ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎನ್.ಜಿ ನಾಗರಾಜ್‌ಗೆ ಮನವಿ
ಭದ್ರಾವತಿ ನಗರಸಭೆ ವ್ಯಾಪ್ತಿಯ ಜನ್ನಾಪುರ ಕೆರೆ ಅಭಿವೃದ್ಧಿ ಕಾಮಗಾರಿಗಳು ನಡೆಯುವ ಮೊದಲು ಕೆರೆ ಸಮೀಪದಲ್ಲಿರುವ ರೈತರ ಸಭೆ ನಡೆಸುವಂತೆ ಒತ್ತಾಯಿಸಿ ಭಾರತರತ್ನ ಸರ್.ಎಂ. ವಿಶ್ವೇಶ್ವರಯ್ಯ ಚಾರಿಟಬಲ್ ಟ್ರಸ್ಟ್, ಶ್ರೀ ಡಿ. ದೇವರಾಜ ಅರಸು ಜನಸ್ಪಂದನ ವೇದಿಕೆ ಹಾಗು ಸುವರ್ಣ ಮಹಿಳಾ ವೇದಿಕೆ ವತಿಯಿಂದ ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರ(ಸೂಡಾ) ಅಧ್ಯಕ್ಷ ಎನ್.ಜಿ ನಾಗರಾಜ್‌ಗೆ ಮನವಿ ಸಲ್ಲಿಸಲಾಯಿತು.
ಭದ್ರಾವತಿ, ಫೆ. ೪: ನಗರಸಭೆ ವ್ಯಾಪ್ತಿಯ ಜನ್ನಾಪುರ ಕೆರೆ ಅಭಿವೃದ್ಧಿ ಕಾಮಗಾರಿಗಳು ನಡೆಯುವ ಮೊದಲು ಕೆರೆ ಸಮೀಪದಲ್ಲಿರುವ ರೈತರ ಸಭೆ ನಡೆಸುವಂತೆ ಒತ್ತಾಯಿಸಿ ಭಾರತರತ್ನ ಸರ್.ಎಂ. ವಿಶ್ವೇಶ್ವರಯ್ಯ ಚಾರಿಟಬಲ್ ಟ್ರಸ್ಟ್, ಶ್ರೀ ಡಿ. ದೇವರಾಜ ಅರಸು ಜನಸ್ಪಂದನ ವೇದಿಕೆ ಹಾಗು ಸುವರ್ಣ ಮಹಿಳಾ ವೇದಿಕೆ ವತಿಯಿಂದ ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರ(ಸೂಡಾ) ಅಧ್ಯಕ್ಷ ಎನ್.ಜಿ ನಾಗರಾಜ್‌ಗೆ ಮನವಿ ಸಲ್ಲಿಸಲಾಯಿತು.
ಸರ್ವೆ ನಂ.೭ರ ಜನ್ನಾಪುರ ಕೆರೆ ಅಭಿವೃದ್ಧಿಗೆ ಸಂಬಂಧಿಸಿದಂತೆ ಈಗಾಗಲೇ ಟೆಂಡರ್ ಪ್ರಕ್ರಿಯೆ ಮುಗಿದಿದ್ದು, ಈ ಹಿನ್ನಲೆಯಲ್ಲಿ ತಕ್ಷಣ ಶಾಸಕ ಬಿ.ಕೆ ಸಂಗಮೇಶ್ವರ್ ಅಧ್ಯಕ್ಷತೆಯಲ್ಲಿ ಕೆರೆ ಸಮೀಪದಲ್ಲಿರುವ ರೈತರ ಸಭೆ ನಡೆಸಿ ಕಾಮಗಾರಿ ಆರಂಭಿಸಲು ಶಂಕುಸ್ಥಾಪನಾ ಸಮಾರಂಭ ಆಯೋಜಿಸಿ ತಾಲೂಕು ಆಡಳಿತದ ಜೊತೆ ಕೆರೆ ಸರ್ವೆ ಕಾರ್ಯ ನಡೆಸಿ ಬೌಂಡರಿ ನಿಗದಿಪಡಿಸಲು ಅತಿ ಹೆಚ್ಚು ಶ್ರಮಿಸಿರುವ ಈ ಹಿಂದೆ ನಗರಸಭೆ ಪೌರಾಯುಕ್ತರಾಗಿದ್ದ ಮನೋಹರ್ ಅವರನ್ನು ಆಹ್ವಾನಿಸುವಂತೆ ಮನವಿ ಮಾಡಲಾಗಿದೆ.
ನಗರಸಭೆ ವ್ಯಾಪ್ತಿ ಹೊಸಮನೆ ತಮ್ಮಣ್ಣ ಕಾಲೋನಿ, ಸಮೀಪವಿರುವ ಸುಮಾರು ೮೦೦ ವರ್ಷಗಳ ಇತಿಹಾಸವಿರುವ ಸರ್ವೆ ನಂ.೧೧೨ರ ಸರ್ಕಾರಿ ಹಿರೇಕೆರೆಗೆ ನಗರಸಭೆ ವತಿಯಿಂದ ಕೆರೆ ಸುತ್ತಲೂ ಬಸಿ ಕಾಲುವೆ(ಟ್ರಂಚ್) ಹಾಗು ಕೆರೆ ಕೋಡಿ ಸಮೀಪ ೪ ಅಡಿ ವಿಸ್ತೀರ್ಣವುಳ್ಳು ೮ ಪೈಪುಗಳನ್ನು ಅಳವಡಿಸಲು ಮನವಿ ಸಲ್ಲಿಸಲಾಗಿದೆ. ಈ ಹಿನ್ನಲೆಯಲ್ಲಿ ಪ್ರಾಧಿಕಾರದಿಂದ ಕೆರೆಯಲ್ಲಿರುವ ತೆಪ್ಪಗಳನ್ನು ತೆಗೆಯುವ ಕಾಮಗಾರಿ ಕೈಗೆತ್ತಿಕೊಳ್ಳುವಂತೆ ಒತ್ತಾಯಿಸಿ ನಗರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಕೆರೆಗಳ ವೀಕ್ಷಣೆಗೆ ಆಗಮಿಸಬೇಕೆಂದು ಕೋರಲಾಗಿದೆ.
ಟ್ರಸ್ಟ್ ಛೇರ್‍ಮನ್, ನಗರಸಭೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಆರ್. ವೇಣುಗೋಪಾಲ್ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು. ನಗರಸಭಾ ಸದಸ್ಯ ಟಿಪ್ಪು ಸುಲ್ತಾನ್, ಪ್ರಾಧಿಕಾರದ ಸದಸ್ಯ ರಾಹುಲ್ ಪಿ. ಬಿದರೆ ಹಾಗು ರಾಜು ಉಪಸ್ಥಿತರಿದ್ದರು.
No comments:
Post a Comment