ಬೆಂಗಳೂರಿನ ಶಿವಜ್ಯೋತಿ ಯೋಗ ಕೇಂದ್ರದ ವತಿಯಿಂದ ಆಯೋಜಿಸಲಾಗಿದ್ದ ೩ ದಿನಗಳ ಯೋಗೋತ್ಸವ ಆನ್‌ಲೈನ್ ಯೋಗ ಸ್ಪರ್ಧೆಯಲ್ಲಿ ಭದ್ರಾವತಿ ಆರ್ಟ್ ಆಫ್ ಲೀವಿಂಗ್ ಯೋಗ ಕೇಂದ್ರದ ಯೋಗಪಟುಗಳು ಭಾಗವಹಿಸಿ ಪ್ರಶಸ್ತಿ ಪಡೆದುಕೊಂಡಿದ್ದಾರೆ.
ಭದ್ರಾವತಿ, ಮಾ. ೮: ಬೆಂಗಳೂರಿನ ಶಿವಜ್ಯೋತಿ ಯೋಗ ಕೇಂದ್ರದ ವತಿಯಿಂದ ಆಯೋಜಿಸಲಾಗಿದ್ದ ೩ ದಿನಗಳ ಯೋಗೋತ್ಸವ ಆನ್‌ಲೈನ್ ಯೋಗ ಸ್ಪರ್ಧೆಯಲ್ಲಿ ನಗರದ ಆರ್ಟ್ ಆಫ್ ಲೀವಿಂಗ್ ಯೋಗ ಕೇಂದ್ರದ ಯೋಗಪಟುಗಳು ಭಾಗವಹಿಸಿ ಪ್ರಶಸ್ತಿ ಪಡೆದುಕೊಂಡಿದ್ದಾರೆ.
ಯೋಗ ಪಟುಗಳಾದ ನಾಗಮಣಿ, ಲಕ್ಷ್ಮೀದೇವಿ ಮಂಜುಳ, ಶೈಲಾ ಸುರೇಶ್, ಲಕ್ಷ್ಮಿ ಮತ್ತು ಪುಷ್ಪ ಒಟ್ಟು ೬ ಮಂದಿ ಭಾಗವಹಿಸಿ ಪ್ರಶಸ್ತಿ ತಮ್ಮದಾಗಿಸಿಕೊಂಡಿದ್ದಾರೆ. ಯೋಗ ಕೇಂದ್ರದ ಗುರು ಮಹೇಶ್ ವಿಜೇತ ಯೋಗಪಟುಗಳಿಗೆ ಬಹುಮಾನ ಮತ್ತು ಪ್ರಶಸ್ತಿ ಪತ್ರ ವಿತರಿಸಿದರು. ಪ್ರಶಸ್ತಿ ವಿಜೇತರನ್ನು ನಗರ ವಿವಿಧ ಸಂಘ-ಸಂಸ್ಥೆಗಳು, ಗಣ್ಯರು ಅಭಿನಂದಿಸಿದ್ದಾರೆ.
No comments:
Post a Comment