ಶ್ರಮ ಶಕ್ತಿ ಅಸಂಘಟಿತ ಕಾರ್ಮಿಕರ ಒಕ್ಕೂಟದ ವತಿಯಿಂದ ಭದ್ರಾವತಿ ಗಾಂಧಿನಗರದ ಆಗಮುಡಿ(ಮೊದಲಿಯಾರ್) ಸಮುದಾಯ ಭವನದಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ಇ-ಶ್ರಮ್ ಕಾರ್ಡ್ ವಿತರಣೆ ಹಾಗು ಕಾರ್ಮಿಕ ಇಲಾಖೆಯಿಂದ ಕಿಟ್ ವಿತರಣಾ ಕಾರ್ಯಕ್ರಮವನ್ನು ಸಂಸದ ಬಿ.ವೈ ರಾಘವೇಂದ್ರ ಉದ್ಘಾಟಿಸಿದರು.
ಭದ್ರಾವತಿ, ಫೆ. ೨೩: ಕೇಂದ್ರ ಹಾಗು ರಾಜ್ಯ ಸರ್ಕಾರಗಳು ಅಸಂಘಟಿತ ಕಾರ್ಮಿಕರಿಗಾಗಿ ಹಲವಾರು ಯೋಜನೆಗಳನ್ನು ರೂಪಿಸಿದ್ದು, ಅವುಗಳನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಸಂಸದ ಬಿ.ವೈ. ರಾಘವೇಂದ್ರ ಮನವಿ ಮಾಡಿದರು.
ಅವರು ಬುಧವಾರ ಶ್ರಮ ಶಕ್ತಿ ಅಸಂಘಟಿತ ಕಾರ್ಮಿಕರ ಒಕ್ಕೂಟದ ವತಿಯಿಂದ ಗಾಂಧಿನಗರದ ಆಗಮುಡಿ(ಮೊದಲಿಯಾರ್) ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಇ-ಶ್ರಮ್ ಕಾರ್ಡ್ ವಿತರಣೆ ಹಾಗು ಕಾರ್ಮಿಕ ಇಲಾಖೆಯಿಂದ ಕಿಟ್ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಅಸಂಘಟಿತ ಕಾರ್ಮಿಕರು ಸಹ ಸಮಾಜದ ಮುಖ್ಯ ವಾಹಿನಿಯಲ್ಲಿ ಗುರುತಿಸಿಕೊಳ್ಳುವ ನಿಟ್ಟಿನಲ್ಲಿ ಅಗತ್ಯವಿರುವ ಯೋಜನೆಗಳನ್ನು ಕೇಂದ್ರ ಹಾಗು ರಾಜ್ಯ ಸರ್ಕಾರಗಳು ರೂಪಿಸಿವೆ. ಈ ಯೋಜನೆಗಳು ಸಮರ್ಪಕವಾಗಿ ತಲುಪಿಸುವ ನಿಟ್ಟಿನಲ್ಲಿ ಸಂಘಟನೆಗಳ ಪಾತ್ರ ಪ್ರಮುಖವಾಗಿವೆ ಎಂದರು.
ನಗರಸಭಾ ಸದಸ್ಯ ಬಿ.ಕೆ ಮೋಹನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ಸ್ಥಾಯಿ ಸಮಿತಿ ಅಧ್ಯಕ್ಷ ಸುದೀಪ್‌ಕುಮಾರ್, ಸದಸ್ಯರಾದ ವಿ. ಕದಿರೇಶ್, ಮಣಿ ಎಎನ್‌ಎಸ್, ಜಾರ್ಜ್, ಜಿಲ್ಲಾ ಕಾರ್ಮಿಕ ಇಲಾಖೆ ಅಧಿಕಾರಿ ಸಿ.ಬಿ ರಂಗಯ್ಯ, ಕಾರ್ಮಿಕ ನಿರೀಕ್ಷಕಿ ಮುಮ್ತಾಜ್ ಬೇಗಂ, ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ವಿ ಅಶೋಕ್, ಕರ್ನಾಟಕ ರಾಜ್ಯ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ ಸದಸ್ಯ ಮಂಗೋಟೆ ರುದ್ರೇಶ್, ಬಿಜೆಪಿ ಮುಖಂಡರಾದ ಎಸ್. ಕುಮಾರ್, ಬಿ.ಕೆ ಶ್ರೀನಾಥ್, ಎಂ. ಪ್ರಭಾಕರ್, ಶಿವಕುಮಾರ್(ಬಂಕ್), ಉದ್ಯಮಿಗಳಾದ ಎ. ಮಾಧು, ಜಿ. ಸುರೇಶ್‌ಕುಮಾರ್, ಕಣ್ಣಪ್ಪ, ಸುಂದರ್ ಬಾಬು, ಬಿ.ಎಸ್ ಗಣೇಶ್, ವಿವಿಧ ಕಾರ್ಮಿಕ ಸಂಘಟನೆಗಳ ಪ್ರಮುಖರಾದ ರಾಜೇಶ್ವರಿ, ಶಾರದಮ್ಮ, ವಸಂತ, ಎಂ. ಭೂಪಾಲ್, ಕೆ.ಎಸ್ ಸುಬ್ರಹ್ಮಣಿ, ದುಗ್ಗೇಶ್ ತೇಲ್ಕರ್, ಅರುಣ್‌ಕುಮಾರ್, ಚಂದ್ರಶೇಖರ್, ಬಾಬು, ಲಕ್ಷ್ಮಣ, ವಿಶ್ವನಾಥ್, ಸತೀಶ್‌ಗೌಡ, ಚಂದ್ರಕಲಾ, ಸುಂದರ್, ಜಯಂತಿ, ಕೃಷ್ಣಮೂರ್ತಿ, ಸಚಿನ್, ಸಮಿವುಲ್ಲಾ, ಹಫೀಜ್, ಮುರುಗನ್, ಶ್ರೀನಿವಾಸ್, ಸುರೇಶ್, ವಸಂತಿ, ಅರುಣ್, ಸಂಜಯ್‌ಕುಮಾರ್, ಮಣಿಕಂಠ, ಆರ್‍ಮುಗಂ, ತರಕಾರಿ ಮಂಜಣ್ಣ, ಮಂಜು, ಹೇಮಾವತಿ ಮತ್ತು ಪುಷ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಕವಿತಾ ಸುರೇಶ್ ಪ್ರಾರ್ಥಿಸಿದರು. ಕೆ. ಮಂಜುನಾಥ್ ಸ್ವಾಗತಿಸಿದರು. ವಿಜಯ್ ಸಿದ್ದಾರ್ಥ್ ಮತ್ತು ಅಭಿಲಾಷ್ ನಿರೂಪಿಸಿದರು. ಉದ್ಯಮಿ ಎ. ಮಾಧು ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
No comments:
Post a Comment