ಜೆಡಿಯು ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಎಸ್. ಗೌಡರಿಂದ ಪ್ರಧಾನಿಗೆ ಮನವಿ
ರಾಜ್ಯದಲ್ಲಿ ರೈತರು ಬೆಳೆದಿರುವ ರಾಗಿ ಬೆಳೆಗೆ ಕೇಂದ್ರ ಸರ್ಕಾರ ಸೂಕ್ತ ಬೆಂಬಲ ಬೆಲೆ ನೀಡುವ ಮೂಲಕ ಖರೀದಿಸುವಂತೆ ಒತ್ತಾಯಿಸಿ ಜನತಾದಳ(ಸಂಯುಕ್ತ) ಕರ್ನಾಟಕ ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಎಸ್. ಗೌಡ ಸೋಮವಾರ ಭದ್ರಾವತಿ ತಾಲೂಕು ಕಛೇರಿ ಮಿನಿ ವಿಧಾನಸೌಧದ ಮುಂಭಾಗ ಪ್ರತಿಭಟನೆ ನಡೆಸಿದರು.
ಭದ್ರಾವತಿ, ಫೆ. ೨೮: ರಾಜ್ಯದಲ್ಲಿ ರೈತರು ಬೆಳೆದಿರುವ ರಾಗಿ ಬೆಳೆಗೆ ಕೇಂದ್ರ ಸರ್ಕಾರ ಸೂಕ್ತ ಬೆಂಬಲ ಬೆಲೆ ನೀಡುವ ಮೂಲಕ ಖರೀದಿಸುವಂತೆ ಒತ್ತಾಯಿಸಿ ಜನತಾದಳ(ಸಂಯುಕ್ತ) ಕರ್ನಾಟಕ ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಎಸ್. ಗೌಡ ಸೋಮವಾರ ತಾಲೂಕು ಕಛೇರಿ ಮಿನಿ ವಿಧಾನಸೌಧದ ಮುಂಭಾಗ ಪ್ರತಿಭಟನೆ ನಡೆಸಿ ಪ್ರಧಾನ ಮಂತ್ರಿಗಳಿಗೆ ತಹಸೀಲ್ದಾರ್ ಮೂಲಕ ಮನವಿ ಸಲ್ಲಿಸಿದರು.
ಕೇಂದ್ರ ಸರ್ಕಾರ ಕಳೆದ ಬಾರಿ ೪.೧೦ ಲಕ್ಷ ಟನ್ ರಾಗಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಿತ್ತು. ಅಲ್ಲದೆ ಸಿರಿ ಧಾನ್ಯಗಳ ಸಾಲಿನಲ್ಲಿ ರಾಗಿಯನ್ನು ಸೇರಿಸುವ ಜೊತೆಗೆ ಪಡಿತರ ವಿತರಣೆಗೂ ಅವಕಾಶ ಮಾಡಿಕೊಡಲಾಗಿತ್ತು. ಈ ಹಿನ್ನಲೆಯಲ್ಲಿ ರಾಜ್ಯದ ಹಳೇ ಮೈಸೂರ ಭಾಗದ ಬಯಲು ಸೀಮೆಯಲ್ಲಿ ಈ ಬಾರಿ ಅತಿ ಹೆಚ್ಚು ರಾಗಿ ಬೆಳೆಯನ್ನು ಬೆಳೆಯಲಾಗಿದೆ. ಆದರೆ ಇದೀಗ ಕೇಂದ್ರ ಸರ್ಕಾರ ಕೇವಲ ೨.೧೦ ಲಕ್ಷ ಟನ್ ರಾಗಿ ಮಾತ್ರ ಬೆಂಬಲ ಬೆಲೆಯಲ್ಲಿ ಖರೀದಿಸುವುದಾಗಿ ತಿಳಿಸಿದೆ. ಇದರಿಂದಾಗಿ ರೈತರು ಆತಂಕಕ್ಕೆ ಒಳಗಾಗಿದ್ದಾರೆಂದು ಮನವಿಯಲ್ಲಿ ಅಳಲು ವ್ಯಕ್ತಪಡಿಸಲಾಗಿದೆ.
ಪ್ರಸಕ್ತ ಸಾಲಿನಲ್ಲಿ ರಾಜ್ಯದಲ್ಲಿ ೧೫.೭ ಲಕ್ಷ ಟನ್ ರಾಗಿ ಬೆಳೆ ಬೆಳೆಯಲಾಗಿದೆ. ಮುಕ್ತ ಮಾರುಕಟ್ಟೆಯಲ್ಲಿ ರೈತರು ಬೆಳೆದಿರುವ ರಾಗಿಗೆ ಕ್ವಿಂಟಾಲ್‌ಗೆ ರು. ೨ ಸಾವಿರ ಇದ್ದು, ಇದರಿಂದ ರೈತರು ಸಾಕಷ್ಟು ನಷ್ಟ ಅನುಭವಿಸುವಂತಾಗಿದೆ. ಈ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಕ್ವಿಂಟಾಲ್‌ಗೆ ರು.೪೦೦೦ ಬೆಂಬಲ ಬೆಲೆ ನಿಗದಿಪಡಿಸಿ ರೈತರು ಬೆಳೆದಿರುವ ೧೫.೭ ಲಕ್ಷ ಟನ್ ರಾಗಿ ಖರೀದಿಸುವ ಮೂಲಕ ನೆರವಿಗೆ ಬರುವಂತೆ ಮನವಿ ಮಾಡಲಾಗಿದೆ.
ಸಾಮಾಜಿಕ ಹೋರಾಟಗಾರ ಉಕ್ಕುಂದ ಶಿವಕುಮಾರ್, ಕರುನಾಡ ಹಿತರಕ್ಷಣಾ ಸಮಿತಿ ರಾಜ್ಯಾಧ್ಯಕ್ಷ ವೈ. ಶಶಿಕುಮಾರ್, ನಾಗರಾಜ ನಾಯ್ಕ ಮತ್ತು ಜಿಟೋಜಿ ರಾವ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment