ಭದ್ರಾವತಿ ಜನ್ನಾಪುರದ ಹಿರಿಯ ಹವ್ಯಾಸಿ ಅಂಚೆ ಚೀಟಿ, ನೋಟು, ನಾಣ್ಯ ಸಂಗ್ರಹಗಾರ ಗಣೇಶ್‌ರವರು ನೋಟಿನ ಮೂಲಕ ಗಾನ ಕೋಗಿಲೆ ಲತಾ ಮಂಗೇಶ್ಕರ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
ಭದ್ರಾವತಿ, ಫೆ. ೬: ಭಾರತ ರತ್ನ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಗಾನ ಕೋಗಿಲೆ ಲತಾ ಮಂಗೇಶ್ಕರ್‌ರವರ ನಿಧನಕ್ಕೆ ಶಾಸಕ ಬಿ.ಕೆ ಸಂಗಮೇಶ್ವರ್ ಸಂತಾಪ ಸೂಚಿಸಿದ್ದಾರೆ.
ಲತಾ ಮಂಗೇಶ್ಕರ್‌ರವರ ನಿಧನ ಮನಸ್ಸಿಗೆ ತುಂಬಾ ನೋವುಂಟು ಮಾಡಿದ್ದು, ಇವರ ನಿಧನ ಸಂಗೀತ ಮತ್ತು ಗಾಯನ ಕ್ಷೇತ್ರಕ್ಕೆ ತುಂಬಲಾರದ ನಷ್ಟವನ್ನುಂಟು ಮಾಡಿದೆ. ಸುಮಾರು ೩೬ ಭಾಷೆಗಳಲ್ಲಿ ಗಾಯನ ಮಾಡಿರುವ ಇವರು ತಮ್ಮ ಸುಮಧುರ ಕಂಠದಿಂದ ಎಲ್ಲಾ ಭಾಷಿಗರ ಮನಸ್ಸನ್ನು ಸೂರೆಗೊಂಡಿದ್ದಾರೆ. ಅಪಾರ ಅಭಿಮಾನಿ ಬಳಗ ಹೊಂದುವ ಮೂಲಕ ರಾಷ್ಟ್ರ ಹಾಗು ಅಂತರಾಷ್ಟ್ರೀಯ ಮಟ್ಟದಲ್ಲಿ ಹಲವಾರು ಪ್ರಶಸ್ತಿಗಳನ್ನು ಪಡೆದು ಗೌರವಕ್ಕೆ ಪಾತ್ರರಾಗಿದ್ದರು. ಇವರಿಗೆ ಅಂತಿಮ ಗೌರವ ಪೂರ್ವಕ ನಮನ ಸಲ್ಲಿಸುತ್ತೇನೆ ಎಂದು ಸಂತಾಪ ಸೂಚಿಸಿದ್ದಾರೆ.
ನೋಟಿನ ಮೂಲಕ ಸಂತಾಪ :
ನಗರದ ಜನ್ನಾಪುರದ ಹಿರಿಯ ಹವ್ಯಾಸಿ ಅಂಚೆ ಚೀಟಿ, ನೋಟು, ನಾಣ್ಯ ಸಂಗ್ರಹಗಾರ ಗಣೇಶ್‌ರವರು ನೋಟಿನ ಮೂಲಕ ಗಾನ ಕೋಗಿಲೆ ಲತಾ ಮಂಗೇಶ್ಕರ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
೧೦ ರು. ಮುಖಬೆಲೆ ಹೊಂದಿರುವ ಲತಾ ಮಂಗೇಶ್ಕರ್‌ರವರ ಜನ್ಮ ದಿನಾಂಕ ಮತ್ತು ಮರಣ ದಿನಾಂಕ ಒಳಗೊಂಡಿರುವ ನೋಟನ್ನು ಸಮರ್ಪಿಸಿದ್ದಾರೆ. ಗಣೇಶ್‌ರವರು ಪ್ರತಿ ಬಾರಿ ಗಣ್ಯ ವ್ಯಕ್ತಿಗಳು ನಿಧನ ಹೊಂದಿದಾಗ ನೋಟಿನ ಮೂಲಕ ಸಂತಾಪ ಸೂಚಿಸಿ ಗಮನ ಸೆಳೆಯುತ್ತಿದ್ದಾರೆ.
No comments:
Post a Comment