ರಂಗನಾಥ್
ಭದ್ರಾವತಿ, ಫೆ. ೧೩: ನಗರದ ಹೊಸಬುಳ್ಳಾಪುರ ನಿವಾಸಿ, ದಲಿತ ಮುಖಂಡ ರಂಗನಾಥ್(೪೭) ಅನಾರೋಗ್ಯದಿಂದ ನಿಧನ ಹೊಂದಿದರು.
ಪತ್ನಿ, ಒಂದು ಗಂಡು, ಒಂದು ಹೆಣ್ಣು ಮಕ್ಕಳನ್ನು ಹೊಂದಿದ್ದರು. ಮೃತರ ಅಂತ್ಯಕ್ರಿಯೆ ಭಾನುವಾರ ಬೈಪಾಸ್ ರಸ್ತೆಯಲ್ಲಿರುವ ಹಿಂದೂ ರುದ್ರಭೂಮಿಯಲ್ಲಿ ನೆರವೇರಿತು. ರಂಗನಾಥ್‌ರವರು ಹಲವಾರು ದಲಿತ ಹೋರಾಟಗಳಲ್ಲಿ ಪಾಲ್ಗೊಂಡಿದ್ದರು. ಮೃತರ ನಿಧನಕ್ಕೆ ಡಿಎಸ್‌ಎಸ್ ಮುಖಂಡರಾದ ಕಾಣಿಕ್‌ರಾಜ್ ಸೇರಿದಂತೆ ಇನ್ನಿತರರು ಸಂತಾಪ ಸೂಚಿಸಿದ್ದಾರೆ.
No comments:
Post a Comment