ಕಳೆದ ೨-೩ ದಿನಗಳಿಂದ ಸ್ವಲ್ಪಮಟ್ಟಿಗೆ ಅನಾರೋಗ್ಯಕ್ಕೆ ಒಳಗಾಗಿ ಮನೆಯಲ್ಲಿಯೇ ವಿಶ್ರಾಂತಿ ಪಡೆಯುತ್ತಿರುವ ಶಾಸಕ ಬಿ.ಕೆ ಸಂಗಮೇಶ್ವರ್‌ನ್ನು ಶುಕ್ರವಾರ ಮಾಜಿ ಸಚಿವ ಎಂ.ಆರ್ ಸೀತರಾಮ್ ಭೇಟಿಯಾಗಿ ಆರೋಗ್ಯ ವಿಚಾರಿಸಿದರು.
ಭದ್ರಾವತಿ, ಮಾ. ೧೮: ಕಳೆದ ೨-೩ ದಿನಗಳಿಂದ ಸ್ವಲ್ಪಮಟ್ಟಿಗೆ ಅನಾರೋಗ್ಯಕ್ಕೆ ಒಳಗಾಗಿ ಮನೆಯಲ್ಲಿಯೇ ವಿಶ್ರಾಂತಿ ಪಡೆಯುತ್ತಿರುವ ಶಾಸಕ ಬಿ.ಕೆ ಸಂಗಮೇಶ್ವರ್‌ನ್ನು ಶುಕ್ರವಾರ ಮಾಜಿ ಸಚಿವ ಎಂ.ಆರ್ ಸೀತರಾಮ್ ಭೇಟಿಯಾಗಿ ಆರೋಗ್ಯ ವಿಚಾರಿಸಿದರು.
ಖಾಸಗಿ ಕಾರ್ಯಕ್ರಮ ನಿಮಿತ್ತ ನಗರಕ್ಕೆ ಆಗಮಿಸಿದ್ದ ಸೀತರಾಮ್‌ರವರು ಸಂಗಮೇಶ್ವರ್ ನಿವಾಸಕ್ಕೆ ತೆರಳಿ ಆರೋಗ್ಯ ವಿಚಾರಿಸುವ ಮೂಲಕ ಹೆಚ್ಚಿನ ಕಾಳಜಿವಹಿಸುವಂತೆ ಸಲಹೆ ನೀಡಿದರು.
ಸಹೋದರರಾದ ಬಿ.ಕೆ ಜಗನ್ನಾಥ್, ಬಿ.ಕೆ ಮೋಹನ್, ಪುತ್ರರಾದ ಬಿ.ಎಸ್ ಗಣೇಶ್, ಬಸವೇಶ್, ಬಿ.ಎಂ ಮಂಜುನಾಥ್, ಮುಖಂಡರಾದ ಬದರಿನಾರಾಯಣ, ಬಿ. ಗಂಗಾಧರ್, ಅಣ್ಣೋಜಿರಾವ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment