ಬಿ. ನಂಜೇಗೌಡ
ಭದ್ರಾವತಿ, ಮಾ. ೧೩: ಮಾಸ್ಟರ್ ಗೇಮ್ಸ್ ಫೆಡರೇಷನ್(ಇಂಡಿಯಾ) ಮತ್ತು ಕರ್ನಾಟಕ ಮಾಸ್ಟರ್‍ಸ್ ಗೇಮ್ಸ್ ಅಸೋಸಿಯೇಷನ್ ಸಹಕಾರದೊಂದಿಗೆ ಉಡುಪಿ ಜಿಲ್ಲಾ ಮಾಸ್ಟರ್ ಗೇಮ್ಸ್ ಅಸೋಸಿಯೇಷನ್ ವತಿಯಿಂದ ಉಡುಪಿ ಅಜರ್ಕಾಡ್ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಕರ್ನಾಟಕ ರಾಜ್ಯ ೩ನೇ ಮಾಸ್ಟರ್ ಗೇಮ್ಸ್ ಪಂದ್ಯಾವಳಿಯಲ್ಲಿ ನಗರದ ಹಿರಿಯ ಕ್ರೀಡಾಪಟು, ನಿವೃತ್ತ ಸಬ್‌ಇನ್ಸ್‌ಪೆಕ್ಟರ್ ಬಿ. ನಂಜೇಗೌಡ ಚಿನ್ನ ಹಾಗು ಬೆಳ್ಳಿ ಪದಕ ಪಡೆದುಕೊಂಡಿದ್ದಾರೆ.
೮೦೦ ಮೀಟರ್ ಹಾಗು ೪೦೦ ಮೀಟರ್ ಹರ್ಡಲ್ಸ್‌ನಲ್ಲಿ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಹಾಗು ಉದ್ದ ಜಿಗಿತದಲ್ಲಿ ದ್ವಿತೀಯ ಸ್ಥಾನದೊಂದಿಗೆ ಬೆಳ್ಳಿ ಪದಕ ತಮ್ಮದಾಗಿಸಿಕೊಂಡಿದ್ದಾರೆ.
೭೫ರ ವಯೋಮಾನದ ನಂಜೇಗೌಡರವರು ರಾಷ್ಟ್ರ, ರಾಜ್ಯ ಹಾಗು ಜಿಲ್ಲಾಮಟ್ಟ ಪಂದ್ಯಾವಳಿಗಳಲ್ಲಿ ಭಾಗವಹಿಸಿ ಇದುವರೆಗೂ 30ಕ್ಕೂ ಹೆಚ್ಚು ಪದಕಗಳನ್ನು ಪಡೆದುಕೊಂಡಿದ್ದಾರೆ. ಇವರ ಸಾಧನೆಗೆ ನಗರದ ಗಣ್ಯರು, ಕ್ರೀಡಾಪಟುಗಳು ಅಭಿನಂದಿಸಿದ್ದಾರೆ.
No comments:
Post a Comment