ಭದ್ರಾವತಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಶನಿವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತ್ಯುತ್ಸವ ಆಚರಿಸಲಾಯಿತು.
ಭದ್ರಾವತಿ, ಫೆ. ೧೯ : ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಶನಿವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತ್ಯುತ್ಸವ ಆಚರಿಸಲಾಯಿತು.
ತಹಸೀಲ್ದಾರ್ ಆರ್. ಪ್ರದೀಪ್ ಅಧ್ಯಕ್ಷತೆಯಲ್ಲಿ ತಾಲೂಕು ಕಛೇರಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ನ್ಯೂಟೌನ್ ಸರ್.ಎಂ. ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನ ಉಪನ್ಯಾಸಕ ರಂಗನಾಥರಾವ್ ಛತ್ರಪತಿ ಶಿವಾಜಿ ಮಹಾರಾಜರ ಕುರಿತು ಮಾತನಾಡಿ, ಶಿವಾಜಿ ಮಹಾರಾಜರು ನಡೆಸಿದ ಹೋರಾಟಗಳು, ಅವರ ಆದರ್ಶತನಗಳು ಇಂದಿನ ಯುವ ಪೀಳಿಗೆಗೆ ಅವಶ್ಯಕವಾಗಿದೆ ಎಂದರು.
ಮರಾಠ ಸಮಾಜದ ಅಧ್ಯಕ್ಷ ಯಶವಂತರಾವ್ ಘೋರ್ಪಡೆ, ಉಪಾಧ್ಯಕ್ಷ ಸಚಿನ್ ಸಿಂಧ್ಯಾ, ಪ್ರಧಾನ ಕಾರ್ಯದರ್ಶಿ ಪ್ರಕಾಶ್‌ರಾವ್ ದುರೆ, ಖಜಾಂಚಿ ವಿಶ್ವೇಶ್ವರ ರಾವ್, ನಿರ್ದೇಶಕರಾದ ಮಂಜುನಾಥ್ ರಾವ್, ಮಲ್ಲೇಶ್ ರಾವ್, ಶಿವಾಜಿರಾವ್ ಗಾಯಕ್‌ವಾಡ್, ಅಣ್ಣೋಜಿರಾವ್, ಎಸ್.ಬಿ ಮೋಹನ್ ರಾವ್, ಧನುಷ್ ಬೋಸ್ಲೆ, ಪರಶುರಾಮರಾವ್, ಗ್ರೇಡ್ -೨ ತಹಸೀಲ್ದಾರ್ ರಂಗಮ್ಮ, ಉಪತಹಸೀಲ್ದಾರ್ ಮಂಜಾನಾಯ್ಕ, ಅರಸು, ರಾಜಸ್ವ ನಿರೀಕ್ಷಕ ಪ್ರಶಾಂತ್, ಶಿರಸ್ತೇದಾರ್ ರಾಧಕೃಷ್ಣ ಭಟ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ತಾಲೂಕು ಕಛೇರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.
No comments:
Post a Comment