ಪರಿಶಿಷ್ಟ ಜಾತಿಗೆ ಸೇರಿದ ಬಣಜಾರ್ ಸಮುದಾಯದ ಮಹಿಳೆ ಮೇಲೆ ಮಾರಾಣಾಂತಿಕ ಹಲ್ಲೆ ಮತ್ತು ದೌರ್ಜನ್ಯ ನಡೆಸಿರುವ ಘಟನೆ ಧಾರವಾಡ ತಾಲೂಕಿನ ಅರವಟ್ಟಿ ಗ್ರಾಮದಲ್ಲಿ ನಡೆದಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಭದ್ರಾವತಿ ತಾಲೂಕು ಬಂಜಾರ ಯುವಕರ ಸಂಘದ ವತಿಯಿಂದ ಗುರುವಾರ ತಹಸೀಲ್ದಾರ್ ಗ್ರೇಡ್-೨ ರಂಗಮ್ಮ ಮೂಲಕ ಗೃಹ ಸಚಿವರಿಗೆ ಮನವಿ ಸಲ್ಲಿಸಲಾಯಿತು.
ಭದ್ರಾವತಿ, ಫೆ. ೧೦: ಪರಿಶಿಷ್ಟ ಜಾತಿಗೆ ಸೇರಿದ ಬಣಜಾರ್ ಸಮುದಾಯದ ಮಹಿಳೆ ಮೇಲೆ ಮಾರಾಣಾಂತಿಕ ಹಲ್ಲೆ ಮತ್ತು ದೌರ್ಜನ್ಯ ನಡೆಸಿರುವ ಘಟನೆ ಧಾರವಾಡ ತಾಲೂಕಿನ ಅರವಟ್ಟಿ ಗ್ರಾಮದಲ್ಲಿ ನಡೆದಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ತಾಲೂಕು ಬಂಜಾರ ಯುವಕರ ಸಂಘದ ವತಿಯಿಂದ ಗುರುವಾರ ತಹಸೀಲ್ದಾರ್ ಗ್ರೇಡ್-೨ ರಂಗಮ್ಮ ಮೂಲಕ ಗೃಹ ಸಚಿವರಿಗೆ ಮನವಿ ಸಲ್ಲಿಸಲಾಯಿತು.
ಅರವಟ್ಟಿ ಗ್ರಾಮದ ನಿಂಗಪ್ಪ ದೊಡ್ಡಮನಿ ಎಂಬುವರ ಹೊಲದಲ್ಲಿ ಕಬ್ಬು ಕಟಾವು ಕೆಲಸ ಮಾಡುತ್ತಿದ್ದ ಬಣಜಾರ್ ಸಮುದಾಯಕ್ಕೆ ಸೇರಿದ ವಿಧವೆ ಮಹಿಳೆ ಲಕ್ಷ್ಮೀಬಾಯಿ ಎಂಬುವರ ಮೇಲೆ ಮೇಲ್ಜಾತಿಗೆ ಸೇರಿದ ಅರ್ಜುನ್ ಹಾಗು ೩-೪ ಜನ ಸೇರಿಕೊಂಡು ಏಕಾಏಕಿ ಹಲ್ಲೆ ನಡೆಸಿ ಅವಾಚ್ಯ ಶಬ್ದಗಳಿಂದ ಜಾತಿನಿಂದನೆ ಮಾಡುವ ಮೂಲಕ ಕೊರಳಿನಲ್ಲಿದ್ದ ಸುಮಾರು ೧೮ ಗ್ರಾಂ ತೂಕದ ಬಂಗಾರದ ಪದಕದ ಸರವನ್ನು ಕಿತ್ತು ಬಿಸಾಡಿ ದೌರ್ಜನ್ಯವೆಸಗಿದ್ದಾರೆ. ಅಲ್ಲದೆ ಜೀವ ಬೆದರಿಕೆ ಹಾಕಿದ್ದು, ಈ ಹಿನ್ನಲೆಯಲ್ಲಿ ತಪ್ಪಿತಸ್ಥರನ್ನು ತಕ್ಷಣ ಬಂಧಿಸಿ ಇವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ತಾಲೂಕು ಬಂಜಾರ ಯುವಕರ ಸಂಘದ ಅಧ್ಯಕ್ಷ ಪಿ. ಕೃಷ್ಣನಾಯ್ಕ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು. ಪ್ರಮುಖರಾದ ಟಿ. ಚಂದ್ರು, ಪ್ರವೀಣ್‌ಕುಮಾರ್, ಕೆ. ಆಂಜನಪ್ಪ ಮತ್ತು ವೇದೇಶ ಉಪಸ್ಥಿತರಿದ್ದರು.
No comments:
Post a Comment