ಭದ್ರಾವತಿಯಲ್ಲಿ ಮಾಜಿ ಶಾಸಕ ದಿವಂಗತ ಎಂ.ಜೆ ಅಪ್ಪಾಜಿ ಅಪ್ಪಾಜಿ ಬೆಂಬಲಿಗ, ನಗರಸಭೆ ಮಾಜಿ ಸದಸ್ಯ ಶಿವರಾಜ್ ಪತ್ನಿ ರೇಣುಕಾ ಜೊತೆಗೆ ಬುಧವಾರ ಶಾಸಕ ಬಿ.ಕೆ ಸಂಗಮೇಶ್ವರ್ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ಭದ್ರಾವತಿ, ಫೆ. ೨: ಮಾಜಿ ಶಾಸಕ ದಿವಂಗತ ಎಂ.ಜೆ ಅಪ್ಪಾಜಿ ಅಪ್ಪಾಜಿ ಬೆಂಬಲಿಗ, ನಗರಸಭೆ ಮಾಜಿ ಸದಸ್ಯ ಶಿವರಾಜ್ ಪತ್ನಿ ರೇಣುಕಾ ಜೊತೆಗೆ ಬುಧವಾರ ಶಾಸಕ ಬಿ.ಕೆ ಸಂಗಮೇಶ್ವರ್ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ಹಲವಾರು ವರ್ಷಗಳಿಂದ ಎಂ.ಜೆ ಅಪ್ಪಾಜಿ ಅವರೊಂದಿಗೆ ಜೆಡಿಎಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ಶಿವರಾಜ್ ಈ ಬಾರಿ ನಗರಸಭೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದಿಂದ ಸ್ಪರ್ಧಿಸಲು ಪತ್ನಿ ರೇಣುಕಾ ಅವರಿಗೆ ಟಿಕೆಟ್ ನೀಡುವಂತೆ ಮನವಿ ಮಾಡಿದ್ದರು. ಆದರೆ ಬೇರೆಯವರಿಗೆ ಟಿಕೆಟ್ ನೀಡಿದ ಹಿನ್ನಲೆಯಲ್ಲಿ ನಾಮಪತ್ರ ಸಲ್ಲಿಸಿ ಪುನಃ ಹಿಂಪಡೆದುಕೊಂಡಿದ್ದರು. ಆ ನಂತರ ಬೆಳವಣಿಗೆಯಲ್ಲಿ ಜೆಡಿಎಸ್ ಪಕ್ಷದಿಂದ ಸಾಕಷ್ಟು ಅಂತರ ಕಾಯ್ದುಕೊಂಡಿದ್ದರು. ಇದೀಗ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಸುದೀಪ್ ಕುಮಾರ್, ಮುಖಂಡರಾದ ಲೋಕೇಶ್, ಶರವಣನ್, ಕೆ. ಮಂಜುನಾಥ್, ರಾಮಚಂದ್ರಪ್ಪ, ದಶರಥಗಿರಿ ಮತ್ತು ನರಸಿಂಹಮೂರ್ತಿ ಹಾಗು ಗ್ರಾಮ ಪಂಚಾಯಿತಿ ಸದಸ್ಯ ಗೌರಪುರ ಶಿವರಾಮ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment