ಹಾನಗಲ್ ಕುಮಾರೇಶ್ವರ ಶಿವಯೋಗಿ
ಭದ್ರಾವತಿ, ಫೆ. ೧೮: ಅಖಿಲ ಭಾರತ ವೀರಶೈವ ಮಹಾಸಭಾ ವತಿಯಿಂದ ಹಾನಗಲ್ ಕುಮಾರೇಶ್ವರ ಶಿವಯೋಗಿಗಳ ಪುಣ್ಯಸ್ಮರಣೆ ಹಾಗು ಸಮಾಜದ ನೂತನ ಚುನಾಯಿತ ಪ್ರತಿನಿಧಿಗಳಿಗೆ ಸನ್ಮಾನ ಸಮಾರಂಭ ಫೆ.೧೯ರಂದು ಬೆಳಿಗ್ಗೆ ೧೧ ಗಂಟೆ ಸಿದ್ದರೂಢನಗರದ ಶ್ರೀ ಬಸವೇಶ್ವರ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ಶ್ರೀಮದ್ ರಂಭಾಪುರಿ ಶಾಖಾ ಹಿರೇಮಠ ಬಿಳಿಕಿ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಲಿದ್ದು, ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷೆ ನಂದಿನಿ ಮಲ್ಲಿಕಾರ್ಜುನ ಅಧ್ಯಕ್ಷತೆ ವಹಿಸಲಿದ್ದಾರೆ. ಶಾಸಕ ಬಿ.ಕೆ ಸಂಗಮೇಶ್ವರ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ನಗರಸಭೆ ಅಧ್ಯಕ್ಷೆ ಗೀತಾರಾಜ್‌ಕುಮಾರ್ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ.
ಹಟ್ಟಿ ಚಿನ್ನದ ಗಣಿ ನಿಗಮದ ನಿರ್ದೇಶಕ ಕೂಡ್ಲಿಗೆರೆ ಹಾಲೇಶ್, ಕರ್ನಾಟಕ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ದೇಶಕ ಮಂಗೋಟೆ ರುದ್ರೇಶ್, ನಗರಸಭೆ ಸದಸ್ಯರಾದ ಬಿ.ಕೆ ಮೋಹನ್, ಬಿ.ಎಂ ಮಂಜುನಾಥ್(ಟೀಕು), ಅನುಪಮ ಚನ್ನೇಶ್, ನಾಮನಿರ್ದೇಶಕ ಸದಸ್ಯ ರವಿಕುಮಾರ್ ಮತ್ತು ಅಖಿಲ ಭಾರತ ವೀರಶೈವ ಮಹಾಸಭಾ ತಾಲೂಕು ಮಾಜಿ ಅಧ್ಯಕ್ಷ ಸಿದ್ದಲಿಂಗಯ್ಯರವರಿಗೆ ಸನ್ಮಾನ ನಡೆಯಲಿದೆ.
No comments:
Post a Comment