ಬೆಂಗಳೂರಿನ ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆ ವತಿಯಿಂದ ಕೇಂದ್ರ ಸರ್ಕಾರದ ಸ್ವಚ್ಛತಾ ಕ್ರಿಯಾ ಯೋಜನೆಯಡಿಯಲ್ಲಿ ಇಕೋ-ಕ್ಲಬ್ ಶಾಲಾ ವಿದ್ಯಾರ್ಥಿಗಳಿಗೆ ತಾಲೂಕು ಮಟ್ಟದ ಪ್ರಬಂಧ ಸ್ಪರ್ಧೆ ಬುಧವಾರ ಭದ್ರಾವತಿ ಕ್ಷೇತ್ರ ಶಿಕ್ಷಣ ಸಂಪನ್ಮೂಲ ಸಮನ್ವಯಾಧಿಕಾರಿಗಳ ಕಛೇರಿ(ಬಿಆರ್‌ಸಿ) ಆವರಣದಲ್ಲಿ ಆಯೋಜಿಸಲಾಗಿತ್ತು.
ಭದ್ರಾವತಿ, ಮಾ. ೯: ಬೆಂಗಳೂರಿನ ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆ ವತಿಯಿಂದ ಕೇಂದ್ರ ಸರ್ಕಾರದ ಸ್ವಚ್ಛತಾ ಕ್ರಿಯಾ ಯೋಜನೆಯಡಿಯಲ್ಲಿ ಇಕೋ-ಕ್ಲಬ್ ಶಾಲಾ ವಿದ್ಯಾರ್ಥಿಗಳಿಗೆ ತಾಲೂಕು ಮಟ್ಟದ ಪ್ರಬಂಧ ಸ್ಪರ್ಧೆ ಬುಧವಾರ ನಗರದ ಕ್ಷೇತ್ರ ಶಿಕ್ಷಣ ಸಂಪನ್ಮೂಲ ಸಮನ್ವಯಾಧಿಕಾರಿಗಳ ಕಛೇರಿ(ಬಿಆರ್‌ಸಿ) ಆವರಣದಲ್ಲಿ ಆಯೋಜಿಸಲಾಗಿತ್ತು.
ತಾಲೂಕಿನ ಇಕೋ ಕ್ಲಬ್ ಶಾಲೆಗಳ ೮ ಮತ್ತು ೯ನೇ ತರಗತಿ ವಿದ್ಯಾರ್ಥಿಗಳು ಭಾಗವಹಿಸಿದ್ದರು. ನೂತನ ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಂದ್ರಪ್ಪ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಸ್ಪರ್ಧೆಗಳಲ್ಲಿ ಪಾಲ್ಗೊಳ್ಳುವುದು ಮುಖ್ಯ ಎಂದರು.
ಕ್ಷೇತ್ರ ಶಿಕ್ಷಣ ಸಂಪನ್ಮೂಲ ಸಮನ್ವಯಾಧಿಕಾರಿ ಗಣೇಶ್ ಅಧ್ಯಕ್ಷತೆ ವಹಿಸಿದ್ದರು. ಶಕ್ತಿ/ಇಂಧನ ಸಂರಕ್ಷಣೆ ಕುರಿತು ಜಾಗೃತಿ ಮೂಡಿಸುವ ಪ್ರಬಂಧ ಸ್ಪರ್ಧೆಯನ್ನು ಕನ್ನಡ ಮತ್ತು ಆಂಗ್ಲ ಭಾಷೆಯಲ್ಲಿ ಆಯೋಜಿಸಲಾಗಿತ್ತು.
ಸ್ಪರ್ಧೆಯ ನೋಡಲ್ ಅಧಿಕಾರಿ, ಕ್ಷೇತ್ರ ಸಂಪನ್ಮೂಲ ವ್ಯಕ್ತಿ ನವೀದ್ ಪರ್ವೀಜ್ ಅಹಮದ್ ಸ್ವಾಗತಿಸಿದರು. ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಮನ್ಸೂರ್ ಅಹಮದ್ ವಂದಿಸಿದರು. ಶಿಕ್ಷಣ ಸಂಯೋಜಕ ರವಿಕುಮಾರ್ ಹಾಗು ಶಿಕ್ಷಕರು ಮತ್ತು ಕಛೇರಿ ಸಿಬ್ಬಂದಿ ವರ್ಗದವರು ಉಪಸ್ಥಿತರಿದದರು.
Superb... Thank you so much Respected sir ji
ReplyDelete