ಮಹೇಶ್
ಭದ್ರಾವತಿ, ಫೆ. ೧೧: ನಗರದ ಗೋಲ್ಡನ್ ಜ್ಯೂಬಿಲಿ ನಿವಾಸಿ, ನ್ಯಾಯಬಲೆ ಅಂಗಡಿ ಮಾಲೀಕ ಜಗದೀಶ್ ಗುಪ್ತ ಅವರ ಪುತ್ರ ಮಹೇಶ್(೪೩) ಶುಕ್ರವಾರ ಬೆಳಿಗ್ಗೆ ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.
ಮಹೇಶ್ ಹೃದಯ ಸಂಬಂಧಿ ಖಾಯಿಲೆಗೆ ತುತ್ತಾಗಿ ಶಸ್ತ್ರ ಚಿಕಿತ್ಸೆ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಸೂಕ್ತ ಚಿಕಿತ್ಸೆ ಲಭ್ಯವಾಗದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮಹೇಶ್ ಪತ್ನಿ ಮತ್ತು ಒಂದು ಮಗು ಹೊಂದಿದ್ದರು.
ಇವರ ನಿಧನಕ್ಕೆ ಕರ್ನಾಟಕ ರಾಜ್ಯ ಸರ್ಕಾರಿ ಪಡಿತರ ವಿತರಕರ ಸಂಘದ ಜಿಲ್ಲಾ ಹಾಗು ತಾಲೂಕು ಪದಾಧಿಕಾರಿಗಳು, ಸಿದ್ದಲಿಂಗಯ್ಯ ಸೇರಿದಂತೆ ಇನ್ನಿತರ ಗಣ್ಯರು ಸಂತಾಪ ಸೂಚಿಸಿದ್ದಾರೆ.
No comments:
Post a Comment