿ.ಎಚ್ ರಸ್ತೆ ಕಿತ್ತೂರು ಚೆನ್ನಮ್ಮ ವಾಣಿಜ್ಯ ಮಳಿಗೆಗಳ ಚಪ್ಪಲಿ ಅಂಗಡಿಯಲ್ಲಿ ಭಾನುವಾರ ಮಧ್ಯ ರಾತ್ರಿ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು.
    ಭದ್ರಾವತಿ, ಫೆ. ೨೧: ನಗರಸಭೆ ವಾರ್ಡ್ ನಂ.೩ರ ನಗರದ ಬಿ.ಎಚ್ ರಸ್ತೆ ಕಿತ್ತೂರು ಚೆನ್ನಮ್ಮ ವಾಣಿಜ್ಯ ಮಳಿಗೆಗಳ ಚಪ್ಪಲಿ ಅಂಗಡಿಯಲ್ಲಿ ಭಾನುವಾರ ಮಧ್ಯ ರಾತ್ರಿ ಬೆಂಕಿ ಕಾಣಿಸಿಕೊಂಡು ಲಕ್ಷಾಂತರ ರು. ನಷ್ಟ ಉಂಟಾಗಿರುವ ಘಟನೆ ನಡೆದಿದೆ. 
ಮಧ್ಯ ರಾತ್ರಿ ಸುಮಾರು ೨ ಗಂಟೆ ಸಮಯ ಬೆಂಕಿ ಕಾಣಿಸಿಕೊಂಡಿರುವುದು ತಿಳಿದು ಬಂದಿದ್ದು, ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ಇಲಾಖೆ ಸಿಬ್ಬಂದಿಗಳು ಬೆಳಿಗ್ಗೆ ೪ ಗಂಟೆವರೆಗೆ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು. ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ ಠಾಣಾಧಿಕಾರಿ ಎನ್. ವಸಂತಕುಮಾರ್, ಸಿಬ್ಬಂದಿಗಳಾದ ಎ. ಸುಬ್ರಮಣ್ಯ, ಪಿ. ಮಂಜುನಾಥ್, ಎಂ. ವಿನೂತನ್, ಎಂ.ಸಿ ಮಹೇಂದ್ರ ಮತ್ತು ಎಚ್.ಎಂ ಹರೀಶ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು. 
ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಉಂಟಾಗಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಅಂಗಡಿಯಲ್ಲಿದ್ದ ವಸ್ತುಗಳು ಸಂಪೂರ್ಣವಾಗಿ ಬೆಂಕಿಯಲ್ಲಿ ಸುಟ್ಟು ಕರಕಲಾಗಿವೆ. ಸುಮಾರು ೨ ರಿಂದ ೩ ಲಕ್ಷ ರು. ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ. 
ಆರ್ಥಿಕ ನೆರವಿನ ಭರವಸೆ :
    ಘಟನಾ ಸ್ಥಳಕ್ಕೆ ಭೇಟಿ ನೀಡಿದ ವಾರ್ಡಿನ ನಗರಸಭಾ ಸದಸ್ಯ ಜಾರ್ಜ್, ಯುವ ಮುಖಂಡ ಬಿ.ಎಸ್ ಗಣೇಶ್ ಸೇರಿದಂತೆ ಇನ್ನಿತರರು ಅಂಗಡಿ ಮಾಲೀಕರಿಂದ ಘಟನೆ ಕುರಿತು ಮಾಹಿತಿ ಪಡೆದು ಸೂಕ್ತ ಪರಿಹಾರ ಕೊಡಿಸುವಂತೆ ಶಾಸಕರಿಗೆ ಮನವಿ ಮಾಡುವುದಾಗಿ ಭರವಸೆ ನೀಡಿದರು.



ಭದ್ರಾವತಿ ಬಿ.ಎಚ್ ರಸ್ತೆಯ ವಾಣಿಜ್ಯ ಮಳಿಗೆಗಳ ಚಪ್ಪಲಿ ಅಂಗಡಿಯೊಂದರಲ್ಲಿ ಬೆಂಕಿ ಕಾಣಿಸಿಕೊಂಡು ಹಾನಿಗೊಳಗಾದ ಸ್ಥಳಕ್ಕೆ ವಾರ್ಡ್ ನಗರಸಭೆ ಸದಸ್ಯೆ ಜಾರ್ಜ್, ಯುವ ಮುಖಂಡ ಬಿ.ಎಸ್ ಗಣೇಶ್ ಸೇರಿದಂತೆ ಇನ್ನಿತರರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

Sunday, February 20, 2022

ಗಮನ ಸೆಳೆದ ಭೌದ್ಧ ಧರ್ಮದ ಆಚರಣೆಯಂತೆ ‘ಸಿದ್ದಾರ್ಥ’ ನಿಲಯದ ಗೃಹ ಪ್ರವೇಶ

ಭದ್ರಾವತಿ ನಗರಸಭೆ ವ್ಯಾಪ್ತಿಯ ಬುಳ್ಳಾಪುರ ಮೂಲೆಕಟ್ಟೆ(ಚರ್ಚ್ ಸಮೀಪ) ನೂತನವಾಗಿ ನಿರ್ಮಿಸಲಾಗಿರುವ 'ಸಿದ್ದಾರ್ಥ' ನಿಲಯದ ಗೃಹ ಪ್ರವೇಶ ವಿಶೇಷವಾಗಿ ಭೌದ್ಧ ಧರ್ಮದ ಆಚರಣೆಯಂತೆ ಭಾನುವಾರ ನೆರವೇರುವ ಮೂಲಕ ಗಮನ ಸೆಳೆಯಿತು.
   
ಭದ್ರಾವತಿ, ಫೆ. 20: ನಗರಸಭೆ ವ್ಯಾಪ್ತಿಯ ಬುಳ್ಳಾಪುರ ಮೂಲೆಕಟ್ಟೆ(ಚರ್ಚ್ ಸಮೀಪ) ನೂತನವಾಗಿ ನಿರ್ಮಿಸಲಾಗಿರುವ ‘ಸಿದ್ದಾರ್ಥ’ ನಿಲಯದ ಗೃಹ ಪ್ರವೇಶ ವಿಶೇಷವಾಗಿ ಭೌದ್ಧ ಧರ್ಮದ ಆಚರಣೆಯಂತೆ ಭಾನುವಾರ ನೆರವೇರುವ ಮೂಲಕ ಗಮನ ಸೆಳೆಯಿತು. 
ನ್ಯೂಟೌನ್ ಸಿದ್ದಾರ್ಥ ಅಂಧರ ಕೇಂದ್ರದ ಅಧ್ಯಕ್ಷ, ನಿವೃತ್ತ ಪ್ರಾಂಶುಪಾಲ ಶಿವಬಸಪ್ಪ ಹಾಗು ಎಸ್. ಶಾರದ ದಂಪತಿ ನೂತನವಾಗಿ ನಿರ್ಮಿಸಿರುವ ತಮ್ಮ ನಿವಾಸದ ಗೃಹ ಪ್ರವೇಶವನ್ನು ಬೆಂಗಳೂರಿನ ಅಶೋಕ ಬುದ್ಧ ವಿಹಾರದ ಬಿಕ್ಕು ನ್ಯಾನಲೋಕ ಬಂತೇಜಿಯವರ ಸಾನಿಧ್ಯದಲ್ಲಿ ಭೌದ್ಧ ಧರ್ಮದ ಆಚರಣೆಯಂತೆ ನೆರವೇರಿಸಲಾಯಿತು. 
ಇತ್ತೀಚೆಗೆ ರಾಜ್ಯಮಟ್ಟದ ಅಂಧರ ಕ್ರಿಕೆಟ್ ಪಂದ್ಯಾವಳಿಯಲ್ಲಿ ವಿಜೇತರಾದ ಸಿದ್ದಾರ್ಥ ಅಂಧರ ಕೇಂದ್ರದ ವಿಕಲಚೇತನರನ್ನು ಅಭಿನಂದಿಸಲಾಯಿತು.  ಶಾಸಕ ಬಿ.ಕೆ ಸಂಗಮೇಶ್ವರ್, ನಗರಸಭೆ ಉಪಾಧ್ಯಕ್ಷ ಚನ್ನಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಸುದೀಪ್‌ಕುಮಾರ್, ಜೆಡಿಎಸ್ ಮುಖಂಡರಾದ ಶಾರದ ಅಪ್ಪಾಜಿ, ಡಿಎಸ್‌ಎಸ್ ರಾಜ್ಯ ಸಂಚಾಲಕ ಎಂ. ಗುರುಮೂರ್ತಿ, ನೌಕರರ ಒಕ್ಕೂಟದ ಜಿಲ್ಲಾಧ್ಯಕ್ಷ ಪ್ರೊ.ಬಿ.ಎಲ್ ರಾಜು, ನಗರಸಭಾ ಸದಸ್ಯರಾದ ಬಿ.ಟಿ ನಾಗರಾಜ್, ಮಣಿ ಎಎನ್‌ಎಸ್, ಛಲವಾದಿ ಸಮಾಜದ ಮಾಜಿ ಅಧ್ಯಕ್ಷ ಬದರಿನಾರಾಯಣ, ಛಲವಾದಿ ಮಹಾಸಭಾ ಜಿಲ್ಲಾಧ್ಯಕ್ಷ ಸುರೇಶ್, ಜಾನಪದ ಕಲಾವಿದ ರೇವಣಪ್ಪ, ಶಿಕ್ಷಕರಾದ ಯು. ಮಹಾದೇವಪ್ಪ, ಬಸವಂತರಾವ್ ದಾಳೆ, ಧನಂಜಯ, ಸಿಆರ್‌ಪಿ ಸಿ. ಚನ್ನಪ್ಪ, ರವಿನಾಯ್ಕ, ಮುತ್ತು, ತಮ್ಮಯ್ಯ ಉದ್ಯಮಿ ಬಿ.ಕೆ ಜಗನ್ನಾಥ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.