ಭದ್ರಾವತಿ ಜನ್ನಾಪುರ ನಗರ ಆರೋಗ್ಯ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುವ ಗುತ್ತಿಗೆ ಮತ್ತು ಹೊರ ಗುತ್ತಿಗೆ ನೌಕರರು ಕಪ್ಪು ಪಟ್ಟಿ ಧರಿಸಿ ಮತ್ತು ರಾಷ್ಟ್ರೀಯ ಕಾರ್ಯಕ್ರಮದ ವರದಿಗಳನ್ನು ನಿಲ್ಲಿಸಿ ಮುಷ್ಕಾರ ನಡೆಸಿದರು
ಭದ್ರಾವತಿ, ಫೆ. ೧೭: ಶ್ರೀನಿವಾಸಾಚಾರಿ ಸಮಿತಿ ವರದಿ ಅನುಷ್ಠಾನ ಮತ್ತು ಗುತ್ತಿಗೆ ಹಾಗು ಹೊರಗುತ್ತಿಗೆ ನೌಕರರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗು ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಹಾಗು ಹೊರಗುತ್ತಿಗೆ ನೌಕರರು ಮೊದಲ ಹಂತದಲ್ಲಿ ಕಳೆದ ೪ ದಿನಗಳಿಂದ ಮುಷ್ಕರ ನಡೆಸುತ್ತಿದ್ದಾರೆ.
ರಾಜ್ಯ ಸರ್ಕಾರ ತಕ್ಷಣ ಶ್ರೀನಿವಾಸಾಚಾರಿ ಸಮಿತಿ ವರದಿ ಅನುಷ್ಠಾನಗೊಳಿಸುವ ಜೊತೆಗೆ ರಾಷ್ಟ್ರೀಯ ಆರೋಗ್ಯ ಅಭಿಯಾನ(ಎನ್‌ಎಚ್‌ಎಂ) ಹಾಗು ವೈದ್ಯಕೀಯ ಶಿಕ್ಷಣ ಇಲಾಖೆಯ ಅಡಿಯಲ್ಲಿ ರಾಜ್ಯಾದ್ಯಂತ ಕರ್ತವ್ಯ ನಿರ್ವಹಿಸುತ್ತಿರುವ ಸುಮಾರು ೩೦ ಸಾವಿರ ಗುತ್ತಿಗೆ ಮತ್ತು ಹೊರ ಗುತ್ತಿಗೆ ನೌಕರರಿಗೆ ಸಮಾನ ವೇತನ, ಸೇವಾ ಭದ್ರತೆ, ವರ್ಗಾವಣೆ, ಆರೋಗ್ಯ ಮತ್ತು ಜೀವ ವಿಮೆ, ಎಚ್.ಆರ್ ಪಾಲಿಸಿ ಸೇರಿದಂತೆ ಇನ್ನಿತರ ಒಟ್ಟು ಸುಮಾರು ೧೪ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮೊದಲ ಹಂತದಲ್ಲಿ ಫೆ.೧೪ರಿಂದ ಕಪ್ಪು ಪಟ್ಟಿ ಧರಿಸಿ ಮತ್ತು ರಾಷ್ಟ್ರೀಯ ಕಾರ್ಯಕ್ರಮದ ವರದಿಗಳನ್ನು ನಿಲ್ಲಿಸಿ ಮುಷ್ಕಾರ ನಡೆಸಲಾಗುತ್ತಿದೆ. ಫೆ.೨೩ರ ನಂತರ ೨ನೇ ಹಂತದ ಹೋರಾಟ ನಡೆಯಲಿದೆ.
ಹಳೇನಗರದ ತಾಲೂಕು ಆರೋಗ್ಯಾಧಿಕಾರಿಗಳ ಕಛೇರಿ ಮತ್ತು ಜನ್ನಾಪುರ ನಗರ ಆರೋಗ್ಯ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುವ ಗುತ್ತಿಗೆ ಮತ್ತು ಹೊರ ಗುತ್ತಿಗೆ ನೌಕರರು ಮುಷ್ಕಾರ ನಡೆಸಿದರು.
ಜನ್ನಾಪರ ನಗರ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಕವಿತಾ, ಪ್ರಯೋಗ ಶಾಲಾ ತಂತ್ರಜ್ಞ ಸಚಿನ್, ಸಿಬ್ಬಂದಿ ದೇವರಾಜ್, ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯ ವಸಂತ, ಗ್ರೇಷಿಯಾ, ನೇತ್ರಾ, ದೇವಿಕಾ ಮತ್ತು ವಿಜಯ್ ಸೇರಿದಂತೆ ಇನ್ನಿತರರು ಮುಷ್ಕರದಲ್ಲಿ ಪಾಲ್ಗೊಂಡಿದ್ದರು.
ಭದ್ರಾವತಿ ಹಳೇನಗರದ ತಾಲೂಕು ಆರೋಗ್ಯಾಧಿಕಾರಿಗಳ ಕಛೇರಿಯಲ್ಲಿ ಕರ್ತವ್ಯ ನಿರ್ವಹಿಸುವ ಗುತ್ತಿಗೆ ಮತ್ತು ಹೊರ ಗುತ್ತಿಗೆ ನೌಕರರು ಕಪ್ಪು ಪಟ್ಟಿ ಧರಿಸಿ ಮತ್ತು ರಾಷ್ಟ್ರೀಯ ಕಾರ್ಯಕ್ರಮದ ವರದಿಗಳನ್ನು ನಿಲ್ಲಿಸಿ ಮುಷ್ಕಾರ ನಡೆಸಿದರು
No comments:
Post a Comment