ಭದ್ರಾವತಿ ನಗರಸಭೆ ವ್ಯಾಪ್ತಿ ಜಟ್‌ಪಟ್ ನಗರದಲ್ಲಿರುವ ಷಟಲ್ ಒಳಾಂಗಣ ಕ್ರೀಡಾಂಗಣದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಆಯೋಜಿಸಲಾಗಿರುವ ತಾಲೂಕು ಮಟ್ಟದ ಷಟಲ್ ಪಂದ್ಯಾವಳಿಗೆ ಭಾನುವಾರ ಚಿಕ್ಕಮಗಳೂರು ಯೋಜನಾ ನಿರ್ದೇಶಕ ಮನೋಹರ್ ಷಟಲ್ ಬ್ಯಾಡ್ಮಿಂಟನ್ ಆಟವಾಡುವ ಮೂಲಕ ಚಾಲನೆ ನೀಡಿದರು.
ಭದ್ರಾವತಿ, ಫೆ. ೨೭: ನಗರಸಭೆ ವ್ಯಾಪ್ತಿ ಜಟ್‌ಪಟ್ ನಗರದಲ್ಲಿರುವ ಷಟಲ್ ಒಳಾಂಗಣ ಕ್ರೀಡಾಂಗಣದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಆಯೋಜಿಸಲಾಗಿರುವ ತಾಲೂಕು ಮಟ್ಟದ ಷಟಲ್ ಪಂದ್ಯಾವಳಿಗೆ ಭಾನುವಾರ ಚಿಕ್ಕಮಗಳೂರು ಯೋಜನಾ ನಿರ್ದೇಶಕ ಮನೋಹರ್ ಚಾಲನೆ ನೀಡಿದರು.
ಕ್ರೀಡಾಪಟುಗಳು, ಕ್ರೀಡಾಭಿಮಾನಿಗಳು ಮತ್ತು ನಗರಸಭಾ ಸದಸ್ಯರು ಹಾಗು ಕ್ರೀಡಾಂಗಣ ಉಸ್ತುವಾರಿ ಸಮಿತಿಯ ಪ್ರಮುಖರು ಈ ಹಿಂದೆ ನಗರಸಭೆ ಪೌರಾಯುಕ್ತರಾಗಿ ಮನೋಹರ್‌ರವರು ಕರ್ತವ್ಯ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಕ್ರೀಡಾಂಗಣದ ಅಭಿವೃದ್ಧಿಗಾಗಿ ಕೈಗೊಂಡ ಕಾರ್ಯವನ್ನು ಶ್ಲಾಘಿಸಿ ಅವರನ್ನು ಗೌರವಿಸುವ ಮೂಲಕ ಸನ್ಮಾನಿಸಲಾಯಿತು.
ವಾರ್ಡ್ ವ್ಯಾಪ್ತಿಯ ನಗರಸಭಾ ಸದಸ್ಯರಾದ ಆರ್. ಶ್ರೇಯಸ್(ಚಿಟ್ಟೆ) ಮತ್ತು ಬಿ.ಎಂ ಮಂಜುನಾಥ್(ಟೀಕು) ಮುಂದಿನ ದಿನಗಳಲ್ಲಿ ಕ್ರೀಡಾಂಗಣದ ಅಭಿವೃದ್ಧಿಗೆ ಮತ್ತಷ್ಟು ಶಕ್ತಿ ಮೀರಿ ಶ್ರಮಿಸುವುದಾಗಿ ಭರವಸೆ ನೀಡಿದರು.
ಇದೆ ಸಂದರ್ಭದಲ್ಲಿ ಒಳಾಂಗಣ ಕ್ರೀಡಾಂಗಣದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಿಸಲಾಯಿತು. ನಗರಸಭಾ ಸದಸ್ಯೆ ಅನುಪಮ ಚನ್ನೇಶ್, ಸಿದ್ದಲಿಂಗಯ್ಯ, ದೈಹಿಕ ಶಿಕ್ಷಕ ಶಿವಲಿಂಗೇಗೌಡ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಈ ಹಿಂದೆ ಭದ್ರಾವತಿ ನಗರಸಭೆ ಪೌರಾಯುಕ್ತರಾಗಿ ಮನೋಹರ್‌ರವರು ಕರ್ತವ್ಯ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ನಗರಸಭೆ ವ್ಯಾಪ್ತಿಯ ಜಟ್‌ಪಟ್ ನಗರದಲ್ಲಿರುವ ಷಟಲ್ ಒಳಾಂಗಣ ಕ್ರೀಡಾಂಗಣದ ಅಭಿವೃದ್ಧಿಗಾಗಿ ಕೈಗೊಂಡ ಕಾರ್ಯವನ್ನು ಶ್ಲಾಘಿಸಿ ಅವರನ್ನು ಗೌರವಿಸುವ ಮೂಲಕ ಸನ್ಮಾನಿಸಲಾಯಿತು.
No comments:
Post a Comment