ಭದ್ರಾವತಿಯಲ್ಲಿ ಭಾರತೀಯ ಜನತಾ ಪಕ್ಷ ತಾಲೂಕು ಮಂಡಲ ವತಿಯಿಂದ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹುಟ್ಟುಹಬ್ಬದ ಅಂಗವಾಗಿ ಹಳೇನಗರದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಭಾನುವಾರ ಒಳರೋಗಿಗಳಿಗೆ ಹಾಲು, ಹಣ್ಣು, ಬ್ರೆಡ್ ವಿತರಣೆ ನಡೆಯಿತು.
ಭದ್ರಾವತಿ, ಫೆ. ೨೭: ಭಾರತೀಯ ಜನತಾ ಪಕ್ಷ ತಾಲೂಕು ಮಂಡಲ ವತಿಯಿಂದ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹುಟ್ಟುಹಬ್ಬದ ಅಂಗವಾಗಿ ಹಳೇನಗರದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಭಾನುವಾರ ಒಳರೋಗಿಗಳಿಗೆ ಹಾಲು, ಹಣ್ಣು, ಬ್ರೆಡ್ ವಿತರಣೆ ನಡೆಯಿತು.
ಪ್ರತಿ ವರ್ಷ ತಾಲೂಕು ಮಂಡಲ ವತಿಯಿಂದ ಯಡಿಯೂರಪ್ಪನವರ ಹುಟ್ಟುಹಬ್ಬ ವಿಶೇಷವಾಗಿ ಆಚರಿಸಿಕೊಂಡು ಬರಲಾಗುತ್ತಿದೆ. ಬೆಳಿಗ್ಗೆ ನಗರದ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.
ಮಂಡಲ ಅಧ್ಯಕ್ಷ ಎಂ. ಪ್ರಭಾಕರ್ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಮುಖರಾದ ಬಿ.ಕೆ ಶ್ರೀನಾಥ್, ಜಿ. ಧರ್ಮಪ್ರಸಾದ್, ಎಸ್. ಕುಮಾರ್, ಎನ್. ವಿಶ್ವನಾಥರಾವ್, ಸಂಪತ್‌ರಾಜ್ ಬಾಂಟಿಯಾ, ಕರಿಗೌಡ, ಕೆ. ಮಂಜಪ್ಪ, ರಾಮ್‌ನಾಥ ಬರ್ಗೆ, ಬಿ.ಎಸ್ ಶ್ರೀನಾಥ್, ಶೋಭಾಪಾಟೀಲ್, ಹೇಮಾವತಿ, ಆರ್.ಎಸ್ ಶೋಭಾ, ಮಂಜುಳಾ, ಕವಿತಾ, ರವಿಕುಮಾರ್, ಮಂಜುನಾಥ್, ಚಂದ್ರು, ಸುಬ್ರಮಣ್ಯ, ಪಿ. ಗಣೇಶ್‌ರಾವ್, ಸೇರಿದಂತೆ ಪಕ್ಷದ ವಿವಿಧ ಮೋರ್ಚಾಗಳ ಅಧ್ಯಕ್ಷರು, ಪದಾಧಿಕಾರಿಗಳು, ಕಾರ್ಯಕರ್ತರು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
No comments:
Post a Comment