ಭದ್ರಾವತಿ ಚನ್ನಗಿರಿ ರಸ್ತೆಯಲ್ಲಿರುವ ಶ್ರೀ ಗಂಗಾಪರಮೇಶ್ವರಿ ಸಮುದಾಯ ಭವನದ ಕಟ್ಟಡದಲ್ಲಿ ತೆರೆಯಲಾಗಿರುವ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕೂಲಿ ಕಾರ್ಮಿಕರ ಒಕ್ಕೂಟದ ಲೋಕಾರ್ಪಣೆಯನ್ನು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ರಾಜ್ಯ ಖಜಾಂಚಿ ಸತ್ಯ ನೆರವೇರಿಸಿದರು.
ಭದ್ರಾವತಿ, ಫೆ. ೨೨: ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕೂಲಿ ಕಾರ್ಮಿಕರ ಒಕ್ಕೂಟದ ಲೋಕಾರ್ಪಣೆಯನ್ನು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ರಾಜ್ಯ ಖಜಾಂಚಿ ಸತ್ಯ ನೆರವೇರಿಸಿದರು.
ನಗರದ ಚನ್ನಗಿರಿ ರಸ್ತೆಯಲ್ಲಿರುವ ಶ್ರೀ ಗಂಗಾಪರಮೇಶ್ವರಿ ಸಮುದಾಯ ಭವನದ ಕಟ್ಟಡದಲ್ಲಿ ತೆರೆಯಲಾಗಿರುವ ಒಕ್ಕೂಟದ ಕೇಂದ್ರದ ಸಮಿತಿಯ ನೂತನ ಕಾರ್ಯಾಲಯಕ್ಕೆ ಡಿಎಸ್‌ಎಸ್ ಜಿಲ್ಲಾ ಸಂಚಾಲಕ ಚಿನ್ನಯ್ಯ ಚಾಲನೆ ನೀಡಿದರು. ನಾಮಫಲಕ ಉದ್ಘಾಟನೆಯನ್ನು ಗಂಗಾಮತಸ್ಥರ ಸಂಘದ ತಾಲೂಕು ಅಧ್ಯಕ್ಷ ಎಚ್.ಎ ಪರಮೇಶ್ವರಪ್ಪ ನೆರವೇರಿಸಿದರು.
ವೇದಿಕೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಒಕ್ಕೂಟದ ರಾಜ್ಯಾಧ್ಯಕ್ಷ ವಿ. ವಿನೋದ್ ವಹಿಸಿದ್ದರು. ನಗರಸಭೆ ಸದಸ್ಯ ಬಿ.ಕೆ ಸಂಗಮೇಶ್ವರ್ ಸಮಾರಂಭ ಉದ್ಘಾಟಿಸಿದರು.
ನಗರಸಭೆ ಉಪಾಧ್ಯಕ್ಷ ಚನ್ನಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಸುದೀಪ್‌ಕುಮಾರ್, ಸದಸ್ಯ ಮಣಿ ಎಎನ್‌ಎಸ್, ಗಂಗಾಮತಸ್ಥರ ಸಂಘದ ತಾಲೂಕು ಪ್ರಧಾನ ಕಾರ್ಯದರ್ಶಿ ಬಿ.ಆರ್ ಯಲ್ಲಪ್ಪ, ಡಿಎಸ್‌ಎಸ್ ಜಿಲ್ಲಾ ಸಮಿತಿ ಸದಸ್ಯ ಡಿ. ಏಳುಮಲೈ, ನಾಗರತ್ನ, ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕೂಲಿ ಕಾರ್ಮಿಕರ ಒಕ್ಕೂಟದ ರಾಜ್ಯ ಸಮಿತಿ ಉಪಾಧ್ಯಕ್ಷರಾದ ಶಶಿಕುಮಾರ್, ಎನ್. ವೆಂಕಟೇಶ್, ಬಿ. ರಾಜಾಚಾರಿ, ಪ್ರಧಾನ ಕಾರ್ಯದರ್ಶಿ ಎಂ. ಕಂದನ್, ಕಾರ್ಯದರ್ಶಿ ಎಸ್. ಕುಮಾರ್, ಸಹ ಕಾರ್ಯದರ್ಶಿಗಳಾದ ಬಿ.ಎಸ್. ಸುಶೀಲ, ಎಸ್. ವೆಂಕಟೇಶ್, ಖಜಾಂಚಿ ಚೆಲುವರಾಜ್, ನಿರ್ದೇಶಕರಾದ ಪಿ. ಏಳುಮಲೈ, ಬಿ.ಆರ್ ಯಲ್ಲಪ್ಪ, ಸುಬ್ರಮಣಿ, ಎನ್. ವಸಂತಕುಮಾರ್, ಎ. ಶಶಿಕುಮಾರ್, ವಿ. ಅರವಿಂದ್, ಕಾರ್ಯಕಾರಿ ಸಮಿತಿ ಸದಸ್ಯರಾದ ಪಿ. ದೊರೈ, ಶ್ರೀನಿವಾಸ್, ಎಚ್. ನಿಂಗರಾಜ್, ಎಂ. ಪವಿತ್ರ, ಜಿಲ್ಲಾ ಸಮಿತಿ ಅಧ್ಯಕ್ಷ ಎಂ. ಅರುಳ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಸಂಧ್ಯಾ, ಡಿ.ಜಿ. ಭಾಷಾ, ಎಂ. ರೇಖಾ, ಎಲ್. ಮಂಜುಳ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment