ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ನಡೆದಿರುವ ನಿರ್ಣಯಗಳ ಹಿಂದೆ ನಿಯಮ ಬಾಹಿರ, ಅವ್ಯವಹಾರ ಹಾಗು ಭ್ರಷ್ಟಾಚಾರದ ಆರೋಪಕ್ಕೆ ಸಂಬಂಧಿಸಿದಂತೆ ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರು ಸಲ್ಲಿಸಿದ್ದ ಮನವಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪೂರಕವಾಗಿ ಸ್ಪಂದಿಸಿದ್ದು, ಸೂಕ್ತ ಕ್ರಮಕ್ಕೆ ಆದೇಶಿಸಿರುವುದು.
ಭದ್ರಾವತಿ, ಫೆ. ೨೫: ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ನಡೆದಿರುವ ನಿರ್ಣಯಗಳ ಹಿಂದೆ ನಿಯಮ ಬಾಹಿರ, ಅವ್ಯವಹಾರ ಹಾಗು ಭ್ರಷ್ಟಾಚಾರದ ಆರೋಪಕ್ಕೆ ಸಂಬಂಧಿಸಿದಂತೆ ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರು ಸಲ್ಲಿಸಿದ್ದ ಮನವಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪೂರಕವಾಗಿ ಸ್ಪಂದಿಸಿದ್ದು, ಸೂಕ್ತ ಕ್ರಮಕ್ಕೆ ಆದೇಶಿಸಿದ್ದಾರೆ.
ಸಿಂಡಿಕೇಟ್ ಸದಸ್ಯರಾದ ಜಿ. ಧರ್ಮಪ್ರಸಾದ್, ಬಳ್ಳೇಕೆರೆ ಸಂತೋಷ್, ಎಚ್.ಬಿ ರಮೆಶ್‌ಬಾಬು, ಎಚ್. ರಾಮಲಿಂಗಪ್ಪ ಸೇರಿದಂತೆ ಇನ್ನಿತರರು ಫೆ.೯ರಂದು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದರು.
ಮುಖ್ಯಮಂತ್ರಿಗಳು ಪೂರಕವಾಗಿ ಸ್ಪಂದಿಸಿ ಕ್ರಮ ಕೈಗೊಳ್ಳುವಂತೆ ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಿದ್ದಾರೆಂದು ಮುಖ್ಯಮಂತ್ರಿಗಳ ಅಧೀನ ಕಾರ್ಯದರ್ಶಿ ಸಿ.ವಿ ಹರಿದಾಸನ್ ತಿಳಿಸಿದ್ದಾರೆ.
No comments:
Post a Comment