ಭದ್ರಾವತಿ ನ್ಯೂಟೌನ್ ವಿಐಎಸ್‌ಎಲ್ ಭದ್ರಾ ಅತಿಥಿ ಗೃಹದ ಸಭಾಂಗಣದಲ್ಲಿ ಅಯೋಜಿಸಲಾಗಿದ್ದ ಅಂಚೆ ಜೀವ ವಿಮೆ ಮತ್ತು ಗ್ರಾಮೀಣ ಅಂಚೆ ಜೀವ ವಿಮೆ ಮೇಳವನ್ನು ಅಂಚೆ ಇಲಾಖೆ ಶಿವಮೊಗ್ಗ ವಿಭಾಗದ ಅಧೀಕ್ಷಕ ಜಿ. ಹರೀಶ್ ಸೇರಿದಂತೆ ಇನ್ನಿತರರು ಉದ್ಘಾಟಿಸಿದರು.
ಭದ್ರಾವತಿ, ಫೆ. ೨೪: ಪ್ರಸ್ತುತ ಜಿಲ್ಲೆಯಲ್ಲಿ ಭಾರತೀಯ ಅಂಚೆ ಇಲಾಖೆ ವ್ಯಾಪಕವಾಗಿ ವಿಸ್ತರಿಸಿಕೊಂಡಿದ್ದು, ಅಲ್ಲದೆ ಸೇವಾ ಕಾರ್ಯ ವ್ಯಾಪ್ತಿಯನ್ನೂ ಸಹ ಹೆಚ್ಚಿಸಿಕೊಂಡಿದೆ. ಅಂಚೆ ಜೀವ ವಿಮೆ ಮತ್ತು ಗ್ರಾಮೀಣ ಅಂಚೆ ಜೀವ ವಿಮೆ ಯೋಜನೆಗಳು ಜನಸಾಮಾನ್ಯರಿಗೆ ತಲುಪಿಸುವ ನಿಟ್ಟಿನಲ್ಲಿ ಎಲ್ಲರೂ ಸಹಕಾರ ನೀಡಬೇಕೆಂದು ಅಂಚೆ ನಿರೀಕ್ಷಿಕ ಪ್ರಹ್ಲಾದ ನಾಯಕ್ ಮನವಿ ಮಾಡಿದರು.
ಅವರು ಗುರುವಾರ ನಗರದ ನ್ಯೂಟೌನ್ ವಿಐಎಸ್‌ಎಲ್ ಭದ್ರಾ ಅತಿಥಿ ಗೃಹದ ಸಭಾಂಗಣದಲ್ಲಿ ಅಯೋಜಿಸಲಾಗಿದ್ದ ಅಂಚೆ ಜೀವ ವಿಮೆ ಮತ್ತು ಗ್ರಾಮೀಣ ಅಂಚೆ ಜೀವ ವಿಮೆ ಮೇಳದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಜೀವ ವಿಮೆ ಯೋಜನೆಯಿಂದಾಗಿ ಅಂಚೆ ನೌಕರರು ಜನರೊಂದಿಗೆ ಹೆಚ್ಚಿನ ಸಂಪರ್ಕ ಸಾಧಿಸುವ ಜೊತೆಗೆ ಸಾಮಾನ್ಯ ಜನರು ಭವಿಷ್ಯದಲ್ಲಿ ಆರ್ಥಿಕವಾಗಿ ಭದ್ರತೆ ಹೊಂದಲು ಅಗತ್ಯವಿರುವ ಸೇವೆಯನ್ನು ನೀಡಬಹುದಾಗಿದೆ. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಶಿವಮೊಗ್ಗ ವಿಮಾ ವಿಭಾಗದಲ್ಲಿ ಭದ್ರಾವತಿ, ಶಿವಮೊಗ್ಗ ಮತ್ತು ಸಾಗರದಲ್ಲಿ ವಿಭಾಗಗಳನ್ನು ತೆರೆಯಲಾಗಿದೆ. ಹಲವಾರು ವಿಮಾ ಯೋಜನೆಗಳು ಅಸ್ತಿತ್ವದಲ್ಲಿದ್ದು, ಈ ಯೋಜನೆಗಳು ಜನಸಾಮಾನ್ಯರಿಗೆ ತಲುಪಿಸುವ ನಿಟ್ಟಿನಲ್ಲಿ ಎಲ್ಲರ ಸಹಕಾರ ಅಗತ್ಯವಾಗಿದೆ ಎಂದರು.
ಭದ್ರಾವತಿ ಪ್ರಧಾನ ಅಂಚೆ ಕಛೇರಿಯ ಪೋಸ್ಟ್ ಮಾಸ್ಟರ್ ವಿ. ಶಶಿಧರ್ ಅಧ್ಯಕ್ಷತೆ ವಹಿಸಿದ್ದರು. ಅಂಚೆ ಇಲಾಖೆ ಶಿವಮೊಗ್ಗ ವಿಭಾಗದ ಅಧೀಕ್ಷಕ ಜಿ. ಹರೀಶ್, ಉಪ ಅಧೀಕ್ಷಕರಾದ ಕೆ.ಆರ್ ಉಷಾ, ನಾಗರಾಜ್, ವಿಐಎಸ್‌ಎಲ್ ಕಾರ್ಖಾನೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಎಲ್ ಪ್ರವೀಣ್‌ಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment