Thursday, March 17, 2022

ಮಾ.೧೮ರಂದು ಸುಣ್ಣದಹಳ್ಳಿ ವೀರಾಂಜನೇಯ ಸ್ವಾಮಿ ರಥೋತ್ಸವ

ಭದ್ರಾವತಿ ತಾಲೂಕಿನ ಪುರಾಣ ಪ್ರಸಿದ್ದ ಸುಣ್ಣದಹಳ್ಳಿ ಶ್ರೀ ಕ್ಷೇತ್ರದ ವೀರಾಂಜನೇಯ ಸ್ವಾಮಿ ದೇವಸ್ಥಾನ
    ಭದ್ರಾವತಿ, ಮಾ. ೧೭: ಪ್ರತಿ ವರ್ಷದಂತೆ ಈ ಬಾರಿ ಸಹ ತಾಲೂಕಿನ ಪುರಾಣ ಪ್ರಸಿದ್ದ ಸುಣ್ಣದಹಳ್ಳಿ ಶ್ರೀ ಕ್ಷೇತ್ರದ ವೀರಾಂಜನೇಯ ಸ್ವಾಮಿ ರಥೋತ್ಸವ ಮಾ.೧೯ರಂದು ಮಧ್ಯಾಹ್ನ ೧೨ ಗಂಟೆಗೆ ನಡೆಯಲಿದೆ.
    ರಥೋತ್ಸವದ ಅಂಗವಾಗಿ ಗುರುವಾರ ಬೆಳಿಗ್ಗೆ ನಿರ್ಮಾಲ್ಯ ವಿಸರ್ಜನೆ, ಪಂಚಾಮೃತ ಅಭಿಷೇಕ ಮತ್ತು ಮಹಾಮಂಗಳಾರತಿ, ಸಂಜೆ ಸ್ವಸ್ತಿ ಪುಣ್ಯವಾಚನ, ವಾಸ್ತು ರಕ್ಷೆಘ್ನಹೋಮ, ವಾಸ್ತು ಪೂಜೆ ದಿಗ್ ಬಲಿ ಯಾಗಶಾಲಾ ಪ್ರದೇಶ ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆಗಳು ಜರುಗಿದವು.
    ಶುಕ್ರವಾರ ಬೆಳಿಗ್ಗೆ ನಿರ್ಮಾಲ್ಯ ವಿಸರ್ಜನೆ, ಪಂಚಾಮೃತ ಅಭಿಷೇಕ ಮತ್ತು ಮಹಾಮಂಗಳಾರತಿ, ಅಂಕುರಾರ್ಪಣೆ, ನವಗ್ರಹ ಹೋಮ, ಗರುಡಹೋಮ, ಛೇರಿತಾಡನ, ಕಂಕಣ ಬಂಧನ, ಧ್ವಜಾರೋಹಣ, ಮಹಾಮಂಗಳಾರತಿ ಹಾಗು ಸಂಜೆ ಅಗ್ನಿ ಜನನ, ರಂಗಪೂಜೆ, ತಂತ್ರಬಲಿ ಮತ್ತು ಮಂಗಳಾರತಿ ಸೇರಿದಂತೆ ಇನ್ನಿತರ ಆಚರಣೆಗಳು ಜರುಗಲಿವೆ.
    ಶನಿವಾರ ಬೆಳಿಗ್ಗೆ ನಿರ್ಮಾಲ್ಯ ವಿಸರ್ಜನೆ, ಪಂಚಾಮೃತ ಅಭಿಷೇಕ ಮತ್ತು ಮಹಾಮಂಗಳಾರತಿ, ರಥಶುದ್ಧಿ ಪ್ರಧಾನ ಹೋಮ, ರಥೋತ್ಸವ ನನಂತರ ಅನ್ನ ಸಂಂತಪನೆ ಕಾರ್ಯಕ್ರಮಗಳು ನಡೆಯಲಿವೆ.
    ಉಳಿದಂತೆ ಮಾ.೨೦ ಮತ್ತು ೨೧ರಂದು ವಿವಿಧ ಧಾರ್ಮಿಕ ಆಚರಣೆಗಳು ಜರುಗಲಿದ್ದು, ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಕೋರಲಾಗಿದೆ.

No comments:

Post a Comment