ಭದ್ರಾವತಿಯಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗು ಬಂಜಾರ ಸಮಾಜದ ವಿವಿಧ ಸಂಘಟನೆಗಳ ಸಹಕಾರದೊಂದಿಗೆ ಮಂಗಳವಾರ ಶ್ರೀ ಸಂತ ಸೇವಾಲಾಲ ಮಹಾರಾಜರ ೨೮೧ನೇ ಜಯಂತ್ಯೋತ್ಸವ ತಾಲೂಕು ಕಛೇರಿ ಸಭಾಂಗಣದಲ್ಲಿ ಸರಳವಾಗಿ ಆಚರಿಸಲಾಯಿತು.
ಭದ್ರಾವತಿ, ಫೆ. ೧೫: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗು ಬಂಜಾರ ಸಮಾಜದ ವಿವಿಧ ಸಂಘಟನೆಗಳ ಸಹಕಾರದೊಂದಿಗೆ ಮಂಗಳವಾರ ಶ್ರೀ ಸಂತ ಸೇವಾಲಾಲ ಮಹಾರಾಜರ ೨೮೧ನೇ ಜಯಂತ್ಯೋತ್ಸವ ತಾಲೂಕು ಕಛೇರಿ ಸಭಾಂಗಣದಲ್ಲಿ ಸರಳವಾಗಿ ಆಚರಿಸಲಾಯಿತು.
ತಹಸೀಲ್ದಾರ್ ಗ್ರೇಡ್-೨ ರಂಗಮ್ಮ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶ್ರೀ ಸಂತ ಸೇವಾಲಾಲ ಮಹಾರಾಜರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು. ಗಣೇಶ್ ನಾಯ್ಕ್ ಪ್ರಾಸ್ತಾವಿಕವಾಗಿ ಮಾತನಾಡಿದರು. ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಮೇಶ್, ಉಪ ತಹಸೀಲ್ದಾರ್‌ಗಳಾದ ಮಂಜಾನಾಯ್ಕ, ಅರಸು ಸೇರಿದಂತೆ ತಾಲೂಕು ಕಛೇರಿ ಅಧಿಕಾರಿಗಳು, ಸಿಬ್ಬಂದಿಗಳು, ಬಂಜಾರ ಸಮಾಜದ ಪ್ರಮುಖರಾದ ಪ್ರೇಮ್‌ಕುಮಾರ್, ಮೋತಿನಾಯ್ಕ, ಜುಂಜ್ಯಾನಾಯ್ಕ, ಕೃಷ್ಣಾನಾಯ್ಕ, ಪ್ರವೀಣ್‌ನಾಯ್ಕ, ರಮೇಶ್‌ನಾಯ್ಕ, ಚಂದ್ರು, ವೇದೇಶ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
No comments:
Post a Comment