ಭದ್ರಾವತಿಯಲ್ಲಿ ಶನಿವಾರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಶಾಸಕ ಬಿ.ಕೆ ಸಂಗಮೇಶ್ವರ್ ಸಹೋದರ ಬಿ.ಕೆ ಶಿವಕುಮಾರ್‌ರವರ ಮಾಧವನಗರದ ಮನೆ ಹಿಂಭಾಗದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾಂಗ್ರೆಸ್ ಪಕ್ಷದ ಡಿಜಿಟಲ್ ಸದಸ್ಯತ್ವ ನೋಂದಣಿ ಅಭಿಯಾನ ಹಾಗೂ ಮೇಕೆದಾಟು ಯೋಜನೆಯ ಪೂರ್ವಭಾವಿಯಲ್ಲಿ ಪಾಲ್ಗೊಂಡು ಮಾತನಾಡಿದರು.
ಭದ್ರಾವತಿ, ಫೆ. ೨೬: ಈ ದೇಶದ ಭವಿಷ್ಯದ ಆಡಳಿತಕ್ಕೆ ಕಾಂಗ್ರೆಸ್ ಪಕ್ಷದ ಮಹತ್ವ ಅರಿತುಕೊಂಡಿರುವ ಪ್ರಜ್ಞಾವಂತ ಯುವ ಸದಸ್ಯರ ಪಡೆಯನ್ನು ರೂಪಿಸುವ ನಿಟ್ಟಿನಲ್ಲಿ ಇದೀಗ ಡಿಜಿಟಲ್ ಸದಸ್ಯತ್ವ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಸಚಿವ ಕೆ. ಶಿವಮೂರ್ತಿ ಹೇಳಿದರು.
ಅವರು ಶನಿವಾರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಶಾಸಕ ಬಿ.ಕೆ ಸಂಗಮೇಶ್ವರ್ ಸಹೋದರ ಬಿ.ಕೆ ಶಿವಕುಮಾರ್‌ರವರ ಮಾಧವನಗರದ ಮನೆ ಹಿಂಭಾಗದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾಂಗ್ರೆಸ್ ಪಕ್ಷದ ಡಿಜಿಟಲ್ ಸದಸ್ಯತ್ವ ನೋಂದಣಿ ಅಭಿಯಾನ ಹಾಗೂ ಮೇಕೆದಾಟು ಯೋಜನೆಯ ಪೂರ್ವಭಾವಿಯಲ್ಲಿ ಪಾಲ್ಗೊಂಡು ಮಾತನಾಡಿದರು.
ಕಾಂಗ್ರೆಸ್ ಪಕ್ಷ ಈ ದೇಶಕ್ಕೆ ನೀಡಿರುವ ಕೊಡುಗೆಗಳನ್ನು ಅರಿತುಕೊಂಡಿರುವ ಪ್ರಜ್ಞಾವಂತರು ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯತ್ವ ಪಡೆಯುವ ಮೂಲಕ ಭವಿಷ್ಯದಲ್ಲಿ ಸದೃಢವಾದ ದೇಶ ನಿರ್ಮಾಣಕ್ಕೆ ಮುಂದಾಗಬೇಕು. ಇದೀಗ ಸದಸ್ಯತ್ವ ಶುಲ್ಕ ರು. ೫ ನಿಗದಿಪಡಿಸಲಾಗಿದೆ. ಪಕ್ಷಕ್ಕೆ ಡಿಜಿಟಲ್ ಆಧಾರಿತ ಸದಸ್ಯತ್ವದಿಂದ ಹಲವು ಪ್ರಯೋಜನಗಳಾಗಲಿವೆ. ಈ ಹಿನ್ನಲೆಯಲ್ಲಿ ಡಿಜಿಟಲ್ ಸದಸ್ಯತ್ವಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದರು.
ಬೃಹತ್ ಮಹಾನಗರವಾಗಿರುವ ಬೆಂಗಳೂರಿನ ಮುಂದಿನ ಭವಿಷ್ಯದ ಆಲೋಚನೆಯೊಂದಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಪಕ್ಷದಿಂದ ಜಾಗೃತಿವಹಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಕಾವೇರಿ ನದಿ ನೀರನ್ನು ಸದ್ಬಳಕೆ ಮಾಡಿಕೊಳ್ಳಲು ಮೇಕೆದಾಟು ಯೋಜನೆಗಾಗಿ ಹೋರಾಟ ನಡೆಸಲಾಗುತ್ತಿದೆ. ಫೆ.೨೭ರಿಂದ ೫ ದಿನಗಳ ವರೆಗೆ ನಡೆಯುವ ಈ ಹೋರಾಟದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.
ವೇದಿಕೆಯಲ್ಲಿ ಕೆಪಿಸಿಸಿ ಸದಸ್ಯತ್ವ ನೋಂದಣಿ ಹಾಗು ತಾಂತ್ರಿಕ ಸಮಿತಿಯ ಉಸ್ತುವಾರಿಗಳಾದ ಬಾಲಕೃಷ್ಣ, ಟಿ. ಲೋಕೇಶ್‌ನಾಯ್ಕ್, ತಸ್ರೀಫ್, ರೇಖಾ ಶ್ರೀನಿವಾಸ್, ಸ್ಥಳೀಯ ಪ್ರಮುಖರಾದ ಎಚ್.ಸಿ ದಾಸೇಗೌಡ, ಬಿ.ಕೆ ಮೋಹನ್, ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ಉಪಾಧ್ಯಕ್ಷ ಚನ್ನಪ್ಪ, ಬ್ಲಾಕ್ ಕಾಂಗ್ರೆಸ್ ಗ್ರಾಮಾಂತರ ಅಧ್ಯಕ್ಷ ಎಚ್.ಎಲ್ ಷಡಾಕ್ಷರಿ, ಬಾಬಾಜಾನ್, ಫೀರ್‌ಷರೀಫ, ಸಿ.ಎಂ ಖಾದರ್, ಅಮೀರ್‌ಜಾನ್, ಬಿ. ಗಂಗಾಧರ್, ರಮೇಶ್ ಶಂಕರಘಟ್ಟ, ಪ್ರವೀಣ್‌ನಾಯ್ಕ, ವಿನೋದ್‌ಕುಮಾರ್, ಅಫ್ತಾಬ್ ಅಹಮದ್, ಕೃಷ್ಣನಾಯ್ಕ, ಅಭಿಲಾಷ್, ಕಾಂಗ್ರೆಸ್ ಪಕ್ಷದ ಎಲ್ಲಾ ನಗರಸಭಾ ಸದಸ್ಯರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಗ್ರಾಮ ಪಂಚಾಯತ್ ಚುನಾಯಿತ ಸದಸ್ಯರು, ಡಿಜಿಟಲ್ ನೋಂದಣಿ ವಿಭಾಗದ ಸಿಬ್ಬಂದಿಗಳು ಹಾಗು ಪಕ್ಷದ ಕಾರ್ಯಕರ್ತರು ಪಾಲ್ಗೊಂಡಿದ್ದರು. ಬ್ಲಾಕ್ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಟಿ. ಚಂದ್ರೇಗೌಡ ಸ್ವಾಗತಿಸಿದರು.
ಭದ್ರಾವತಿ ಭದ್ರಾವತಿಯಲ್ಲಿ ಶನಿವಾರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಶಾಸಕ ಬಿ.ಕೆ ಸಂಗಮೇಶ್ವರ್ ಸಹೋದರ ಬಿ.ಕೆ ಶಿವಕುಮಾರ್‌ರವರ ಮಾಧವನಗರದ ಮನೆ ಹಿಂಭಾಗದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾಂಗ್ರೆಸ್ ಪಕ್ಷದ ಡಿಜಿಟಲ್ ಸದಸ್ಯತ್ವ ನೋಂದಣಿ ಅಭಿಯಾನ ಹಾಗೂ ಮೇಕೆದಾಟು ಯೋಜನೆಯ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡಿರುವ ಗ್ರಾಮ ಪಂಚಾಯತ್ ಚುನಾಯಿತ ಸದಸ್ಯರು, ಡಿಜಿಟಲ್ ನೋಂದಣಿ ವಿಭಾಗದ ಸಿಬ್ಬಂದಿಗಳು ಹಾಗು ಪಕ್ಷದ ಕಾರ್ಯಕರ್ತರು.
No comments:
Post a Comment